Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:25 - ಕನ್ನಡ ಸತ್ಯವೇದವು J.V. (BSI)

25 ಮನುಷ್ಯನು ಮನುಷ್ಯನಿಗೆ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ವಹಿಸುವವರಾರು ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಯೆಹೋವನು ಅವರನ್ನು ಸಾಯಿಸಬೇಕೆಂದಿದ್ದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 “ಮನುಷ್ಯನು ಮನುಷ್ಯರಿಗೆ ಅಪರಾಧಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುವನು; ಆದರೆ ಮನುಷ್ಯನು ಯೆಹೋವನಿಗೆ ಅಪರಾಧಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ, ಯಾಕೆಂದರೆ ಯೆಹೋವನು ಅವರನ್ನು ನಾಶಮಾಡಲು ನಿರ್ಧರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಮನುಷ್ಯನು ಮನುಷ್ಯನಿಗೆ ವಿರುದ್ಧ ಅಪರಾಧ ಮಾಡಿದರೆ ದೇವರು ಮಧ್ಯಸ್ಥಿಕೆಯನ್ನು ವಹಿಸುತ್ತಾರೆ. ಆದರೆ ಮನುಷ್ಯನು ಸರ್ವೇಶ್ವರನಿಗೆ ವಿರುದ್ಧ ಅಪರಾಧ ಮಾಡಿದರೆ ಮಧ್ಯಸ್ಥಿಕೆ ವಹಿಸುವವರಾರು?” ಎಂದು ಎಚ್ಚರಿಸಿದನು. ಆದರೂ ಅವರು ತಮ್ಮ ತಂದೆಯ ಮಾತಿಗೆ ಕಿವಿಗೊಡಲಿಲ್ಲ. ಎಂದೇ ಅವರನ್ನು ಕೊಲ್ಲಬೇಕೆಂಬುದು ಸರ್ವೇಶ್ವರನ ಚಿತ್ತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಒಬ್ಬ ಮನುಷ್ಯನು ಬೇರೊಬ್ಬನ ವಿರುದ್ಧ ಅಪರಾಧ ಮಾಡಿದರೆ, ಯೆಹೋವನು ಅವನಿಗೆ ಸಹಾಯ ಮಾಡಬಹುದು, ಆದರೆ ಒಬ್ಬ ಮನುಷ್ಯನು ಯೆಹೋವನ ವಿರುದ್ಧವೇ ಅಪರಾಧ ಮಾಡಿದರೆ, ಆಗ ಅವನಿಗೆ ಸಹಾಯ ಮಾಡುವವರು ಯಾರು?” ಎಂದು ಬುದ್ಧಿಮಾತು ಹೇಳಿದನು. ಆದರೆ ಏಲಿಯ ಮಾತನ್ನು ಅವನ ಮಕ್ಕಳು ಕೇಳಲಿಲ್ಲ. ಆದ್ದರಿಂದ ಯೆಹೋವನು ಏಲಿಯ ಮಕ್ಕಳನ್ನು ಕೊಲ್ಲಲು ನಿರ್ಧರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮನುಷ್ಯನಿಗೆ ವಿರೋಧವಾಗಿ ಮನುಷ್ಯನು ಪಾಪಮಾಡಿದರೆ, ದೇವರು ಅಪರಾಧಿಗಾಗಿ ಮಧ್ಯಸ್ಥಿಕೆಯನ್ನು ವಹಿಸುವರು. ಆದರೆ ಒಬ್ಬನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದರೆ, ಅವನಿಗೋಸ್ಕರ ವಿಜ್ಞಾಪನೆ ಮಾಡತಕ್ಕವರು ಯಾರು?” ಎಂದನು. ಆದರೂ ಅವರು ತಮ್ಮ ತಂದೆಯ ಮಾತನ್ನು ಕೇಳದೆ ಹೋದರು. ಯೆಹೋವ ದೇವರು ಅವರನ್ನು ಮರಣದಂಡನೆಗೆ ಒಪ್ಪಿಸಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:25
25 ತಿಳಿವುಗಳ ಹೋಲಿಕೆ  

ಯಾಕಂದರೆ ಸತ್ಯದ ಪರಿಜ್ಞಾನವನ್ನು ನಾವು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಇರುವದಿಲ್ಲ;


ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ನೈವೇದ್ಯಗಳಿಂದಲೂ ಎಂದಿಗೂ ಪ್ರಾಯಶ್ಚಿತ್ತವಾಗುವದಿಲ್ಲವೆಂಬದಾಗಿ ಆಣೆಯಿಟ್ಟಿದ್ದೇನೆ ಎಂದು ಹೇಳಿದನು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ಆದರೆ ಸ್ವದೇಶದವನಾಗಲಿ ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದ್ದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ; ಗದರಿಕೆಯನ್ನು ಕೇಳಲೊಲ್ಲದವನಿಗೆ ಸಾವು.


ಏಕಂದರೆ ದೇವರು ಒಬ್ಬನೇ; ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ನ್ಯಾಯವಿಚಾರಿಸುವಾಗ ಮುಖದಾಕ್ಷಿಣ್ಯಮಾಡದೆ ಅಧಿಕರನ್ನೂ ಅಲ್ಪರನ್ನೂ ಸಮನಾಗಿ ತಿಳಿಯಬೇಕು. ನೀವು ದೇವರ ಹೆಸರಿನಲ್ಲಿ ನ್ಯಾಯತೀರಿಸುವವರಾದ ಕಾರಣ ಮನುಷ್ಯರ ಮುಖವನ್ನು ನೋಡಿ ಹೆದರಬೇಡಿರಿ. ನೀವು ತೀರಿಸಲಿಕ್ಕಾಗದ ವ್ಯಾಜ್ಯಗಳನ್ನು ನನ್ನ ಬಳಿಗೆ ತರಬೇಕು; ನಾನೇ ಅವುಗಳನ್ನು ತೀರಿಸುವೆನು ಎಂದು ಹೇಳಿದೆನು.


ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸೇನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.


ಆದರೆ ಯೆಹೋವನು ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು ಹಟವನ್ನು ಹುಟ್ಟಿಸಿದದರಿಂದ ಅವನು ಸಮ್ಮತಿಸಲಿಲ್ಲ. ಅವನು ನಿವ್ಮಿುಂದ ಸೋತುಹೋಗಬೇಕೆಂಬದೇ ನಿಮ್ಮ ದೇವರಾದ ಯೆಹೋವನ ಸಂಕಲ್ಪ; ಅದು ಈಗಾಗಲೇ ನೆರವೇರಿತಲ್ಲಾ.


ಅತ್ಯಂತ ಭಯದಿಂದ ಎದುರುನೋಡತಕ್ಕ ನ್ಯಾಯತೀರ್ಪೂ ದೇವರ ವಿರೋಧಿಗಳನ್ನು ದಹಿಸುವ ತೀಕ್ಷ್ಣವಾದ ಅಗ್ನಿಯೂ ಇವೇ ನಮ್ಮ ಮುಂದೆ ಇರುವವು.


ನವ್ಮಿುಬ್ಬರ ಮೇಲೆ ಕೈಯಿಡುವವನಾಗಿಯೂ ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ.


ಬಹಳವಾಗಿ ಗದರಿಸಿದರೂ ತಗ್ಗದವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.


ಆದರೆ ಯೆಹೂದನ ಚೊಚ್ಚಲಮಗನಾದ ಏರನು ಯೆಹೋವನ ದೃಷ್ಟಿಯಲ್ಲಿ ಕೆಟ್ಟವನಾದ್ದರಿಂದ ಯೆಹೋವನು ಅವನನ್ನು ಸಾಯಿಸಿದನು.


ಈ ನಡತೆ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿದ್ದದರಿಂದ ಆತನು ಅವನನ್ನೂ ಸಾಯಿಸಿದನು.


ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ವೇದಿಯ ಮುಂದೆ ನಿಂತು ಪ್ರಮಾಣಮಾಡುವದಾದರೆ


ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು; ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ ಅವನು ಅಪರಾಧಿಯೆಂದೂ ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.


ಅರಸನು ಜನರ ಮಾತನ್ನು ಕೇಳದೆಹೋದದ್ದು ದೈವಯೋಗದಿಂದಲೇ. ಈ ಪ್ರಕಾರ ಯೆಹೋವನು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.


ಜ್ಞಾನಿಯಾದ ಮಗನು ತಂದೆಯ ಶಿಕ್ಷೆಯನ್ನು ಕೇಳುವನು: ಧರ್ಮನಿಂದಕನೋ ಗದರಿಕೆಯನ್ನು ಕೇಳನು.


ಕೊಲ್ಲುವ ಸಮಯ, ಸ್ವಸ್ಥ ಮಾಡುವ ಸಮಯ, ಕೆಡವಿಬಿಡುವ ಸಮಯ, ಕಟ್ಟುವ ಸಮಯ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು