Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:33 - ಕನ್ನಡ ಸತ್ಯವೇದವು J.V. (BSI)

33 ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವದಕ್ಕೆ ನಿಶ್ಚಯಿಸಿದ್ದಾನೆಂಬದು ಯೋನಾತಾನನಿಗೆ ಗೊತ್ತಾಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಕೂಡಲೆ ಸೌಲನು ಅವನನ್ನು ತಿವಿಯುವವನಂತೆ ಈಟಿಯನ್ನೆಸೆದನು. ತನ್ನ ತಂದೆ ನಿಜವಾಗಿಯೂ ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನನಿಗೆ ಅರಿವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಸೌಲನು ಯೋನಾತಾನನನ್ನು ಕೊಲ್ಲುವುದಕ್ಕಾಗಿ ಈಟಿಯನ್ನು ಅವನ ಕಡೆಗೆ ಎಸೆದನು. ದಾವೀದನನ್ನು ಕೊಲ್ಲಲು ತನ್ನ ತಂದೆಯು ದೃಢನಿರ್ಧಾರ ಮಾಡಿದ್ದಾನೆಂದು ಯೋನಾತಾನನು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದ್ದರಿಂದ ಯೋನಾತಾನನು ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದನೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:33
5 ತಿಳಿವುಗಳ ಹೋಲಿಕೆ  

ಅವನು ಆಗಲಿ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆಂದು ತಿಳಿದುಕೋ.


ಆಗ ಸೌಲನು - ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವ ಹಾಗೆ ತಿವಿಯುವೆನೆಂದುಕೊಂಡು ಈಟಿಯನ್ನು ಎಸೆದನು. ದಾವೀದನು ಎರಡು ಸಾರಿ ತಪ್ಪಿಸಿಕೊಂಡನು.


ಅವನು ಒಡನೆ ಕಿನ್ನರಿಯನ್ನು ಬಾರಿಸುತ್ತಿದ್ದ ದಾವೀದನನ್ನು ಗೋಡೆಗೆ ಹತ್ತಿಕೊಳ್ಳುವಂತೆ ತಿವಿಯಬೇಕೆಂದು ತನ್ನ ಈಟಿಯನ್ನು ಎಸೆದನು. ಆದರೆ ದಾವೀದನು ಫಕ್ಕನೆ ಸೌಲನೆದುರಿನಿಂದ ಸರಿದುಕೊಂಡ ಕಾರಣ ಅದು ಗೋಡೆಯೊಳಗೆ ನಾಟಿತು. ದಾವೀದನು ಆ ರಾತ್ರಿಯಲ್ಲೇ ತಪ್ಪಿಸಿಕೊಂಡು ಓಡಿಹೋದನು.


ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು; ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟ ಮಾಡಲೇ ಇಲ್ಲ.


ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವವರೆಗೆ ಅಲ್ಲಿಯೇ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು