Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:1 - ಕನ್ನಡ ಸತ್ಯವೇದವು J.V. (BSI)

1 ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ ಅವರೂ ಬಂದು ಅವನನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದಾವೀದನು ಅಕೀಷ ರಾಜನಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ, ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ, ಅವರೂ ಬಂದು ಅವನನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಹೋದನು. ಈ ಸಮಾಚಾರ, ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಿತು. ಅವರೂ ಬಂದು ಅವನನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದಾವೀದನು ಗತ್ ಊರನ್ನು ಬಿಟ್ಟು ಅದುಲ್ಲಾಮ್ ಗವಿಗೆ ಓಡಿಹೋದನು. ದಾವೀದನು ಅದುಲ್ಲಾಮಿನಲ್ಲಿರುವುದು ಅವನ ಅಣ್ಣಂದಿರಿಗೂ ಬಂಧುಗಳಿಗೂ ತಿಳಿಯಿತು. ಅವರು ದಾವೀದನನ್ನು ನೋಡಲು ಅಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:1
13 ತಿಳಿವುಗಳ ಹೋಲಿಕೆ  

ದಾವೀದನು ಅದುಲ್ಲಾಮ್‍ಗಿರಿಯ ಗವಿಯಲ್ಲಿದ್ದಾಗ ಅವನ ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂವರು ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿದ್ದು


ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಲ್ಲ; ಅವರು ತಮ್ಮ ದೇಶದ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.


ನಾನು ಯೆಹೋವನನ್ನು ಎಡೆಬಿಡದೆ ಕೊಂಡಾಡುವೆನು; ಆತನ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವದು.


ಲಿಬ್ನದ ಅರಸನು 1; ಅದುಲ್ಲಾಮದ ಅರಸನು 1;


ಮಾರೇಷದವರೇ, ನಿಮ್ಮನ್ನು ವಶಮಾಡಿಕೊಳ್ಳತಕ್ಕವನನ್ನು ಇನ್ನು ನಿಮ್ಮ ಬಳಿಗೆ ಬರಮಾಡುವೆನು; ಇಸ್ರಾಯೇಲಿನ ಮಹಿಮೆಯವರು ಅದುಲ್ಲಾವಿುಗೆ ಸೇರುವರು.


ಇಗೋ, ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ, ಭೂವಿುಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.


ತಪ್ಪೂಹ, ಏನಾಮ್, ಯರ್ಮೂತ್,


ಆ ಕಾಲದಲ್ಲಿ ಯೆಹೂದನು ತನ್ನ ಅಣ್ಣತಮ್ಮಂದಿರನ್ನು ಬಿಟ್ಟು ಗಟ್ಟಾ ಇಳಿದು ಅದುಲ್ಲಾಮೂರಿನವನಾದ ಹೀರಾ ಎಂಬವನ ಹತ್ತಿರ ಇದ್ದುಕೊಂಡನು.


ಜನರು ದಾವೀದನಿಗೆ - ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡಿಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿವಸ ಇದೇ ಅಂದಾಗ ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು