1 ಸಮುಯೇಲ 2:30 - ಕನ್ನಡ ಸತ್ಯವೇದವು J.V. (BSI)30 ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 “ನಿಮ್ಮ ತಂದೆಯ ಕುಟುಂಬವು ಸರ್ವಕಾಲವೂ ಆತನ ಸೇವೆ ಮಾಡುವುದೆಂದು ಇಸ್ರೇಲಿನ ದೇವರಾದ ಯೆಹೋವನು ವಾಗ್ದಾನ ಮಾಡಿದ್ದನು. ಆದರೆ ಈಗ ಯೆಹೋವನು ಹೀಗೆನ್ನುತ್ತಾನೆ: ‘ಅದೆಂದಿಗೂ ಸಾಧ್ಯವಿಲ್ಲ. ನನ್ನನ್ನು ಸನ್ಮಾನಿಸುವವರನ್ನು ನಾನೂ ಸನ್ಮಾನಿಸುತ್ತೇನೆ. ಆದರೆ ನನ್ನನ್ನು ತಿರಸ್ಕರಿಸುವವರನ್ನು ನಾನೂ ತಿರಸ್ಕರಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 “ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು. ಅಧ್ಯಾಯವನ್ನು ನೋಡಿ |