Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:5 - ಕನ್ನಡ ಸತ್ಯವೇದವು J.V. (BSI)

5 ಅದಕ್ಕೆ ದಾವೀದನು - ನಾಳೆ ಶುದ್ಧ ಪಾಡ್ಯವು; ನಾನು ಅರಸನ ಪಂಕ್ತಿಯಲ್ಲಿ ಕೂತು ಊಟಮಾಡಬೇಕಾಗಿರುವದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ದಾವೀದನು, “ನಾಳೆ ಅಮಾವಾಸ್ಯೆ ಹಬ್ಬ, ನಾನು ರಾಜನ ಜೊತೆಯಲ್ಲಿ ಊಟಮಾಡಬೇಕಾಗಿದೆ. ಆದರೆ ನಾನು ಈಗಲೇ ಹೋಗಿ ಸಂಜೆಯವರೆಗೆ ಹೊಲದಲ್ಲಿ ಅಡಗಿಕೊಳ್ಳಲು ಅವಕಾಶ ಮಾಡಿಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನು ಯೋನಾತಾನನಿಗೆ, “ನಾಳೆ ಅಮಾವಾಸ್ಯೆ, ಆದ್ದರಿಂದ ನಾನು ಅರಸನ ಸಂಗಡ ಪಂಕ್ತಿಯಲ್ಲಿ ಊಟ ಮಾಡಲೇ ಬೇಕಾಗಿರುವುದು. ನಾನು ಮೂರನೆಯ ದಿವಸದ ಸಾಯಂಕಾಲದವರೆಗೆ ಹೊಲದಲ್ಲಿ ಬಚ್ಚಿಟ್ಟುಕೊಂಡಿರಲು, ನನ್ನನ್ನು ಹೋಗಗೊಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:5
17 ತಿಳಿವುಗಳ ಹೋಲಿಕೆ  

ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯೂ ಹಬ್ಬಗಳಲ್ಲಿಯೂ ಅಮಾವಾಸ್ಯೆಯಲ್ಲಿಯೂ ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸುವಾಗ ಆ ತುತೂರಿಗಳನ್ನು ಊದಿಸಬೇಕು. ಆ ಧ್ವನಿ ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವದು; ನಾನು ನಿಮ್ಮ ದೇವರಾದ ಯೆಹೋವನು.


ಆದದರಿಂದ ಅವನು ದಾವೀದನಿಗೆ - ನನ್ನ ತಂದೆಯಾದ ಸೌಲನು ನಿನ್ನನ್ನು ಕೊಲ್ಲಬೇಕೆಂದಿರುತ್ತಾನೆ. ನೀನು ಜಾಗರೂಕತೆಯಿಂದಿರು; ನಾಳೆ ಬೆಳಿಗ್ಗೆ ಒಂದು ಗುಪ್ತಸ್ಥಳದಲ್ಲಿ ಅಡಗಿಕೊಂಡಿರು.


ಅಮಾವಾಸ್ಯೆಯಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.


ಅಮಾವಾಸ್ಯೆಯಲ್ಲಿಯೂ ನಮ್ಮ ಉತ್ಸವದಿನವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಹೀಗಿರುವದರಿಂದ ತಿಂದು ಕುಡಿಯುವ ವಿಷಯದಲ್ಲಿಯೂ ಹಬ್ಬ ಅಮವಾಸ್ಯೆ ಸಬ್ಬತು ಎಂಬಿವುಗಳ ವಿಷಯದಲ್ಲಿಯೂ ನಿಮ್ಮನ್ನು ದೋಷಿಗಳೆಂದು ಯಾರೂ ಎಣಿಸಬಾರದು.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.


ಅವರು ಈ ಮಾತನ್ನು ಕೇಳಿ ಆತನನ್ನು ಕೊಲ್ಲುವದಕ್ಕಾಗಿ ಕಲ್ಲು ತಕ್ಕೊಳ್ಳಲು ಯೇಸು ಅಡಗಿಕೊಂಡು ದೇವಾಲಯದೊಳಗಿಂದ ಹೊರಟುಹೋದನು.


ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು; ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.


ನನ್ನನ್ನು ದೂಷಿಸುವವನು ವೈರಿಯಾಗಿದ್ದರೆ ತಾಳಿಕೊಂಡೇನು; ನನ್ನನ್ನು ತಿರಸ್ಕರಿಸಿ ಉಬ್ಬಿಕೊಳ್ಳುವವನು ದ್ವೇಷಿಯಾಗಿದ್ದರೆ ಅಡಗಿಕೊಂಡೇನು.


ನೀನು ಮೂರನೆಯ ದಿನದಲ್ಲಿ ಮೊದಲು ಅಡಗಿಕೊಂಡಿದ್ದ ಸ್ಥಳಕ್ಕೆ ಬೇಗ ಬಂದು ಅಲ್ಲಿನ ಕಲ್ಲುಕುಪ್ಪೆಯ ಬಳಿಯಲ್ಲಿ ಕೂತುಕೊಂಡಿರು.


ನಿನ್ನ ತಂದೆಯು ನನ್ನನ್ನು ಕುರಿತು ವಿಚಾರಮಾಡಿದರೆ ನೀನು - ದಾವೀದನು ತನ್ನ ಊರಾದ ಬೇತ್ಲೆಹೇವಿುಗೆ ಹೋಗಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕಯಜ್ಞ ಮಾಡುತ್ತಾರಂತೆ ಎಂದು ಹೇಳು.


ಅದಕ್ಕೆ ಅವನು - ಇಂದು ಅಮಾವಾಸ್ಯೆಯಲ್ಲ, ಸಬ್ಬತ್ತಲ್ಲ, ಈಹೊತ್ತು ಯಾಕೆ ಹೋಗುತ್ತೀ ಅಂದನು.


ಆಗ ಯೋನಾತಾನನು ದಾವೀದನಿಗೆ - ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ ಅಂದನು.


ಯೋನಾತಾನನು ದಾವೀದನಿಗೆ - ನಾಳೆ ಶುದ್ಧಪಾಡ್ಯವು; ನಿನ್ನ ಸ್ಥಳವು ಬರಿದಾಗಿರುವದನ್ನು ಅರಸನು ಕಂಡು ನಿನ್ನ ವಿಷಯವಾಗಿ ವಿಚಾರಿಸುವನು.


ದಾವೀದನು ಅಡವಿಯಲ್ಲಿ ಅಡಗಿಕೊಂಡನು.


ಮರುದಿವಸದಲ್ಲಿಯೂ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ ದಾವೀದನ ಸ್ಥಾನವು ಬರಿದಾಗಿದ್ದದರಿಂದ ಸೌಲನು - ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.


ಬಡವನನ್ನು ಬೆಳ್ಳಿಗೆ, ದಿಕ್ಕಿಲ್ಲದವನನ್ನು ಜೊತೆ ಕೆರಕ್ಕೆ ಕೊಂಡುಕೊಳ್ಳೋಣ; ಗೋದಿಯ ನುಚ್ಚುನುಸಿಯನ್ನು ಮಾರೋಣ ಎಂದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು