1 ಸಮುಯೇಲ 2:28 - ಕನ್ನಡ ಸತ್ಯವೇದವು J.V. (BSI)28 ಇಸ್ರಾಯೇಲ್ಯರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವದಕ್ಕೂ ಧೂಪಹಾಕುವದಕ್ಕೂ ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವದಕ್ಕೂ ಆರಿಸಿಕೊಂಡು ಅವರಿಗೆ ಇಸ್ರಾಯೇಲ್ಯರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಇಸ್ರಾಯೇಲರ ಎಲ್ಲಾ ಕುಟುಂಬಗಳಿಂದ ಅವರನ್ನೇ ಯಾಜಕೋದ್ಯೋಗಕ್ಕೆ ಅಂದರೆ ಯಜ್ಞವನ್ನರ್ಪಿಸುವುದಕ್ಕೂ, ಧೂಪಹಾಕುವುದಕ್ಕೂ, ನನ್ನ ಸನ್ನಿಧಿಯಲ್ಲಿ ಏಫೋದನ್ನು ಧರಿಸಿಕೊಳ್ಳುವುದಕ್ಕೂ ಆರಿಸಿಕೊಂಡೆನು; ಅವರಿಗೆ ಇಸ್ರಾಯೇಲರ ಯಜ್ಞಶೇಷದ ಹಕ್ಕನ್ನು ಅನುಗ್ರಹಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಇಸ್ರಯೇಲರ ಕುಟುಂಬಗಳಲ್ಲೆಲ್ಲಾ ಅವರನ್ನೇ, ಯಾಜಕ ಸೇವಾವೃತ್ತಿಗೆ ಆರಿಸಿಕೊಂಡೆ: ಅಂದರೆ, ಬಲಿಯರ್ಪಿಸುವುದಕ್ಕೆ, ಧೂಪಾರತಿ ಎತ್ತುವುದಕ್ಕೆ ಹಾಗು ‘ಏಫೋದ’ನ್ನು ಧರಿಸಿಕೊಳ್ಳುವುದಕ್ಕೆ ಆರಿಸಿಕೊಂಡೆ; ಇಸ್ರಯೇಲರು ಅರ್ಪಿಸುವ ಬಲಿಶೇಷದ ಹಕ್ಕನ್ನೂ ಅವರಿಗೆ ಅನುಗ್ರಹಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇಸ್ರೇಲಿನ ಎಲ್ಲಾ ಕುಲಗಳಲ್ಲಿ ನಿನ್ನ ಕುಟುಂಬದವರನ್ನು ನನ್ನ ಯಾಜಕರನ್ನಾಗಿ ಆರಿಸಿಕೊಂಡೆನು. ಏಫೋದನ್ನು ಧರಿಸಿಕೊಳ್ಳುವುದಕ್ಕೂ ಯಜ್ಞವನ್ನು ಅರ್ಪಿಸುವುದಕ್ಕೂ ಧೂಪಹಾಕುವುದಕ್ಕೂ ನಾನು ಅವರನ್ನು ಆರಿಸಿಕೊಂಡೆನು. ಇಸ್ರೇಲರು ನನಗೆ ಅರ್ಪಿಸುವ ಯಜ್ಞಗಳಲ್ಲಿ ಮಾಂಸವನ್ನು ಪಡೆಯುವ ಅವಕಾಶವನ್ನೂ ನಾನು ನಿಮ್ಮ ಕುಲದವರಿಗೆ ನೀಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನನ್ನ ಬಲಿಪೀಠದ ಮೇಲೆ ಬಲಿಯನ್ನು ಅರ್ಪಿಸುವುದಕ್ಕೂ, ಧೂಪವನ್ನು ಸುಡುವುದಕ್ಕೂ, ನನ್ನ ಮುಂದೆ ಏಫೋದನ್ನು ಧರಿಸಿಕೊಂಡಿರುವುದಕ್ಕೂ, ನಾನು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ನನಗೆ ಯಾಜಕನಾಗಿರಬೇಕೆಂದು ನಾನು ಅವನನ್ನು ಆಯ್ದುಕೊಳ್ಳಲಿಲ್ಲವೋ? ನಿನ್ನ ತಂದೆಯ ಮನೆಗೆ ಇಸ್ರಾಯೇಲರು ಮಾಡುವ ದಹನಬಲಿಗಳನ್ನೆಲ್ಲಾ ಕೊಡಲಿಲ್ಲವೋ? ಅಧ್ಯಾಯವನ್ನು ನೋಡಿ |