1 ಸಮುಯೇಲ 23:2 - ಕನ್ನಡ ಸತ್ಯವೇದವು J.V. (BSI)2 ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು, “ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡೆಯಬಹುದೋ” ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ, “ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು, “ನಾನು ಹೋಗಿ ಆ ಫಿಲಿಷ್ಟಿಯರ ಮೇಲೆ ದಾಳಿಮಾಡಲೆ?” ಎಂದು ಸರ್ವೇಶ್ವರನನ್ನು ಕೇಳಿದನು. ಸರ್ವೇಶ್ವರ ಅವನಿಗೆ, “ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಕೆಯೀಲಾ ಊರನ್ನು ರಕ್ಷಿಸು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನು, “ನಾನು ಹೋಗಿ ಈ ಫಿಲಿಷ್ಟಿಯರೊಡನೆ ಹೋರಾಡಲೇ?” ಎಂದು ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಹೋಗು ಫಿಲಿಷ್ಟಿಯರ ಮೇಲೆ ಆಕ್ರಮಣ ಮಾಡು. ಕೆಯೀಲಾವನ್ನು ರಕ್ಷಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದ್ದರಿಂದ ದಾವೀದನು, “ನಾನು ಈ ಫಿಲಿಷ್ಟಿಯರನ್ನು ಹೊಡೆಯಲು ಹೋಗಲೋ?” ಎಂದು ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು, “ನೀನು ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ನಗರವನ್ನು ರಕ್ಷಿಸು,” ಎಂದರು. ಅಧ್ಯಾಯವನ್ನು ನೋಡಿ |