Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:32 - ಕನ್ನಡ ಸತ್ಯವೇದವು J.V. (BSI)

32 ಅದಕ್ಕೆ ಯೋನಾತಾನನು - ಅವನು ಯಾಕೆ ಸಾಯಬೇಕು, ಅವನು ಏನು ಮಾಡಿದನು ಎಂದು ತನ್ನ ತಂದೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಅದಕ್ಕೆ ಯೋನಾತಾನನು, “ಅವನು ಯಾಕೆ ಸಾಯಬೇಕು? ಅವನು ಏನು ಮಾಡಿದನು?” ಎಂದು ತನ್ನ ತಂದೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಅದಕ್ಕೆ ಯೋನಾತಾನನು, “ಅವನು ಏಕೆ ಸಾಯಬೇಕು? ಅವನು ಏನು ಮಾಡಿದ್ದಾನೆ?” ಎಂದು ತಂದೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಯೋನಾತಾನನು ತನ್ನ ತಂದೆಗೆ, “ದಾವೀದನನ್ನು ಏಕೆ ಕೊಲ್ಲಬೇಕು? ಅವನು ಮಾಡಿದ ತಪ್ಪಾದರೂ ಏನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅದಕ್ಕೆ ಯೋನಾತಾನನು ತನ್ನ ತಂದೆ ಸೌಲನಿಗೆ ಉತ್ತರವಾಗಿ, “ಅವನನ್ನು ಏಕೆ ಕೊಲೆಮಾಡಬೇಕು? ಅವನು ಏನು ಮಾಡಿದನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:32
17 ತಿಳಿವುಗಳ ಹೋಲಿಕೆ  

ಅದಕ್ಕವನು - ಯಾಕೆ? ಕೆಟ್ಟದ್ದೇನು ಮಾಡಿದನು? ಅಂದನು. ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು ಎಂದು ಬಹಳವಾಗಿ ಆರ್ಭಟಿಸಿದರು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯನನ್ನು ಕೊಂದನು; ಯೆಹೋವನು ಇಸ್ರಾಯೇಲ್ಯರಿಗೆ ಮಹಾಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ ಅಂದನು.


ಅವನು ಮೂರನೆಯ ಸಾರಿ - ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ; ಆದದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಅವರಿಗೆ ಹೇಳಿದನು.


ಆಗ ಯಾಕೋಬನು ಕೋಪಿಸಿಕೊಂಡು ಲಾಬಾನನನ್ನು ಗದರಿಸಿ - ನೀನು ಇಷ್ಟು ಆತುರಪಟ್ಟು ನನ್ನನ್ನು ಹಿಂದಟ್ಟಿ ಬರುವಂತೆ ನಾನೇನು ದ್ರೋಹಮಾಡಿದೆನು?


ಅವನು ಅವರಿಗೆ - ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವದೇನೆಂದು ತಿಳುಕೊಳ್ಳದೆ ಅವನ ವಿಷಯವಾಗಿ ತೀರ್ಪುಮಾಡುವದುಂಟೇ? ಎಂದು ಹೇಳಿದ್ದಕ್ಕೆ


ಹೃದಯವು ಎಲ್ಲಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ಯಾರು ತಿಳಿದಾರು?


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.


ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ.


ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ; ಸಿಟ್ಟುಗಾರನ ಸಹವಾಸ ಮಾಡಬೇಡ.


ಅವನು ಆಗಲಿ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆಂದು ತಿಳಿದುಕೋ.


ಆಗ ಸೌಲನು - ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ತಿವಿಯುವೆನೆಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.


ತರುವಾಯ ಅವನು ತನ್ನ ತಂದೆಯ ಮುಂದೆ ದಾವೀದನನ್ನು ಹೊಗಳಿ - ಒಡೆಯನು ತನ್ನ ಸೇವಕನಾದ ದಾವೀದನಿಗೆ ಅನ್ಯಾಯಮಾಡದಿರಲಿ; ಅವನು ನಿನಗೆ ದ್ರೋಹಮಾಡಲಿಲ್ಲ; ಅವನು ಮಾಡಿದ್ದೆಲ್ಲವೂ ನಿನ್ನ ಹಿತಕ್ಕಾಗಿಯೇ.


ನಿನ್ನ ಎಲ್ಲಾ ಸೇವಕರಲ್ಲಿ ಅರಸನ ಅಳಿಯನಾಗಿರುವ ದಾವೀದನಂತೆ ನಂಬಿಗಸ್ತನಾದವನು ಯಾವನಿದ್ದಾನೆ? ಅವನು ನಿನ್ನ ಮಂತ್ರಾಲೋಚಕರಲ್ಲೊಬ್ಬನೂ ನಿನ್ನ ಮನೆಯಲ್ಲಿ ಘನವಂತನೂ ಆಗಿದ್ದಾನಲ್ಲವೋ?


ದಾವೀದನು ರಾಮದ ಮಠದಿಂದ ತಪ್ಪಿಸಿಕೊಂಡು ಯೋನಾತಾನನ ಬಳಿಗೆ ಬಂದು ಅವನಿಗೆ - ನಿನ್ನ ತಂದೆಯು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ; ನಾನೇನು ಮಾಡಿದೆನು? ನನ್ನ ಅಪರಾಧವೇನು? ನಾನು ಅವನಿಗೆ ಮಾಡಿದ ದ್ರೋಹವು ಯಾವದು ಅನ್ನಲು ಯೋನಾತಾನನು ಅವನಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು