Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:6 - ಕನ್ನಡ ಸತ್ಯವೇದವು J.V. (BSI)

6 ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲವಾದದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನದಲ್ಲಿ ಸರ್ವೇಶ್ವರನ ಸನ್ನಿಧಿಯಿಂದ ತೆಗೆಯಲಾದ ನೈವೇದ್ಯದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳಿರಲಿಲ್ಲ. ಆದುದರಿಂದ ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲಿ ಪವಿತ್ರ ರೊಟ್ಟಿಯ ಹೊರತು ಬೇರೆ ರೊಟ್ಟಿಯು ಇರಲಿಲ್ಲ. ಆದ್ದರಿಂದ ಯಾಜಕನು ಆ ರೊಟ್ಟಿಯನ್ನು ದಾವೀದನಿಗೆ ಕೊಟ್ಟನು. ಯಾಜಕರು ಯೆಹೋವನ ಸನ್ನಿಧಿಯಲ್ಲಿ ಪವಿತ್ರ ಮೇಜಿನ ಮೇಲಿಟ್ಟಿದ್ದ ರೊಟ್ಟಿಯೇ ಅದಾಗಿತ್ತು. ಈ ರೊಟ್ಟಿಯನ್ನು ಪ್ರತಿದಿನವೂ ಹೊರ ತೆಗೆಯುತ್ತಿದ್ದರು ಮತ್ತು ಹೊಸ ರೊಟ್ಟಿಯನ್ನು ಆ ಸ್ಥಳದಲ್ಲಿ ಇಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೆಹೋವ ದೇವರ ಸನ್ನಿಧಿಯಿಂದ ತೆಗೆಯಲಾದ ಸಮ್ಮುಖದ ರೊಟ್ಟಿಗಳ ಹೊರತು, ಬೇರೆ ರೊಟ್ಟಿ ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧವಾಗಿಸಿದ ರೊಟ್ಟಿಯನ್ನು ಕೊಟ್ಟನು. ಏಕೆಂದರೆ ಅವುಗಳನ್ನು ತೆಗೆದುಕೊಳ್ಳುವ ದಿನದಲ್ಲಿ ಅವುಗಳಿಗೆ ಬದಲಾಗಿ ಬಿಸಿ ರೊಟ್ಟಿಗಳನ್ನು ಇಡಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:6
5 ತಿಳಿವುಗಳ ಹೋಲಿಕೆ  

ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು