1 ಸಮುಯೇಲ 23:11 - ಕನ್ನಡ ಸತ್ಯವೇದವು J.V. (BSI)11 ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ? ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲ್‍ದೇವರಾದ ಯೆಹೋವನೇ, ಈ ವಿಷಯದಲ್ಲಿ ಉತ್ತರ ದಯಪಾಲಿಸು ಎಂದು ಪ್ರಾರ್ಥಿಸಲು ಅವನು ಬರುವನೆಂಬದಾಗಿ ಯೆಹೋವನಿಂದ ಉತ್ತರಸಿಕ್ಕಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲರ ದೇವರಾದ ಯೆಹೋವನೇ ಈ ವಿಷಯದಲ್ಲಿ ಉತ್ತರ ದಯಪಾಲಿಸು” ಎಂದು ಪ್ರಾರ್ಥಿಸಲು ಅವನು ಬರುವನೆಂಬುದಾಗಿ ಯೆಹೋವನಿಂದ ಉತ್ತರ ಸಿಕ್ಕಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೇ? ಕೆಯೀಲಾ ಪುರಜನರು ನನ್ನನ್ನು ಅವನ ಕೈಗೆ ಒಪ್ಪಿಸುವರೇ? ಇಸ್ರಯೇಲ ದೇವರಾದ ಸರ್ವೇಶ್ವರಾ, ಈ ವಿಷಯದಲ್ಲಿ ಉತ್ತರ ದಯಪಾಲಿಸಿ,” ಎಂದು ಪ್ರಾರ್ಥಿಸಿದನು. ಸೌಲನು ಬರುವನೆಂಬುದಾಗಿ ಸರ್ವೇಶ್ವರನಿಂದ ಉತ್ತರ ಸಿಕ್ಕಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೌಲನು ಕೆಯೀಲಾಕ್ಕೆ ಬರುತ್ತಾನೆಯೇ? ಕೆಯೀಲಾದ ಜನರು ನನ್ನನ್ನು ಸೌಲನಿಗೆ ಒಪ್ಪಿಸುತ್ತಾರೆಯೇ? ಇಸ್ರೇಲರ ದೇವರಾದ ಯೆಹೋವನೇ, ನಾನು ನಿನ್ನ ಸೇವಕ! ದಯವಿಟ್ಟು ನನಗೆ ತಿಳಿಸು!” ಎಂದು ಪ್ರಾರ್ಥಿಸಿದನು. ಯೆಹೋವನು, “ಸೌಲನು ಬರುತ್ತಾನೆ” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಕೆಯೀಲಾ ಪಟ್ಟಣದವರು ನನ್ನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡುವರೋ? ನಿಮ್ಮ ಸೇವಕನು ಕೇಳಿದ ಹಾಗೆ ಸೌಲನು ಇಲ್ಲಿಗೆ ಬರುವನೋ? ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ದಯಮಾಡಿ ಇದನ್ನು ನಿಮ್ಮ ಸೇವಕನಿಗೆ ತಿಳಿಸಿರಿ,” ಎಂದನು. ಅದಕ್ಕೆ ಯೆಹೋವ ದೇವರು, “ಅವನು ಬರುವನು,” ಎಂದರು. ಅಧ್ಯಾಯವನ್ನು ನೋಡಿ |