1 ಸಮುಯೇಲ 22:13 - ಕನ್ನಡ ಸತ್ಯವೇದವು J.V. (BSI)13 ಆಗ ಸೌಲನು ಅವನಿಗೆ - ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ ಎಂದು ಕೇಳಲು ಅವನು - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ಸೌಲನು, “ನೀನು ನನಗೆ ವಿರೋಧವಾಗಿ ಜೆಸ್ಸೆಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿ ಹಾಗು ಕತ್ತಿಯನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸೌಲನು ಅಹೀಮೆಲೆಕನಿಗೆ, “ನೀನು ಮತ್ತು ಇಷಯನ ಮಗ ನನ್ನ ವಿರುದ್ಧ ರಹಸ್ಯಯೋಜನಗೆಳನ್ನು ಏಕೆ ಮಾಡಿದಿರಿ? ನೀನು ದಾವೀದನಿಗೆ ರೊಟ್ಟಿಯನ್ನೂ ಖಡ್ಗವನ್ನೂ ಕೊಟ್ಟೆ! ನೀನು ಅವನಿಗಾಗಿ ದೇವರಲ್ಲಿ ಪ್ರಾರ್ಥಿಸಿದೆ. ಈಗ ದಾವೀದನು ನನ್ನ ಮೇಲೆ ಆಕ್ರಮಣಮಾಡಲು ಕಾಯುತ್ತಿದ್ದಾನೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸೌಲನು ಅವನಿಗೆ, “ನೀನೂ, ಇಷಯನ ಮಗನೂ ನನಗೆ ವಿರೋಧವಾಗಿ ಒಳಸಂಚು ಮಾಡಿದ್ದೇನು? ಅವನು ಅಡಗಿಕೊಂಡು ನನಗೆ ವಿರೋಧವಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಯನ್ನೂ, ಖಡ್ಗವನ್ನೂ ಕೊಟ್ಟು ದೇವರನ್ನು ಅವನಿಗೋಸ್ಕರ ವಿಚಾರಿಸಿದ್ದೇನು? ಅವನು ಇಂದಿನವರೆಗೂ ನನ್ನನ್ನು ಕೊಲ್ಲುವುದಕ್ಕೆ ಕಾಯುತ್ತಿದ್ದಾನೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |