Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 21:8 - ಕನ್ನಡ ಸತ್ಯವೇದವು J.V. (BSI)

8 ದಾವೀದನು ಅಹೀಮೆಲೆಕನನ್ನು - ಅರಸನ ಕಾರ್ಯವು ಅವಸರವಾಗಿದ್ದದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ; ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ ಎಂದು ಕೇಳಲು ಅವನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯವು ತುರ್ತಾದ್ದರಿಂದ ಕತ್ತಿಯನ್ನಾಗಲಿ, ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲಿಲ್ಲ, ನಿನ್ನ ಬಳಿಯಲ್ಲಿ ಬರ್ಜಿಯಾಗಲಿ ಕತ್ತಿಯಾಗಲಿ ಇಲ್ಲವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ದಾವೀದನು ಅಹೀಮೆಲೆಕನನ್ನು, “ಅರಸನ ಕಾರ್ಯ ತುರ್ತಾದದ್ದು. ಆದ್ದರಿಂದ ಕತ್ತಿಯನ್ನಾಗಲಿ ಬೇರೆ ಆಯುಧವನ್ನಾಗಲಿ ತೆಗೆದುಕೊಂಡು ಬರಲು ಆಗಲಿಲ್ಲ. ನಿನ್ನ ಬಳಿಯಲ್ಲಿ ಭರ್ಜಿಯಾಗಲಿ, ಕತ್ತಿಯಾಗಲಿ ಇಲ್ಲವೇ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದಾವೀದನು ಅಹೀಮೆಲೆಕನಿಗೆ, “ನಿನ್ನ ಹತ್ತಿರ ಖಡ್ಗವಾಗಲಿ ಭರ್ಜಿಯಾಗಲಿ ಇದೆಯೇ? ರಾಜನ ಕಾರ್ಯಭಾರವು ಬಹುಮುಖ್ಯವಾದುದು. ನಾನು ಬೇಗ ಹೋಗಬೇಕಾಗಿದೆ. ನಾನು ಕತ್ತಿಯನ್ನಾಗಲೀ ಇತರ ಆಯುಧವನ್ನಾಗಲೀ ತರಲಿಲ್ಲ” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ದಾವೀದನು ಅಹೀಮೆಲೆಕನಿಗೆ, “ಇಲ್ಲಿ ನಿನ್ನ ಕೈ ವಶದಲ್ಲಿ ಈಟಿಯಾದರೂ, ಖಡ್ಗವಾದರೂ ಇಲ್ಲವೋ? ಏಕೆಂದರೆ ಅರಸನ ಕಾರ್ಯವು ಅವಸರವಾದುದರಿಂದ ನಾನು ನನ್ನ ಖಡ್ಗವನ್ನಾದರೂ, ಆಯುಧಗಳನ್ನಾದರೂ ತೆಗೆದುಕೊಂಡು ಬರಲಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 21:8
6 ತಿಳಿವುಗಳ ಹೋಲಿಕೆ  

ಅದೇ ದಿವಸ ಸೌಲನ ಪಶುಪಾಲರಲ್ಲಿ ಪ್ರಧಾನನಾದ ದೋಯೇಗನೆಂಬ ಎದೋಮ್ಯನು ಯೆಹೋವನ ಆಲಯದಲ್ಲಿ ತಡೆಯಲ್ಪಟ್ಟಿದ್ದನು.


ನೀನು ಏಲಾ ತಗ್ಗಿನಲ್ಲಿ ಕೊಂದುಹಾಕಿದ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯು ಒಂದು ಬಟ್ಟೆಯಲ್ಲಿ ಸುತ್ತಲ್ಪಟ್ಟು ಏಫೋದಿನ ಹಿಂದೆ ಇಡಲ್ಪಟ್ಟಿದೆ; ಬೇಕಾದರೆ ಅದನ್ನು ತೆಗೆದುಕೋ. ಅದರ ಹೊರತು ನನ್ನ ಬಳಿಯಲ್ಲಿ ಬೇರೊಂದಿಲ್ಲ ಎಂದು ಉತ್ತರಕೊಟ್ಟನು. ದಾವೀದನು - ಅದಕ್ಕೆ ಸಮಾನವಾದದ್ದು ಮತ್ತೊಂದಿಲ್ಲ, ಅದನ್ನೇ ಕೊಡು ಎಂದು ಹೇಳಿ ತೆಗೆದುಕೊಂಡನು.


ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು - ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.


ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನಸಿಕೊಂಡೆನು. ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ!


ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅರಮನೆಯ ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿಶೀಘ್ರವಾಗಿ ಹೊರಟರು.


ಹಣದ ಚೀಲವನ್ನಾಗಲಿ ಹಸಿಬೆಯನ್ನಾಗಲಿ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು