Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:20 - ಕನ್ನಡ ಸತ್ಯವೇದವು J.V. (BSI)

20 ಅರಸನು ಕುತೂಹಲದಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ; ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅರಸನು ತನ್ನ ಇಚ್ಛೆಯಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ. ಅವನನ್ನು ಅರಸನ ಕೈಗೆ ಒಪ್ಪಿಸುವ ಕೆಲಸ ನಮ್ಮದು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅರಸರು ಕುತೂಹಲದಂತೆ ನಮ್ಮ ಜೊತೆಯಲ್ಲಿ ಬರೋಣವಾಗಲಿ; ಅವನನ್ನು ತಮ್ಮ ಕೈಗೆ ಒಪ್ಪಿಸುವ ಕೆಲಸ ನಮ್ಮದು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಈಗ ರಾಜನೇ, ನಿನಗಿಷ್ಟ ಬಂದಾಗ ಯಾವ ಸಮಯದಲ್ಲೇ ಆಗಲಿ ಬಂದುಬಿಡು. ದಾವೀದನನ್ನು ನಿನಗೆ ಒಪ್ಪಿಸುವುದು ನಮ್ಮ ಕರ್ತವ್ಯ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಈಗ ಅರಸನೇ, ನೀನು ನಿನ್ನ ಪ್ರಾಣದ ಇಚ್ಛೆ ಇದ್ದ ಹಾಗೆ ಇಳಿದು ಬಾ. ಅವನನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವ ಭಾರವು ನಮ್ಮದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:20
11 ತಿಳಿವುಗಳ ಹೋಲಿಕೆ  

ದಾವೀದನು ತಿರಿಗಿ ಯೆಹೋವನನ್ನು - ಕೆಯೀಲದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ ಎಂದು ಕೇಳಿದಾಗ ಆತನು - ಒಪ್ಪಿಸಿಕೊಡುವರು ಎಂದು ಉತ್ತರಕೊಟ್ಟನು.


ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು; ನ್ಯಾಯತೀರ್ಪು ಯೆಹೋವನಿಂದಲೇ ಆಗುವದು.


ಸಜ್ಜನರ ಆಶೆಯು ಮಂಗಳಾಸ್ಪದ; ದುರ್ಜನರ ನಿರೀಕ್ಷೆಯು ರೋಷಾಸ್ಪದ.


ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ಲಯಹೊಂದುವನು. ದುಷ್ಟರ ನಿರೀಕ್ಷೆಯು ಭಂಗವಾಗುವದು.


ಅನ್ಯರು ನನಗೆ ವಿರೋಧವಾಗಿ ನಿಂತಿದ್ದಾರೆ; ಬಲಾತ್ಕಾರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ. ಸೆಲಾ.


ಅಬ್ನೇರನು ದಾವೀದನಿಗೆ - ನಾನು ಹೊರಟುಹೋಗಿ ಇಸ್ರಾಯೇಲ್ಯರನ್ನೆಲ್ಲಾ ಕೂಡಿಸಿ ನನ್ನ ಒಡೆಯನಾದ ಅರಸನ ಬಳಿಗೆ ಕರಕೊಂಡುಬರುವೆನು; ಅವರು ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುವರು; ನೀನು ನಿನ್ನ ಅಪೇಕ್ಷೆಯಂತೆ ಎಲ್ಲರ ಮೇಲೆ ದೊರೆತನಮಾಡಬಹುದು ಎಂದು ಹೇಳಲು ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟನು.


ಇಸ್ರಾಯೇಲ್ಯರ ಯಾವದಾದರೂ ಒಂದು ಊರಲ್ಲಿ ಇಳಿದುಕೊಂಡಿರುವ ಲೇವಿಯನು ಸ್ವಂತ ಮನಸ್ಸಿನಿಂದ ಆ ಊರನ್ನು ಬಿಟ್ಟು ಯೆಹೋವನು ಆದುಕೊಂಡ ಸ್ಥಳಕ್ಕೆ ಬಂದು


ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ; ಅವನ ನಿವಾಸವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು