Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:10 - ಕನ್ನಡ ಸತ್ಯವೇದವು J.V. (BSI)

10 ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನು ಇವನಿಗೆ ಯೆಹೋವನ ಚಿತ್ತವನ್ನು ತಿಳಿಸಿ, ಆಹಾರವನ್ನೂ, ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಹೀಮೆಲೆಕನು ದಾವೀದನಿಗಾಗಿ ಯೆಹೋವನಲ್ಲಿ ಪ್ರಾರ್ಥಿಸಿದನು. ಅಹೀಮೆಲೆಕನು ದಾವೀದನಿಗೆ ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನೂ ಕೊಟ್ಟನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇವನು ಅವನಿಗೋಸ್ಕರ ಯೆಹೋವ ದೇವರನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು, ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಅವನಿಗೆ ಕೊಟ್ಟನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:10
11 ತಿಳಿವುಗಳ ಹೋಲಿಕೆ  

[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.


ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.


ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು.


ದಾವೀದನು ತಿರಿಗಿ ಯೆಹೋವನನ್ನು - ಕೆಯೀಲದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ ಎಂದು ಕೇಳಿದಾಗ ಆತನು - ಒಪ್ಪಿಸಿಕೊಡುವರು ಎಂದು ಉತ್ತರಕೊಟ್ಟನು.


ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ; ಅರಸನು ತನ್ನ ಸೇವಕನ ಮೇಲೆಯೂ ಅವನ ಮನೆಯವರ ಮೇಲೆಯೂ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ ಎಂದು ಉತ್ತರಕೊಟ್ಟನು.


ಆಗ ಸೌಲನು ಅವನಿಗೆ - ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ ಎಂದು ಕೇಳಲು ಅವನು -


ಅವರು - ಆ ಮನುಷ್ಯನು ಇಲ್ಲಿಗೆ ಬರುವನೋ ಎಂದು ಯೆಹೋವನನ್ನು ವಿಚಾರಿಸಿದಾಗ ಆತನು - ಬಂದಿದ್ದಾನೆ; ಇಗೋ, ಸಾಮಾನುಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಉತ್ತರಕೊಟ್ಟನು.


ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು ಅರಸನು -


ದಾವೀದನು ಸೌಲನ ಭಯದಿಂದ ಅದೇ ದಿವಸ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಓಡಿಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು