Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:19 - ಕನ್ನಡ ಸತ್ಯವೇದವು J.V. (BSI)

19 ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ, ಶಿಶುಬಾಲಕರನ್ನೂ ದನ, ಕುರಿ, ಕತ್ತೆಗಳನ್ನು, ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅನಂತರ ಅವನು ಯಾಜಕರ ಪಟ್ಟಣವಾದ ನೋಬಕ್ಕೆ ಹೋಗಿ ಅಲ್ಲಿನ ಸ್ತ್ರೀಪುರುಷರನ್ನೂ ಶಿಶುಬಾಲಕರನ್ನೂ ದನಕುರಿಕತ್ತೆಗಳನ್ನೂ ಕತ್ತಿಯಿಂದ ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೋಬ್ ಪಟ್ಟಣವು ಯಾಜಕರ ನಗರವಾಗಿತ್ತು. ದೋಯೇಗನು ನೋಬ್ ಪಟ್ಟಣದ ಎಲ್ಲ ಜನರನ್ನೂ ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಹಸುಗೂಸುಗಳನ್ನೂ ತನ್ನ ಖಡ್ಗದಿಂದ ಕೊಂದುಹಾಕಿದನು. ದೋಯೇಗನು ಅವರ ಹಸುಗಳನ್ನೂ ಕತ್ತೆಗಳನ್ನೂ ಕುರಿಗಳನ್ನೂ ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಯಾಜಕರ ಪಟ್ಟಣವಾದ ನೋಬಿನಲ್ಲಿ ಇರುವ ಪುರುಷರನ್ನೂ, ಸ್ತ್ರೀಯರನ್ನೂ, ಮಕ್ಕಳನ್ನೂ, ಕೂಸುಗಳನ್ನೂ, ಎತ್ತುಗಳನ್ನೂ, ಕತ್ತೆಗಳನ್ನೂ, ಕುರಿಗಳನ್ನೂ ಖಡ್ಗದಿಂದ ಹೊಡೆದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:19
13 ತಿಳಿವುಗಳ ಹೋಲಿಕೆ  

ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ಹೀಗಿರಲು ನಿಮ್ಮ ಕುಲಗಳವರಿಗೆ ವಿರುದ್ಧವಾಗಿ ಯುದ್ಧಘೋಷವು ಏಳುವದು; ಕಾಳಗದ ದಿನದಲ್ಲಿ ಶಲ್ಮಾನನು ತಾಯಿಗಳನ್ನು ಮಕ್ಕಳ ಸಹಿತ ಬಂಡೆಗೆ ಅಪ್ಪಳಿಸಿ ಬೇತ್ಅರ್ಬೇಲ್ ಪಟ್ಟಣವನ್ನು ಸೂರೆಮಾಡಿದಂತೆ ನಿಮ್ಮ ಎಲ್ಲಾ ಕೋಟೆಗಳು ಸೂರೆಮಾಡಲ್ಪಡುವವು.


ಇದೇ ದಿವಸ [ಶತ್ರುಗಳು] ನೋಬಿನಲ್ಲಿ ಬೀಡುಗೊಳ್ಳುವರು; ಚೀಯೋನ್ ನಗರಿಯ ಪರ್ವತದ ಕಡೆಗೆ, ಯೆರೂಸಲೇವಿುನ ಬೆಟ್ಟದ ಕಡೆಗೆ, ಕೈ ಬೀಸುತ್ತಾರೆ.


ಬೇತೇಲ್ ಎಂಬ ಊರುಗಳೂ, ಅನಾತೋತ್,


ಕೂಡಲೆ ಸೌಲನು ಅಹೀಟೂಬನ ಮಗನೂ ಯಾಜಕನೂ ಆಗಿದ್ದ ಅಹೀಮೆಲೆಕನನ್ನು ಅವನ ಕುಟುಂಬಕ್ಕೆ ಸೇರಿದ ನೋಬದ ಬೇರೆ ಎಲ್ಲಾ ಯಾಜಕರೊಡನೆ ಕರೇ ಕಳುಹಿಸಿದನು. ಅವರೆಲ್ಲರೂ ಅರಸನ ಸನ್ನಿಧಿಗೆ ಬರಲು ಅರಸನು -


ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು - ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.


ದಾವೀದನು ನೋಬ್ ಊರಲ್ಲಿದ್ದ ಯಾಜಕನಾದ ಅಹೀಮೆಲೆಕನ ಬಳಿಗೆ ಬಂದನು. ಅಹೀಮೆಲೆಕನು ದಾವೀದನನ್ನು ಭಯಭಕ್ತಿಯಿಂದ ಎದುರುಗೊಂಡು - ನಿನ್ನ ಜೊತೆಯಲ್ಲಿ ಒಬ್ಬನಾದರೂ ಇಲ್ಲವಲ್ಲಾ! ನೀನು ಒಬ್ಬನೇ ಬಂದದ್ದೇಕೆ ಎಂದು ಅವನನ್ನು ಕೇಳಲು ಅವನು -


ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.


ಅವರು ಪಟ್ಟಣದಲ್ಲಿದ್ದ ಗಂಡಸರನ್ನೂ ಹೆಂಗಸರನ್ನೂ ಹುಡುಗರನ್ನೂ ಮುದುಕರನ್ನೂ ದನಕುರಿಕತ್ತೆಗಳನ್ನೂ ನಿಶ್ಶೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಇದೂ ಇದರಲ್ಲಿರುವದೆಲ್ಲವೂ ಕೇವಲ ಯೆಹೋವನ ಸೊತ್ತೇ ಎಂದು ತಿಳಿಯಿರಿ. ಸೂಳೆಯಾದ ರಾಹಾಬಳೂ ಅವಳ ಸಂಗಡ ಮನೆಯಲ್ಲಿರುವವರೆಲ್ಲರೂ ಉಳಿಯಲಿ; ನಾವು ಕಳುಹಿಸಿದ ದೂತರನ್ನು ಅವಳು ಅಡಗಿಸಿಟ್ಟಳಲ್ಲಾ.


ಆತನಿಗೆ - ಇವರು ಹೇಳುವದನ್ನು ಕೇಳುತ್ತೀಯಾ ಎಂದು ಹೇಳಲು ಯೇಸು - ಹೌದು, ಕೇಳುತ್ತೇನೆ, ಸಣ್ಣ ಮಕ್ಕಳ ಬಾಯಿಂದಲೂ ಮೊಲೇಕೂಸುಗಳ ಬಾಯಿಂದಲೂ ಸ್ತೋತ್ರವನ್ನು ಸಿದ್ಧಿಗೆ ತಂದಿ ಎಂಬದನ್ನು ನೀವು ಎಂದಾದರೂ ಓದಲಿಲ್ಲವೋ? ಅಂದನು.


ಅವರ ಅರಸನಾದ ಅಗಾಗನನ್ನು ಸಜೀವಿಯಾಗಿ ಹಿಡಿದು ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು