1 ಸಮುಯೇಲ 20:27 - ಕನ್ನಡ ಸತ್ಯವೇದವು J.V. (BSI)27 ಮರುದಿವಸದಲ್ಲಿಯೂ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ ದಾವೀದನ ಸ್ಥಾನವು ಬರಿದಾಗಿದ್ದದರಿಂದ ಸೌಲನು - ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಮರುದಿವಸದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ, ದಾವೀದನ ಸ್ಥಾನ ಬರಿದಾಗಿದ್ದುದರಿಂದ ಸೌಲನು, “ಜೆಸ್ಸೆಯನ ಮಗ ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಮಗ ಯೋನಾತಾನನನ್ನು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಮಾರನೆಯ ದಿನದಲ್ಲಿ, ಅಂದರೆ ಆ ತಿಂಗಳ ಎರಡನೆಯ ದಿನದಲ್ಲಿ ದಾವೀದನ ಸ್ಥಳವು ಮತ್ತೆ ಖಾಲಿಯಾಗಿತ್ತು. ಆಗ ಸೌಲನು ತನ್ನ ಮಗನಾದ ಯೋನಾತಾನನಿಗೆ, “ನಿನ್ನೆ ಮತ್ತು ಇಂದು ಅಮಾವಾಸ್ಯೆ ಔತಣಕ್ಕೆ ಇಷಯನ ಮಗನಾದ ದಾವೀದನು ಏಕೆ ಬರಲಿಲ್ಲ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅಮಾವಾಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡುವ ಸ್ಥಳವು ಹಾಗೆಯೇ ಬರಿದಾಗಿತ್ತು. ಆದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಏಕೆ ಬರಲಿಲ್ಲ?” ಎಂದು ತನ್ನ ಪುತ್ರನಾದ ಯೋನಾತಾನನನ್ನು ಕೇಳಿದನು. ಅಧ್ಯಾಯವನ್ನು ನೋಡಿ |