Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:15 - ಕನ್ನಡ ಸತ್ಯವೇದವು J.V. (BSI)

15 ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾಗಿ ನಿನ್ನ ದಯವಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂವಿುಯಿಂದ ತೆಗೆದುಹಾಕಿದ ಮೇಲಾದರೂ ಅದು ನನ್ನ ಮನೆಯಿಂದ ಅಗಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಸತ್ತನಂತರ ನನ್ನ ಮನೆಯ ಮೇಲೂ ಶಾಶ್ವತವಾಗಿ ನಿನ್ನ ದಯೆಯಿರಲಿ. ಸರ್ವೇಶ್ವರ ನಿನ್ನ ಶತ್ರುಗಳನ್ನೆಲ್ಲ ಭೂಮಿಯಿಂದ ತೆಗೆದುಹಾಕಿದ ಮೇಲೂ ಅದು ನನ್ನ ಮನೆಯಿಂದ ಅಗಲದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಕುಟುಂಬದ ಮೇಲೆ ಶಾಶ್ವತವಾಗಿ ನಿನ್ನ ದಯೆಯಿರಲಿ. ಭೂಮಿಯ ಮೇಲಿರುವ ನಿನ್ನ ಶತ್ರುಗಳೆಲ್ಲರನ್ನೂ ಯೆಹೋವನು ನಾಶಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಯೆಹೋವ ದೇವರು ದಾವೀದನ ಶತ್ರುಗಳಲ್ಲಿ ಒಬ್ಬನೂ ಇಲ್ಲದ ಹಾಗೆ ಭೂಮಿಯಿಂದ ತೆಗೆದುಬಿಟ್ಟಾಗ, ಎಂದಿಗೂ ನಿನ್ನ ದಯೆಯನ್ನು ನನ್ನ ಮನೆಯಿಂದ ತೆಗೆದುಹಾಕಬಾರದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:15
7 ತಿಳಿವುಗಳ ಹೋಲಿಕೆ  

ದಾವೀದನು ತಾನು ಸೌಲನ ಮಗನಾದ ಯೋನಾತಾನನಿಗೆ ಯೆಹೋವನ ಹೆಸರಿನಲ್ಲಿ ಮಾಡಿದ ಪ್ರಮಾಣವನ್ನು ನೆನಸಿ ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿದನು.


ಹೀಗಿರುವದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡು ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು;


ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು;


ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು ಅಂದನು.


ಅನಂತರ ಯೋನಾತಾನನು ದಾವೀದನಿಗೆ - ಸಮಾಧಾನದಿಂದ ಹೋಗು; ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ; ಆತನೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು; ಯೋನಾತಾನನು ಊರೊಳಕ್ಕೆ ಬಂದನು.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ಉಪಕಾರ ಮಾಡಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು