1 ಸಮುಯೇಲ 2:3 - ಕನ್ನಡ ಸತ್ಯವೇದವು J.V. (BSI)3 ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ಇನ್ನು ಮುಂದೆ ಗರ್ವದಿಂದ ಮಾತನಾಡಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗಿನೋಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇನ್ನು ನಿಲ್ಲಲಿ ಗರ್ವದ ಮಾತು ಬಾಯಿಂದ ಬರದಿರಲಿ ಸೊಕ್ಕಿನ ಸೊಲ್ಲು; ಸರ್ವೇಶ್ವರನಾದ ದೇವನೇ ಸರ್ವಜ್ಞನು. ಮಾನವಕ್ರಿಯೆಗಳ ತೂಕ ನೋಡುವಾತನವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಇನ್ನು ಮುಂದೆ ಬಡಾಯಿಕೊಚ್ಚಬೇಡಿ! ಸೊಕ್ಕಿನ ಮಾತುಗಳನ್ನು ಆಡಬೇಡಿ! ಏಕೆಂದರೆ ಯೆಹೋವನು ಪ್ರತಿಯೊಂದನ್ನು ಬಲ್ಲನು. ಆತನು ಮನುಷ್ಯರನ್ನು ಮುನ್ನಡೆಸುತ್ತಾನೆ ಮತ್ತು ತೂಗಿ ನೋಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಇನ್ನು ಮೇಲೆ ಗರ್ವದಿಂದ ಮಾತನಾಡಬೇಡಿರಿ. ನಿಮ್ಮ ಬಾಯಿಂದ ಕಠಿಣ ಮಾತು ಹೊರಡದಿರಲಿ. ಏಕೆಂದರೆ ಯೆಹೋವ ದೇವರು ತಿಳುವಳಿಕೆಯುಳ್ಳ ದೇವರು. ಅವರು ಮನುಷ್ಯರ ಕಾರ್ಯಗಳನ್ನು ತೂಗಿನೋಡುವರು. ಅಧ್ಯಾಯವನ್ನು ನೋಡಿ |