Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:34 - ಕನ್ನಡ ಸತ್ಯವೇದವು J.V. (BSI)

34 ಇದೆಲ್ಲಾ ನೆರವೇರುವದೆಂಬದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಫೀನೆಹಾಸರು ಒಂದೇ ದಿವಸದಲ್ಲಿ ಸಾಯುವದೇ ಗುರುತಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಇದೆಲ್ಲಾ ನೆರವೇರುವುದೆಂಬುದಕ್ಕೆ ನಿನ್ನ ಮಕ್ಕಳಾದ ಹೊಫ್ನಿ ಹಾಗೂ ಫೀನೆಹಾಸರು ಒಂದೇ ದಿನದಲ್ಲಿ ಸಾಯುವುದೇ ಗುರುತಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಇದೆಲ್ಲಾ ನೆರವೇರುವುದು ಎಂಬುದಕ್ಕೆ ಗುರುತಾಗಿ ನಿನ್ನ ಮಕ್ಕಳಾದ ಹೊಫ್ನಿ ಹಾಗು ಫೀನೆಹಾಸ್ ಒಂದೇ ದಿನದಲ್ಲಿ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಈ ಸಂಗತಿಗಳು ನಿಜವಾಗುತ್ತವೆಯೆಂದು ತೋರಿಸಲು ನಾನು ನಿನಗೊಂದು ಗುರುತನ್ನು ಕೊಡುವೆನು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಮತ್ತು ಫೀನೆಹಾಸರು ಒಂದೇ ದಿನದಲ್ಲಿ ಸಾಯುವರು. ಅದೇ ಆ ಗುರುತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 “ ‘ಇದಲ್ಲದೆ ನಿನಗೆ ಗುರುತಾಗಿ ಹೊಫ್ನಿಯು, ಫೀನೆಹಾಸನು ಎಂಬ ಇಬ್ಬರು ಮಕ್ಕಳು ಒಂದೇ ದಿವಸದಲ್ಲಿ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:34
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು - ನನ್ನ ಮಾತು ಯೆಹೋವನದೆಂಬದಕ್ಕೆ ವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದು ಹೋಗುವದೇ ಗುರುತಾಗಿರುವದು ಎಂದು ಹೇಳಿದನು.


ದೇವರ ಮಂಜೂಷವು ಶತ್ರುವಶವಾಯಿತು; ಏಲಿಯ ಮಕ್ಕಳಾದ ಹೊಫ್ನಿ ಫೀನೆಹಾಸರು ಹತರಾದರು.


ಅವನು ಏಲಿಗೆ - ಇಸ್ರಾಯೇಲ್ಯರು ಫಿಲಿಷ್ಟಿಯರಿಗೆ ಬೆನ್ನು ತೋರಿಸಿದರು; ಮಹಾಸಂಹಾರವಾಯಿತು. ನಿನ್ನ ಇಬ್ಬರು ಮಕ್ಕಳಾದ ಹೊಫ್ನಿ ಫೀನೆಹಾಸರು ಸತ್ತರು; ದೇವರ ಮಂಜೂಷವು ಶತ್ರುವಶವಾಯಿತು ಎಂದು ತಿಳಿಸಿದನು.


ನೀನು ನಿನ್ನ ಮನೆಗೆ ಹೋಗು; ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.


ಏಲಿಯ ಮನೆಯನ್ನು ಕುರಿತು ತಿಳಿಸಿದ್ದೆಲ್ಲವನ್ನೂ ಆ ದಿನದಲ್ಲಿ ತಪ್ಪದೆ ನೆರವೇರಿಸುವೆನು.


ಆತನು ನಿಮಗೆ ಗೊತ್ತಾಗುವದಕ್ಕೆ ಗುರುತೇನಂದರೆ - ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವದನ್ನು ಕಾಣುವಿರಿ ಎಂದು ಹೇಳಿದನು.


ನಾನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದುಹಾಕದೆ ಒಬ್ಬನನ್ನಾದರೂ ಉಳಿಸಿದರೆ ಅವನು ನಿನ್ನ ಕಣ್ಗೇಡಿಗೂ ಮನೋವ್ಯಥೆಗೂ ಕಾರಣನಾಗುವನು. ನಿನ್ನ ಸಂತಾನದವರೆಲ್ಲರೂ ಕತ್ತಿಯಿಂದ ಸಂಹೃತರಾಗುವರು.


ಈ ಗುರುತುಗಳೆಲ್ಲಾ ಸಂಭವಿಸಿದಾಗ ನಿನಗೆ ಅನುಕೂಲವಿದ್ದದ್ದನ್ನು ನಡಿಸು; ದೇವರು ನಿನ್ನ ಸಂಗಡ ಇದ್ದಾನೆ.


ದೇವರ ಮಂಜೂಷವು ಶತ್ರುವಶವಾದದರಿಂದಲೂ ಮಾವನೂ ಗಂಡನೂ ಮೃತಿ ಹೊಂದಿದರಿಂದಲೂ - ಮಹಿಮೆಯು ಇಸ್ರಾಯೇಲ್ಯರನ್ನು ಬಿಟ್ಟುಹೋಯಿತೆಂದು ಹೇಳಿ ಆ ಕೂಸಿಗೆ ಈಕಾಬೋದ್ ಎಂದು ಹೆಸರಿಟ್ಟಳು.


ದೇವರ ಮಂಜೂಷವು ಶತ್ರುವಶವಾದದರಿಂದಲೇ ಇಸ್ರಾಯೇಲ್ಯರ ಮಹಿಮೆಯು ಹೋಯಿತೆಂದು ಹೇಳಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು