Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:12 - ಕನ್ನಡ ಸತ್ಯವೇದವು J.V. (BSI)

12 ದಾವೀದನು ತಿರಿಗಿ ಯೆಹೋವನನ್ನು - ಕೆಯೀಲದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ ಎಂದು ಕೇಳಿದಾಗ ಆತನು - ಒಪ್ಪಿಸಿಕೊಡುವರು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ದಾವೀದನು ಪುನಃ ಸರ್ವೇಶ್ವರನನ್ನು, ಕೆಯೀಲಾದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೇ?” ಎಂದು ಕೇಳಿದಾಗ ಅವರು, “ಒಪ್ಪಿಸಿಕೊಡುವರು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನಂತರ ದಾವೀದನು, “ಕೆಯೀಲಾದ ಜನರು ನನ್ನನ್ನೂ ನನ್ನ ಜನರನ್ನೂ ಸೌಲನಿಗೆ ಒಪ್ಪಿಸುತ್ತಾರೆಯೇ?” ಎಂದು ಕೇಳಿದನು. ಯೆಹೋವನು, “ಅವರು ಒಪ್ಪಿಸುತ್ತಾರೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅನಂತರ ದಾವೀದನು, “ಕೆಯೀಲಾ ಪಟ್ಟಣದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ?” ಎಂದು ಕೇಳಿದನು. ಯೆಹೋವ ದೇವರು, “ಅವರು ಒಪ್ಪಿಸಿಕೊಡುವರು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:12
12 ತಿಳಿವುಗಳ ಹೋಲಿಕೆ  

ನೀನು ನನ್ನನ್ನು ಶತ್ರುಗಳ ಕೈಕೆಳಗೆ ಬೀಳಿಸಲಿಲ್ಲ; ನಿರಾತಂಕಸ್ಥಾನದಲ್ಲಿ ನನ್ನನ್ನು ನಿಲ್ಲಿಸಿದಿ.


ಅರಸನು ಕುತೂಹಲದಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ; ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು ಎಂದು ಹೇಳಿದರು.


ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವದು. ನನ್ನ ರಕ್ಷಣೆಯು ಆತನಿಂದಲೇ.


ನಾವು ಯಾವಾತನಿಗೆ ಲೆಕ್ಕ ಒಪ್ಪಿಸಬೇಕಾಗಿದೆಯೋ ಆತನ ದೃಷ್ಟಿಗೆ ಸಮಸ್ತವೂ ಮುಚ್ಚುಮರೆಯಿಲ್ಲದ್ದಾಗಿಯೂ ಬೈಲಾದದ್ದಾಗಿಯೂ ಅದೆ. ಆತನ ಸನ್ನಿಧಿಯಲ್ಲಿ ಅಗೋಚರವಾಗಿರುವ ಸೃಷ್ಟಿಯು ಒಂದೂ ಇಲ್ಲ.


ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಜುವದಕ್ಕೆ ಅಗಾಧೋಪಾಯ ಮಾಡಿ ನಮ್ಮನ್ನು ಯಾರು ನೋಡಿಯಾರು, ಯಾರು ತಿಳಿದಾರು ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡಿಸುವವರ ಗತಿಯನ್ನು ಏನು ಹೇಳಲಿ!


ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು


ಮನುಷ್ಯರಲ್ಲಿ ಭರವಸವಿಡುವದಕ್ಕಿಂತ ಯೆಹೋವನನ್ನು ಆಶ್ರಯಿಸುವದು ಒಳ್ಳೇದು.


ನೀವು ನಮಗೆ ವಿರೋಧವಾಗಿ ಯುದ್ಧಕ್ಕೆ ಬಂದದ್ದೇಕೆ ಎಂದು ಯೆಹೂದ್ಯರು ಅವರನ್ನು ಕೇಳಲು ಅವರು - ಸಂಸೋನನನ್ನು ಹಿಡಿದು ಕಟ್ಟಿ ಅವನು ನಮಗೆ ಮಾಡಿದಂತೆಯೇ ಅವನಿಗೂ ಮಾಡಬೇಕೆಂದು ಬಂದೆವು ಎಂದು ಉತ್ತರಕೊಟ್ಟರು.


ನಾನು ಕೇಳಿದ ಸುದ್ದಿಯಂತೆ ಅವನು ನಿಜವಾಗಿ ಬರುವನೋ? ಕೆಯೀಲಾ ಊರಿನವರು ನನ್ನನ್ನು ಅವನ ಕೈಗೆ ಒಪ್ಪಿಸುವರೋ? ಇಸ್ರಾಯೇಲ್‍ದೇವರಾದ ಯೆಹೋವನೇ, ಈ ವಿಷಯದಲ್ಲಿ ಉತ್ತರ ದಯಪಾಲಿಸು ಎಂದು ಪ್ರಾರ್ಥಿಸಲು ಅವನು ಬರುವನೆಂಬದಾಗಿ ಯೆಹೋವನಿಂದ ಉತ್ತರಸಿಕ್ಕಿತು.


ಯೆಹೋವನು ತಿಳಿಸಿದ್ದರಿಂದ [ಅವರ ಕುತಂತ್ರವು] ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ.


ಹೊತ್ತಾರೆ ನಿನ್ನ ಕೃಪೆಯು ನನಗೆ ಪ್ರಕಟವಾಗಲಿ; ನಿನ್ನಲ್ಲಿ ಭರವಸವಿಟ್ಟಿದ್ದೇನಲ್ಲಾ. ನಾನು ನಡೆಯತಕ್ಕ ಮಾರ್ಗವನ್ನು ತಿಳಿಸು; ನನ್ನ ಮನಸ್ಸನ್ನು ನಿನ್ನಲ್ಲಿಯೇ ಇಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು