1 ಸಮುಯೇಲ 20:42 - ಕನ್ನಡ ಸತ್ಯವೇದವು J.V. (BSI)42 ಅನಂತರ ಯೋನಾತಾನನು ದಾವೀದನಿಗೆ - ಸಮಾಧಾನದಿಂದ ಹೋಗು; ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ; ಆತನೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು; ಯೋನಾತಾನನು ಊರೊಳಕ್ಕೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು; ನಾವು ಸರ್ವೇಶ್ವರನ ಹೆಸರಿನಲ್ಲಿ ಆಣೆಯಿಟ್ಟು ಒಪ್ಪಂದಮಾಡಿಕೊಂಡಿದ್ದೇವಲ್ಲವೆ? ಅವರೇ ನನಗೂ ನಿನಗೂ ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಂಬಂಧಸಾಕ್ಷಿಯಾಗಿರಲಿ,” ಎಂದು ಹೇಳಿದನು. ಬಳಿಕ ದಾವೀದನು ಹೊರಟುಹೋದನು. ಇತ್ತ ಯೋನಾತಾನನು ಊರಿಗೆ ಹಿಂದಿರುಗಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವಿಬ್ಬರೂ ಗೆಳೆಯರಾಗಿರಲು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದೇವೆ. ನಮ್ಮಿಬ್ಬರಿಗೂ ನಮ್ಮ ಸಂತತಿಯವರಿಗೂ ಇರುವ ಸಂಬಂಧಕ್ಕೆ ಯೆಹೋವನೇ ಸಾಕ್ಷಿ ಎಂದು ಹೇಳಿದ್ದೇವೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಆಗ ಯೋನಾತಾನನು ದಾವೀದನಿಗೆ, “ನೀನು ಸಮಾಧಾನವಾಗಿ ಹೋಗು, ಯೆಹೋವ ದೇವರು ಎಂದೆಂದಿಗೂ ನನಗೂ, ನಿನಗೂ, ನನ್ನ ಸಂತಾನಕ್ಕೂ, ನಿನ್ನ ಸಂತಾನಕ್ಕೂ ಸಾಕ್ಷಿಯಾಗಿರಲೆಂದು ಮಧ್ಯದಲ್ಲಿ ಯೆಹೋವ ದೇವರ ಹೆಸರಿನಿಂದ ಆಣೆಯಿಟ್ಟು ನಾವಿಬ್ಬರೂ ಪ್ರಮಾಣ ಮಾಡಿಕೊಂಡೆವಲ್ಲಾ,” ಎಂದನು. ಆಗ ದಾವೀದನು ಎದ್ದು ಹೋದನು. ಯೋನಾತಾನನು ಪಟ್ಟಣಕ್ಕೆ ಹೋದನು. ಅಧ್ಯಾಯವನ್ನು ನೋಡಿ |