Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:24 - ಕನ್ನಡ ಸತ್ಯವೇದವು J.V. (BSI)

24 ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೇದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನ ಮಕ್ಕಳೇ, ಹೀಗೆ ಮಾಡಬಾರದು, ನೀವು ಯೆಹೋವನ ಜನರನ್ನು ದುರ್ಮಾರ್ಗಕ್ಕೆ ಎಳೆಯುವವರಾಗಿದ್ದೀರೆಂದು ಕೇಳಿದ್ದೇನೆ; ಇದು ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಮಕ್ಕಳೇ, ಹೀಗೆ ಮಾಡಬಾರದು. ನೀವು ಸರ್ವೇಶ್ವರನ ಜನರನ್ನು ದುರ್ಮಾರ್ಗಕ್ಕೆ ಎಳೆಯುತ್ತಿದ್ದೀರೆಂದು ಕೇಳಿದ್ದೇನೆ. ಇದು ಸರಿಯಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಮಕ್ಕಳೇ, ಇಂತಹ ದುಷ್ಕೃತ್ಯಗಳನ್ನು ಮಾಡಬೇಡಿ. ಯೆಹೋವನ ಜನರು ನಿಮ್ಮ ಬಗ್ಗೆ ಕೆಟ್ಟ ಸಂಗತಿಗಳನ್ನು ಮಾತಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನನ್ನ ಮಕ್ಕಳೇ, ಹಾಗೆ ಮಾಡಬೇಡಿರಿ. ಏಕೆಂದರೆ ಯೆಹೋವ ದೇವರ ಜನರಲ್ಲಿ ನೀವು ಮಾಡಿರುವ ಕಾರ್ಯಗಳ ವರ್ತಮಾನವು ಹರಡಿದ್ದು ಒಳ್ಳೆಯದಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:24
16 ತಿಳಿವುಗಳ ಹೋಲಿಕೆ  

ಆದರೆ ನಿನ್ನ ಮೇಲೆ ಒಂದು ತಪ್ಪುಹೊರಿಸಬೇಕಾಗುತ್ತದೆ; ಅದೇನಂದರೆ ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ಜಾರತ್ವಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ಸೇರಿಸುತ್ತಿರುವಲ್ಲಿ ನೀನು ಅವಳನ್ನು ತಡೆಯದೆ ಬಿಟ್ಟಿರುವದೇ.


ನಾವು ಸಹ ಅವನ ವಿಷಯದಲ್ಲಿ ಸಾಕ್ಷಿ ಹೇಳುವವರಾಗಿದ್ದೇವೆ; ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀನು ಬಲ್ಲೆ.


ತಪ್ಪಾದ ಮಾರ್ಗದಲ್ಲಿ ನಡೆಯುವವರ ಸಹವಾಸದಿಂದ ಹೊಸದಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಬಂಡುಬಂಡಾದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು.


ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.


ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.


ತೊಡಕುಗಳು ಬರುವದರಿಂದ ಲೋಕಕ್ಕೆ ಎಷ್ಟೋ ಕೇಡು! ತೊಡಕುಗಳು ಹೇಗಾದರೂ ಬರುವವು. ಆದಾಗ್ಯೂ ಯಾವ ಮನುಷ್ಯನಿಂದ ತೊಡಕು ಬರುತ್ತದೋ, ಅವನ ಗತಿಯನ್ನು ಏನು ಹೇಳಲಿ!


ನೀವೋ ದಾರಿತಪ್ಪಿದ್ದೀರಿ; ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ, ಇದು ಸೇನಾಧೀಶ್ವರ ಯೆಹೋವನ ನುಡಿ.


ಆದರೆ ಅವನು ಇಸ್ರಾಯೇಲ್‍ದೇವರಾದ ಯೆಹೋವನ ಧರ್ಮಶಾಸ್ತ್ರವನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವದಕ್ಕೆ ಪ್ರಯತ್ನಿಸಲಿಲ್ಲ; ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲಿಲ್ಲ.


ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲ್ಯರನ್ನೂ ಪಾಪಕ್ಕೆ ಪ್ರೇರಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನು ರೇಗಿಸಿದ್ದರಿಂದ ಹೀಗಾಯಿತು.


ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲ್ಯರಲ್ಲಿ ನಡಿಸುತ್ತಿರುವದನ್ನೂ ಅವರು ದೇವದರ್ಶನದ ಗುಡಾರದ ಬಾಗಲಿನಲ್ಲಿ ಸೇವೆಮಾಡುವ ಸ್ತ್ರೀಯರೊಡನೆ ಸಂಗವಿುಸುತ್ತಿರುವದನ್ನೂ ಕೇಳಿ ಅವರಿಗೆ -


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಎಲ್ಲಾ ಜನರಿಂದಲೂ ನಿಮ್ಮ ದುಷ್ಕೃತ್ಯಗಳನ್ನು ಕೇಳುತ್ತಿರುತ್ತೇನೆ. ಯಾಕೆ ಹೀಗೆ ಮಾಡುತ್ತೀರಿ?


ಇವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು