Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:26 - ಕನ್ನಡ ಸತ್ಯವೇದವು J.V. (BSI)

26 ಆ ದಿವಸ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಆ ದಿವಸ ಅವನ ವಿಷಯವಾಗಿ ಏನೂ ಹೇಳಲಿಲ್ಲ. “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿರಬಹುದು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು,” ಎಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೌಲನು ಆ ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ, “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿರಬಹುದು; ನಿಶ್ಚಯವಾಗಿ ಅಶುಚಿಯಾಗಿದ್ದಾನೆ,” ಎಂದು ಹೇಳಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:26
11 ತಿಳಿವುಗಳ ಹೋಲಿಕೆ  

ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣ ಯಾವನಿಗೆ ಸೋಂಕುವದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಅದಲ್ಲದೆ ಮುಂದೆ ಹೇಳಿರುವ ಜಂತುಗಳಿಂದ ನಿಮಗೆ ಅಪವಿತ್ರತೆಯುಂಟಾಗುತ್ತದೆ. ಅವುಗಳ ಹೆಣ ಯಾವನಿಗೆ ಸೋಂಕುವದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಹೌದು, ಶುಭಕರವಾಗಿದೆ; ಯೆಹೋವನಿಗೆ ಯಜ್ಞವನ್ನರ್ಪಿಸುವದಕ್ಕೆ ಬಂದಿದ್ದೇನೆ. ನೀವು ನಿಮ್ಮನ್ನು ಶುದ್ಧಪಡಿಸಿಕೊಂಡು ನನ್ನ ಜೊತೆಯಲ್ಲಿ ಯಜ್ಞಕ್ಕೆ ಬನ್ನಿರಿ ಎಂದು ಹೇಳಿ ಇಷಯನನ್ನೂ ಅವನ ಮಕ್ಕಳನ್ನೂ ಶುದ್ಧೀಕರಿಸಿ ಅವರನ್ನೂ ಯಜ್ಞಕ್ಕೆ ಕರೆದನು.


ಬೈಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ ಬೇರೆ ಯಾವ ಮನುಷ್ಯ ಶವವಾಗಲಿ ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.


ಆ ಹೆಣದಲ್ಲಿ ಸ್ವಲ್ಪವಾಗಿ ತಿಂದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವದೋ ಅವರು ಆ ಸಾಯಂಕಾಲದವರೆಗೂ ಅಶುದ್ಧರಾಗಿರುವರು.


ಮರುದಿವಸದಲ್ಲಿಯೂ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ ದಾವೀದನ ಸ್ಥಾನವು ಬರಿದಾಗಿದ್ದದರಿಂದ ಸೌಲನು - ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು