Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:4 - ಕನ್ನಡ ಸತ್ಯವೇದವು J.V. (BSI)

4 ಯಾಜಕನು ದಾವೀದನಿಗೆ - ನನ್ನ ಬಳಿಯಲ್ಲಿ ಮೀಸಲ ರೊಟ್ಟಿಗಳ ಹೊರತು ಬೇರೆ ರೊಟ್ಟಿಗಳಿಲ್ಲ; ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು ಎನ್ನಲು ದಾವೀದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಪವಿತ್ರವಾದ ಮೀಸಲು ರೊಟ್ಟಿಗಳ ಹೊರತು ಬೇರೆ ರೊಟ್ಟಿಗಳಿಲ್ಲ; ನಿಮ್ಮ ಆಳುಗಳು ಸದ್ಯಕ್ಕೆ ಸಂಗಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಜಕನು ದಾವೀದನಿಗೆ, “ನನ್ನ ಬಳಿ ಸಾಧಾರಣವಾದ ರೊಟ್ಟಿಗಳಿಲ್ಲ. ಆದರೆ ಕೆಲವು ಪವಿತ್ರ ರೊಟ್ಟಿಗಳಿವೆ. ನಿನ್ನ ಸೈನಿಕರು ಯಾವ ಹೆಂಗಸಿನೊಡನೆಯೂ ಲೈಂಗಿಕ ಸಂಬಂಧ ಮಾಡಿಲ್ಲದಿದ್ದರೆ ಅವರು ಅವುಗಳನ್ನು ತಿನ್ನಬಹುದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯಾಜಕನು ದಾವೀದನಿಗೆ ಉತ್ತರವಾಗಿ, “ಪರಿಶುದ್ಧವಾಗಿಸಿದ ರೊಟ್ಟಿಯ ಹೊರತಾಗಿ, ನನ್ನ ಕೈಯಲ್ಲಿ ಸಾಧಾರಣವಾದ ಒಂದು ರೊಟ್ಟಿಯಾದರೂ ಇಲ್ಲ. ಆ ರೊಟ್ಟಿಗಳನ್ನು ಸ್ತ್ರೀಯರೊಂದಿಗೆ ಸಂಪರ್ಕ ಮಾಡದವರಿಗೆ ಕೊಡಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:4
9 ತಿಳಿವುಗಳ ಹೋಲಿಕೆ  

ಆಗ ಮೋಶೆ ಜನರಿಗೆ - ಮೂರನೆಯ ದಿನದಲ್ಲಿ ಸಿದ್ಧವಾಗಿರ್ರಿ; ಯಾವ ಪುರುಷನೂ ಸ್ತ್ರೀಸಂಗಮಾಡಬಾರದು ಎಂದು ಹೇಳಿದನು.


ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.


ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ದಂಪತಿ ಧರ್ಮವನ್ನು ಬಿಟ್ಟು ಅಗಲಿರಬಹುದೇ ಹೊರತು ಅನ್ಯಥಾ ಹಾಗೆ ಮಾಡಬಾರದು; ಆಮೇಲೆ ಸೈತಾನನು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ನಿಮಗೆ ದುಷ್ಪ್ರೇರಣೆಮಾಡದಂತೆ ತಿರಿಗಿ ಕೂಡಿಕೊಳ್ಳಿರಿ.


ಆಗ - ನಾವು ಬಹು ವರುಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಲ್ಲಿ ಉಪವಾಸಮಾಡಿ ಅಳಬೇಕೋ ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ ಎಂಬದಾಗಿ ಅವರಿಗೆ ಅಪ್ಪಣೆಕೊಟ್ಟಿದ್ದರು.


ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲವಾದದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.


ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.


ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು