Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:15 - ಕನ್ನಡ ಸತ್ಯವೇದವು J.V. (BSI)

15 ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ; ಅರಸನು ತನ್ನ ಸೇವಕನ ಮೇಲೆಯೂ ಅವನ ಮನೆಯವರ ಮೇಲೆಯೂ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಾನು ಅವನಿಗೋಸ್ಕರ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೋ? ಇದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕರ ಮೇಲೆ ಅವನ ಮನೆಯವರ ಮೇಲೆ ಇಂಥ ಮಾತನ್ನು ಹೊರಿಸಬಾರದು. ಈ ವಿಷಯದಲ್ಲಿ ನಿನ್ನ ಸೇವಕನಿಗೆ ಸ್ವಲ್ಪವೂ ಗೊತ್ತಿರಲಿಲ್ಲ” ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಾನು ಅವರ ಪರವಾಗಿ ದೇವರ ಸನ್ನಿಧಿಯಲ್ಲಿ ವಿಚಾರಮಾಡಿದ್ದು ಇದೇ ಮೊದಲನೆಯ ಸಾರಿಯೇ? ಇಲ್ಲವೇ ಇಲ್ಲ, ಅರಸರು ತಮ್ಮ ಸೇವಕನಾದ ನನ್ನ ಮೇಲೆ ಹಾಗು ನನ್ನ ಮನೆಯವರ ಮೇಲೆ ಇಂಥ ಅಪವಾದವನ್ನು ಹೊರಿಸಬಾರದು. ಈ ವಿಷಯದಲ್ಲಿ ತಮ್ಮ ಸೇವಕನಾದ ನನಗೆ ಸ್ವಲ್ಪವೂ ಗೊತ್ತಿರಲಿಲ್ಲ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದಾವೀದನಿಗಾಗಿ ನಾನು ದೇವರಲ್ಲಿ ಪ್ರಾರ್ಥಿಸಿದ್ದು ಅದು ಮೊದಲನೆಯ ಸಲವಂತೂ ಅಲ್ಲವೇ ಅಲ್ಲ. ನನ್ನ ಮೇಲಾಗಲಿ ನನ್ನ ಬಂಧುಗಳ ಮೇಲಾಗಲಿ ತಪ್ಪು ಹೊರಿಸಬೇಡ. ನಾವೆಲ್ಲ ನಿನ್ನ ಸೇವಕರು. ಈಗ ಏನು ನಡೆಯುತ್ತಿದೆಯೋ ಅದು ನನಗೆ ಸ್ವಲ್ಪವೂ ತಿಳಿದಿಲ್ಲ” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಾನು ಅವನಿಗೋಸ್ಕರ ದೇವರನ್ನು ಕೇಳಿಕೊಂಡದ್ದು ಅದೇ ಮೊದಲನೆಯದೋ? ಅಲ್ಲವೇ ಅಲ್ಲ. ಅರಸನು ತನ್ನ ಸೇವಕನ ಮೇಲಾದರೂ ಇಲ್ಲವೆ ಅವನ ಕುಟುಂಬದವರ ಮೇಲಾದರೂ ಇಂಥ ಅಪವಾದವನ್ನು ಹೊರಿಸಬಾರದು, ಏಕೆಂದರೆ ಆ ಕಾರ್ಯದ ಬಗ್ಗೆ ನಮಗೇನೂ ತಿಳಿದಿಲ್ಲ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:15
10 ತಿಳಿವುಗಳ ಹೋಲಿಕೆ  

ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಅಬ್ಷಾಲೋಮನು ಯೆರೂಸಲೇವಿುನಿಂದ ಸಮಾರಾಧನೆಗೆಂದು ಇನ್ನೂರು ಜನರನ್ನು ಕರಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು; ಅವರಿಗೇನೂ ಗೊತ್ತಿರಲಿಲ್ಲ.


ಆಗ ಅರಸನು ಅವನಿಗೆ - ಅಹೀಮೆಲೆಕನೇ, ನೀನೂ ನಿನ್ನ ಮನೆಯವರೂ ಸಾಯಲೇಬೇಕು ಎಂದು ಹೇಳಿ ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ -


ದಾವೀದನು ಯೆಹೋವನನ್ನು - ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿ ಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟದರಿಂದ


ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ - ನೀನು ನೆಟ್ಟಗೆ ಹೋಗಿ ಅವರ ಮೇಲೆ ಬೀಳಬೇಡ; ಅವರ ಹಿಂದಳವನ್ನು ಸುತ್ತಿಕೊಂಡು ಹೋಗಿ ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.


ಅರಸನ ಮನೆಯವರನ್ನು ದಾಟಿಸುವದಕ್ಕೋಸ್ಕರವೂ ಅವರಿಗೆ ಬೇಕಾದ ಸಹಾಯ ಮಾಡುವದಕ್ಕೋಸ್ಕರವೂ ದಡದಿಂದ ದಡಕ್ಕೆ ಹೋಗುತ್ತಾ ಬರುತ್ತಾ ಇದ್ದನು. ಅರಸನು ಯೊರ್ದನ್ ಹೊಳೆಯನ್ನು ದಾಟಿಬಂದ ಕೂಡಲೆ ಗೇರನ ಮಗನಾದ ಶಿವ್ಮಿುಯು ಸಾಷ್ಟಾಂಗನಮಸ್ಕಾರ ಮಾಡಿ ಅವನಿಗೆ -


ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ; ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಅವನು ನೆನಸದಿರಲಿ, ಲಕ್ಷಿಸದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು