1 ಸಮುಯೇಲ 20:29 - ಕನ್ನಡ ಸತ್ಯವೇದವು J.V. (BSI)29 ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ದಯವಿಟ್ಟು ನನಗೆ ಅಪ್ಪಣೆಕೊಡು. ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರುತ್ತೇನೆ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ನನ್ನ ಅಣ್ಣನು ಅದಕ್ಕಾಗಿ ನನ್ನನ್ನು ಕರೆದಿದ್ದಾನೆ. ದಯವಿಟ್ಟು ನನಗೆ ಅಪ್ಪಣೆಕೊಡು ನಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿ ಬರುತ್ತೇನೆ’ ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡು ಹೋದನು. ಆದ್ದರಿಂದ ಅವನು ಅರಸನ ಪಂಕ್ತಿಗೆ ಬರಲಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ತನ್ನ ಅಣ್ಣ ಅದಕ್ಕಾಗಿ ನನ್ನನ್ನು ಕರೆದಿದ್ದಾನೆ; ತಾನು ಹೋಗಿ ನನ್ನ ಅಣ್ಣಂದಿರನ್ನು ನೋಡಿಬರಲು ಅಪ್ಪಣೆಯಾಗಬೇಕು, ಎಂದು ನನ್ನನ್ನು ಬಹಳವಾಗಿ ಬೇಡಿಕೊಂಡನು. ಆದುದರಿಂದ ಅವನು ಅರಸರ ಪಂಕ್ತಿಗೆ ಬರಲಿಲ್ಲ,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ‘ನಮ್ಮ ಗೋತ್ರದವರು ಬೆತ್ಲೆಹೇಮಿನಲ್ಲಿ ಯಜ್ಞವನ್ನು ಅರ್ಪಿಸುತ್ತಿರುವುದರಿಂದ ನನ್ನ ಸಹೋದರರು ನನಗೂ ಬರಬೇಕೆಂದು ಕೇಳಿಕೊಂಡಿದ್ದಾರೆ. ನೀನು ನನ್ನ ಗೆಳೆಯನಾಗಿರುವುದಾದರೆ ನನ್ನ ಸೋದರರನ್ನು ನೋಡಿಕೊಂಡು ಬರಲು ದಯವಿಟ್ಟು ನನಗೆ ಅವಕಾಶಕೊಡು ಎಂದು ಹೇಳಿದನು.’ ಆದ್ದರಿಂದಲೇ ದಾವೀದನು ರಾಜನ ಊಟದ ಮೇಜಿಗೆ ಬಂದಿಲ್ಲ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಅವನು ನನಗೆ, ‘ದಯಮಾಡಿ ನನಗೆ ಅಪ್ಪಣೆಕೊಡು. ಏಕೆಂದರೆ ಊರೊಳಗೆ ನಮ್ಮ ಕುಟುಂಬಕ್ಕೆ ಯಜ್ಞ ಮಾಡುವುದಿದೆ. ನನ್ನ ಸಹೋದರರು ನನ್ನನ್ನು ಬರಲು ಹೇಳಿ ಕಳುಹಿಸಿದರು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನಾನು ಅಪ್ಪಣೆ ತೆಗೆದುಕೊಂಡು ನನ್ನ ಸಹೋದರರನ್ನು ಕಾಣುವುದಕ್ಕೆ ಹೋಗುತ್ತೇನೆ,’ ಎಂದನು. ಆದ್ದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |