Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 22:7 - ಕನ್ನಡ ಸತ್ಯವೇದವು J.V. (BSI)

7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ - ಬೆನ್ಯಾಮೀನನ ಮಕ್ಕಳೇ, ಕೇಳಿರಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷೇತೋಟಗಳನ್ನೂ ಕೊಡುವನೋ ಎಲ್ಲರನ್ನೂ ಸಹಸ್ರಾಧಿಪತಿಗಳನ್ನಾಗಲಿ ಶತಾಧಿಪತಿಗಳನ್ನಾಗಲಿ ಮಾಡುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಮಕ್ಕಳೇ ಕೇಳಿರಿ. ನೀವೆಲ್ಲರೂ ನನಗೆ ಒಳಸಂಚು ಮಾಡುವುದೇಕೆ? ಇಷಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನು, ದ್ರಾಕ್ಷಿತೋಟಗಳನ್ನು ಕೊಡುವನೋ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಅವನು ತನ್ನ ಸುತ್ತಲೂ ನಿಂತಿದ್ದ ಪರಿವಾರದವರಿಗೆ, “ಬೆನ್ಯಾಮೀನನ ಕುಲಪುತ್ರರೇ ಕೇಳಿ; ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ಮಾಡುವುದೇಕೆ? ಜೆಸ್ಸೆಯನ ಮಗನು ನಿಮ್ಮೆಲ್ಲರಿಗೂ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಯೇ? ಎಲ್ಲರನ್ನು ಸಹಸ್ರಾಧಿಪತಿಗಳನ್ನಾಗಲಿ, ಶತಾಧಿಪತಿಗಳನ್ನಾಗಲಿ ಮಾಡುತ್ತಾನೆಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೌಲನು ತನ್ನ ಸುತ್ತಲೂ ನಿಂತಿದ್ದ ಅಧಿಕಾರಿಗಳಿಗೆ, “ಬೆನ್ಯಾಮೀನನ ಜನರೇ, ಕೇಳಿ! ಇಷಯನ ಮಗನಾದ ದಾವೀದನು ನಿಮಗೆ ಹೊಲಗಳನ್ನೂ ದ್ರಾಕ್ಷಿತೋಟಗಳನ್ನೂ ಕೊಡುತ್ತಾನೆಂದು ತಿಳಿದಿರುವಿರಾ? ದಾವೀದನು ನಿಮಗೆ ಸಹಸ್ರಾಧಿಪತಿಗಳಾಗಿ ಮತ್ತು ಶತಾಧಿಪತಿಗಳಾಗಿ ಬಡ್ತಿ ನೀಡುತ್ತಾನೆಂದು ನೀವು ತಿಳಿದಿರುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಸೌಲನು ಸುತ್ತಲು ನಿಂತಿದ್ದ ಸೇವಕರಿಗೆ, “ಬೆನ್ಯಾಮೀನನ ಮಕ್ಕಳೇ, ಕೇಳಿರಿ. ನೀವೆಲ್ಲರೂ ನನಗೆ ವಿರೋಧವಾಗಿ ಒಳಸಂಚು ನಡೆಸುವಂತೆ ಇಷಯನ ಮಗನು ನಿಮ್ಮೆಲ್ಲರಿಗೆ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ ಕೊಡುವನೋ? ನಿಮ್ಮೆಲ್ಲರನ್ನು ಸಾವಿರಕ್ಕೆ ನಾಯಕರಾಗಿಯೂ, ನೂರಕ್ಕೆ ನಾಯಕರಾಗಿಯೂ ಮಾಡುವನೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 22:7
14 ತಿಳಿವುಗಳ ಹೋಲಿಕೆ  

ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದು ನೋಡಿ ಇಸ್ರಾಯೇಲ್ಯರೆಲ್ಲರೂ ಅವನಿಗೆ - ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲ್ಯರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ; ದಾವೀದನವರೇ, ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.


ಆ ದಿನದಲ್ಲಿ ಜನಾಂಗಗಳು ತಮಗೆ ಧ್ವಜಪ್ರಾಯನಾಗಿ ನಿಂತಿರುವ ಇಷಯನ ಅಂಕುರದವನನ್ನು ಆಶ್ರಯಿಸುವರು; ಅವನ ವಿಶ್ರಮ ಸ್ಥಾನವು ವೈಭವವುಳ್ಳದ್ದಾಗಿರುವದು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವದು, ಅದರ ಬೇರಿನಿಂದ ಹೊರಟ ತಳಿರು ಫಲಿಸುವದು;


ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.


ನಾಬಾಲನು ಅವರಿಗೆ - ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ!


ಆಗ ಸೌಲನು ಅವನಿಗೆ - ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು ದೈವೋತ್ತರವನ್ನು ತಿಳಿಸಿದ್ದೇಕೆ ಎಂದು ಕೇಳಲು ಅವನು -


ಆಗ ಸೌಲನ ಸೇವಕರ ಬಳಿಯಲ್ಲಿ ನಿಂತಿದ್ದ ಎದೋಮ್ಯನಾದ ದೋಯೇಗನು - ಇಷಯನ ಮಗನು ನೋಬದಲ್ಲಿರುವ ಅಹೀಟೂಬನ ಮಗನಾದ ಅಹೀಮೆಲೆಕನ ಬಳಿಗೆ ಬಂದದ್ದನ್ನು ಕಂಡೆನು.


ಆಗ ಸೌಲನು ಬಹಳವಾಗಿ ಉರಿಗೊಂಡು ಯೋನಾತಾನನಿಗೆ - ಎಲೋ, ದುಷ್ಟ ದಾಸಿಯ ಮಗನೇ, ನೀನು ಇಷಯನ ಮಗನೊಡನೆ ಸ್ನೇಹದಿಂದಿರುವದು ನನಗೆ ಗೊತ್ತಿಲ್ಲವೋ? ಇದರಿಂದ ನಿನಗೂ ನಿನ್ನನ್ನು ಹೆತ್ತವಳಿಗೂ ಮಾನಭಂಗವಾಗುವದು.


ಮರುದಿವಸದಲ್ಲಿಯೂ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿಯೂ ದಾವೀದನ ಸ್ಥಾನವು ಬರಿದಾಗಿದ್ದದರಿಂದ ಸೌಲನು - ಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.


ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಾ ಕಾರ್ಯಗಳಲ್ಲಿ ಇವನು ವಿವೇಕದಿಂದ ನಡೆಯುತ್ತಿದ್ದನು.


ತರುವಾಯ ಅರಸನಾದ ದಾವೀದನು ತನ್ನ ಹತ್ತಿರ ಇದ್ದ ಸೈನಿಕರನ್ನು ಲೆಕ್ಕಿಸಿ ಅವರ ಮೇಲೆ ಸಹಸ್ರಾಧಿಪತಿಗಳನ್ನೂ ಶತಾಧಿಪತಿಗಳನ್ನೂ ನೇವಿುಸಿದನು.


[ಒಂದಾನೊಂದು ದಿವಸ] ಬೆನ್ಯಾಮೀನ್ ಯೂದ ಕುಲದವರಲ್ಲಿ ಕೆಲವರು ದಾವೀದನಿದ್ದ ದುರ್ಗದ ಬಳಿಗೆ ಬರಲು ದಾವೀದನು ಹೊರಗೆ ಹೋಗಿ ಅವರೆದುರಿಗೆ ನಿಂತು ಅವರಿಗೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು