Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:5 - ಕನ್ನಡ ಸತ್ಯವೇದವು J.V. (BSI)

5 ನಮ್ಮ ಎಲ್ಲಾ ಯುದ್ಧಪ್ರಯಾಣಗಳಲ್ಲಿ ಸ್ತ್ರೀನಿಷೇಧ ಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾನುಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುವವಲ್ಲವೇ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗವನ್ನು ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳು, ಸಾಮಾನುಗಳು ಪರಿಶುದ್ಧವಾಗಿರುತ್ತವೆ. ಈ ದಿನದಲ್ಲಿ ಅವು ಎಷ್ಟೋ ಹೆಚ್ಚಾಗಿ ಪರಿಶುದ್ಧವಾಗಿರುತ್ತದಲ್ಲವೇ” ಎಂದು ಉತ್ತರ ಕೊಟ್ಟನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಾವೀದನು, “ನಮ್ಮ ಎಲ್ಲಾ ಯುದ್ಧ ಪ್ರಯಾಣಗಳಲ್ಲಿ ಸ್ತ್ರೀಸಂಗ ನಿಷೇಧಮಾಡುವಂತೆ ಈಗಲೂ ಮಾಡಿದ್ದೇವೆ. ನಾವು ಸಾಧಾರಣ ಕಾರ್ಯಕ್ಕೆ ಹೊರಟಾಗಲೂ ಆಳುಗಳ ಸಾಮಾಗ್ರಿಗಳು ಪರಿಶುದ್ಧವಾಗಿರುತ್ತಿದ್ದವು. ಈ ದಿನವಂತು ಅವು ಮತ್ತಷ್ಟು ಪರಿಶುದ್ಧವಾಗಿ ಇರುತ್ತವಲ್ಲವೇ?’ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದಾವೀದನು ಯಾಜಕನಿಗೆ, “ನಾವು ಯಾವ ಹೆಂಗಸಿನೊಂದಿಗೂ ಲೈಂಗಿಕ ಸಂಬಂಧ ಹೊಂದಿಲ್ಲ. ನನ್ನ ಜನರು ಯುದ್ಧಕ್ಕೆ ಹೋಗುವಾಗಲೂ ಸಾಧಾರಣಕಾರ್ಯಕ್ಕೆ ಹೋಗುವಾಗಲೂ ತಮ್ಮ ದೇಹಗಳನ್ನು ಶುಚಿಯಾಗಿಟ್ಟುಕೊಳ್ಳುತ್ತಾರೆ. ನಮ್ಮ ಇಂದಿನ ಕಾರ್ಯವು ವಿಶೇಷವಾದ್ದರಿಂದ ನಾವು ಖಂಡಿತವಾಗಿ ಪವಿತ್ರರಾಗಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದಾವೀದನು ಯಾಜಕನಿಗೆ ಉತ್ತರವಾಗಿ, “ನಾನು ಹೊರಡುವುದಕ್ಕಿಂತ ಮುಂಚೆ ನಿನ್ನೆಯೂ, ಮೊನ್ನೆಯೂ ಸ್ತ್ರೀಯರು ನಮಗೆ ದೂರವಾಗಿದ್ದರು. ಅಪವಿತ್ರವಾದ ಕಾರ್ಯಗಳಿಗೆ ಹೋಗುವಾಗಲೂ ಪುರುಷರು ಶುದ್ಧರಾಗಿರುತ್ತಾರೆ. ಇಂದು ಅದಕ್ಕಿಂತಲೂ ಹೆಚ್ಚಾಗಿರುವರಲ್ಲವೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:5
10 ತಿಳಿವುಗಳ ಹೋಲಿಕೆ  

ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.


ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನೂ ಎಣ್ಣೆ ವಿುಶ್ರವಾದ ಒಂದು ಹೋಳಿಗೆಯನ್ನೂ ಒಂದು ಕಡುಬನ್ನೂ ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟು


ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.


ಪ್ರಾರ್ಥನೆಗೆ ಮನಸ್ಸು ಕೊಡುವದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪಕಾಲ ದಂಪತಿ ಧರ್ಮವನ್ನು ಬಿಟ್ಟು ಅಗಲಿರಬಹುದೇ ಹೊರತು ಅನ್ಯಥಾ ಹಾಗೆ ಮಾಡಬಾರದು; ಆಮೇಲೆ ಸೈತಾನನು ನಿಮಗೆ ದಮೆಯಿಲ್ಲದಿರುವದನ್ನು ನೋಡಿ ನಿಮಗೆ ದುಷ್ಪ್ರೇರಣೆಮಾಡದಂತೆ ತಿರಿಗಿ ಕೂಡಿಕೊಳ್ಳಿರಿ.


ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು ಅವರನ್ನು ಪರಿಶುದ್ಧಗೊಳಿಸಿದನು; ಅವರು ತಮ್ಮ ಬಟ್ಟೆಗಳನ್ನು ಮಡಿಮಾಡಿಕೊಂಡರು.


ಆಗ ಮೋಶೆ ಜನರಿಗೆ - ಮೂರನೆಯ ದಿನದಲ್ಲಿ ಸಿದ್ಧವಾಗಿರ್ರಿ; ಯಾವ ಪುರುಷನೂ ಸ್ತ್ರೀಸಂಗಮಾಡಬಾರದು ಎಂದು ಹೇಳಿದನು.


ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು