Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 2:36 - ಕನ್ನಡ ಸತ್ಯವೇದವು J.V. (BSI)

36 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡಬಿದ್ದು - ನಮಗೆ ಒಂದು ದುಡ್ಡನ್ನೂ ರೊಟ್ಟಿಯ ಚೂರನ್ನೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವದಕ್ಕಾದರೂ ನಮ್ಮನ್ನು ಸೇರಿಸಿಕೋ ಎಂದು ಅವನನ್ನು ಬೇಡಿಕೊಳ್ಳುವರು ಎಂಬದೇ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ನಿನ್ನ ಮನೆಯಲ್ಲಿ ಅಳಿದು ಉಳಿದವರು ಬಂದು ಅವನ ಮುಂದೆ ಅಡ್ಡಬೀಳುವರು; ‘ನಮಗೊಂದು ಬೆಳ್ಳಿಕಾಸನ್ನಾದರೂ ರೊಟ್ಟಿ ಚೂರನ್ನಾದರೂ ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ದೇವಸ್ಥಾನದ ಸೇವೆಯಲ್ಲಿ ಯಾವುದಕ್ಕಾದರು ನಮ್ಮನ್ನು ಸೇರಿಸಿಕೋ’ ಎಂದು ಬೇಡಿಕೊಳ್ಳುವರು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ನಿನ್ನ ಕುಟುಂಬದವರಲ್ಲಿ ಉಳಿದವರೆಲ್ಲ ಬಂದು ಈ ಯಾಜಕನಿಗೆ ಅಡ್ಡಬೀಳುವರು. ಈ ಜನರೆಲ್ಲ ಅವನಲ್ಲಿ ಬಿಡಿಕಾಸನ್ನೂ ರೊಟ್ಟಿಯ ಚೂರನ್ನೂ ಬೇಡುವರು. ಅವರೆಲ್ಲ, “ನಮಗೆ ದೇವಸ್ಥಾನದಲ್ಲಿ ಯಾಜಕನ ಹುದ್ದೆಯನ್ನು ಕೊಡು, ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂದು ಬೇಡಿಕೊಳ್ಳುವರು”’” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಆಗ ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡಬಿದ್ದು, ಒಂದು ಬೆಳ್ಳಿಯ ಹಣವನ್ನೂ, ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ, “ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆಯಲ್ಲಿ ಸೇರಿಸಿಕೋ, ಎಂದು ಹೇಳುವರು,” ಎಂದರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 2:36
9 ತಿಳಿವುಗಳ ಹೋಲಿಕೆ  

ಈಹೊತ್ತು ನಿನ್ನನ್ನು ಕೊಲ್ಲಿಸುವದಿಲ್ಲ ಎಂದು ಹೇಳಿ ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತಳ್ಳಿಬಿಟ್ಟನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, [ಈ ಸೇವೆಯು] ಎಷ್ಟೋ ಬೇಸರವೆಂದು ನೀವು ಅಂದುಕೊಂಡು ಅದನ್ನು ಛೀಗುಟ್ಟುತ್ತೀರಿ; ಕಳವಿನ ಪಶುವನ್ನೂ ಕುಂಟಾದದ್ದನ್ನೂ ರೋಗಿಯಾದದ್ದನ್ನೂ ತಂದೊಪ್ಪಿಸುತ್ತೀರಿ; ಇಂಥ ನೈವೇದ್ಯವನ್ನು ತಂದೊಪ್ಪಿಸುತ್ತಿರುವಲ್ಲಿ ನಾನು ಅದನ್ನು ನಿಮ್ಮ ಕೈಯಿಂದ ಸ್ವೀಕರಿಸಲೋ; ಇದು ಯೆಹೋವನ ನುಡಿ.


ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು.


ಬಾಲಕನಾದ ಸಮುವೇಲನು ಏಲಿಯ ಕೈಕೆಳಗಿದ್ದುಕೊಂಡು ಯೆಹೋವನ ಸೇವೆಮಾಡುತ್ತಿದ್ದನಷ್ಟೆ. ಆ ಕಾಲದಲ್ಲಿ ದೇವೋಕ್ತಿಗಳು ವಿರಳವಾಗಿದ್ದವು, ದೇವದರ್ಶನಗಳು ಅಪರೂಪವಾಗಿದ್ದವು.


ಕೆಟ್ಟವರು ಒಳ್ಳೆಯವರಿಗೆ ಬಾಗುವರು; ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.


ಮೀಕನು ಅವನಿಗೆ - ನೀನು ನಮ್ಮಲ್ಲಿರು; ನಮಗೆ ತಂದೆಯೂ ಯಾಜಕನೂ ಆಗು. ನಿನಗೆ ವರುಷಕ್ಕೆ ಹತ್ತು ರೂಪಾಯಿಗಳನ್ನೂ ಒಂದು ದುಸ್ತು ಬಟ್ಟೆಯನ್ನೂ ಆಹಾರವನ್ನೂ ಕೊಡುತ್ತೇನೆ ಅನ್ನಲು


ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ ಅವರಿಗೆ ಯೆರೂಸಲೇವಿುನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವದಕ್ಕೆ ಅಪ್ಪಣೆಯಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು