Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:22 - ಕನ್ನಡ ಸತ್ಯವೇದವು J.V. (BSI)

22 ನೀವು ದಯವಿಟ್ಟು ಹೋಗಿ ಅವನು ತಿರುಗಾಡುವ ಸ್ಥಳವನ್ನೂ ಅಲ್ಲಿ ಅವನ ಗುರುತು ಕಂಡಿರುವವರನ್ನೂ ಸೂಕ್ಷ್ಮವಾಗಿ ವಿಚಾರಿಸಿ ಗೊತ್ತುಮಾಡಿಕೊಳ್ಳಿರಿ. ಅವನು ಬಹುಯುಕ್ತಿವಂತನೆಂದು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನೀವು ದಯವಿಟ್ಟು ಹೋಗಿ ಅವನು ಅಡಗಿಕೊಂಡಿರುವ ಸ್ಥಳವನ್ನು, ಅಲ್ಲಿ ಅವನನ್ನು ಕಂಡವರನ್ನೂ ಸೂಕ್ಷ್ಮವಾಗಿ ವಿಚಾರಿಸಿ, ತಿಳಿದುಕೊಳ್ಳಿರಿ. ಅವನು ಬಹು ಯುಕ್ತಿವಂತನೆಂದು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನೀವು ದಯವಿಟ್ಟು ಹೋಗಿ ಅವನು ತಿರುಗಾಡುವ ಸ್ಥಳವನ್ನೂ ಅಲ್ಲಿ ಅವನ ಗುರುತು ಕಂಡಿರುವವರನ್ನೂ ಸೂಕ್ಷ್ಮವಾಗಿ ವಿಚಾರಿಸಿ ಗೊತ್ತುಮಾಡಿಕೊಳ್ಳಿ. ಅವನು ಬಹಳ ಯುಕ್ತಿವಂತನೆಂದು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಹೋಗಿ, ಅವನ ಬಗ್ಗೆ ಹೆಚ್ಚು ತಿಳಿದುಕೊಳ್ಳಿ. ದಾವೀದನು ಎಲ್ಲಿ ನೆಲೆಸಿದ್ದಾನೆಂಬುದನ್ನೂ ಅವನನ್ನು ನೋಡಿದವರು ಯಾರೆಂಬುದನ್ನೂ ಕಂಡುಹಿಡಿಯಿರಿ. ಅವನು ಬಹಳ ಯುಕ್ತಿವಂತನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ನೀವು ದಯಮಾಡಿ ಹೋಗಿ ಅವನು ಹೆಜ್ಜೆ ಇಡುವ ಸ್ಥಳವನ್ನೂ, ಅಲ್ಲಿ ಅವನನ್ನು ನೋಡಿದವರು ಯಾರು ಎಂಬುದನ್ನೂ ಇನ್ನೂ ಸೂಕ್ಷ್ಮವಾಗಿ ತಿಳಿದುಕೊಂಡು ನೋಡಿರಿ. ಏಕೆಂದರೆ ಅವನು ಬಹು ಉಪಾಯದಿಂದ ಪ್ರವರ್ತಿಸುತ್ತಾನೆಂದು ನನಗೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:22
6 ತಿಳಿವುಗಳ ಹೋಲಿಕೆ  

ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡುಕೊಂಡು ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಆಗ ಸೌಲನು ಅವರಿಗೆ - ನೀವು ನನ್ನ ಮೇಲೆ ಕನಿಕರಪಟ್ಟದರಿಂದ ಯೆಹೋವನ ಆಶೀರ್ವಾದವು ನಿಮ್ಮ ಮೇಲಿರಲಿ.


ಆದದರಿಂದ ಅವನು ಅಡಗಿಕೊಳ್ಳತಕ್ಕ ಎಲ್ಲಾ ಗುಪ್ತಸ್ಥಳಗಳನ್ನು ಗೊತ್ತುಮಾಡಿಕೊಂಡು ನಿಜವಾದ ವರ್ತಮಾನವನ್ನು ನನಗೆ ಮುಟ್ಟಿಸಿರಿ. ನಾನು ನಿಮ್ಮ ಸಂಗಡ ಬರುವೆನು; ಅವನು ದೇಶದಲ್ಲಿರುವದಾದರೆ ಎಲ್ಲಾ ಯೆಹೂದ ಪ್ರಜೆಗಳ ಮಧ್ಯದಲ್ಲಾದರೂ ಹುಡುಕಿ ಅವನನ್ನು ಹಿಡಿಯುವೆನು ಅಂದನು.


ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.


ಅವನು ಈಗ ಒಂದು ಗುಹೆಯಲ್ಲಾಗಲಿ ಬೇರೆ ಯಾವದಾದರೊಂದು ಸ್ಥಳದಲ್ಲಾಗಲಿ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ ಜನರು ಇದನ್ನು ಕೇಳಿ ಅಬ್ಷಾಲೋಮನ ಪಕ್ಷದವರಿಗೆ ಮಹಾಪಜಯವಾಯಿತೆಂದು ಸುದ್ದಿ ಹಬ್ಬಿಸುವರು.


ಅರಸನು ಇದನ್ನು ಕೇಳಿ - ಅವನು ಎಲ್ಲಿರುತ್ತಾನೆಂದು ವಿಚಾರಿಸಿರಿ, ನಾನು ಅವನನ್ನು ಹಿಡಿಸುತ್ತೇನೆ ಎಂದು ಹೇಳಿದನು. ಪ್ರವಾದಿಯು ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು