1 ಸಮುಯೇಲ 23:26 - ಕನ್ನಡ ಸತ್ಯವೇದವು J.V. (BSI)26 ಸೌಲನು ಇದನ್ನು ಕೇಳಿ ಮಾವೋನ್ ಅರಣ್ಯಕ್ಕೆ ಬಂದು ಆ ಬೆಟ್ಟದ ಒಂದು ಕಡೆಯಲ್ಲಿ ಹೋಗುತ್ತಿದ್ದನು; ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವದಕ್ಕಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುವಷ್ಟರಲ್ಲಿ ಸೌಲನೂ, ಅವನ ಜನರೂ ಬಂದು ಅವರನ್ನು ಮುತ್ತಿಗೆ ಹಾಕುವುದಕ್ಕಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದರ ಇನ್ನೊಂದು ಕಡೆಯಲ್ಲಿ ದಾವೀದನೂ ಅವನ ಜನರೂ ಇದ್ದರು. ದಾವೀದನೂ ಅವನ ಜನರೂ ತಪ್ಪಿಸಿಕೊಳ್ಳುವುದಕ್ಕೆ ತ್ವರೆಪಡುತ್ತಿದ್ದರು. ಅಷ್ಟರಲ್ಲಿ ಸೌಲನೂ ಅವನ ಜನರೂ ಬಂದು ಅವರನ್ನು ಸುತ್ತಿ ಹಿಡಿಯುವುದಕ್ಕಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೌಲನು ಬೆಟ್ಟದ ಒಂದು ದಿಕ್ಕಿನಲ್ಲಿದ್ದನು. ದಾವೀದ ಮತ್ತು ಅವನ ಜನರು ಅದೇ ಬೆಟ್ಟದ ಮತ್ತೊಂದು ದಿಕ್ಕಿನಲ್ಲಿದ್ದರು. ದಾವೀದನು ಸೌಲನಿಂದ ದೂರ ಹೋಗಲು ತವಕಿಸುತ್ತಿದ್ದನು. ದಾವೀದನನ್ನು ಅವನ ಜನರೊಡನೆ ಬಂಧಿಸಲು ಸೌಲನು ತನ್ನ ಸೈನಿಕರೊಂದಿಗೆ ಬೆಟ್ಟದ ಸುತ್ತಲೂ ಹೋಗುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಸೌಲನು ಬೆಟ್ಟದ ಇನ್ನೊಂದು ಕಡೆಯಲ್ಲಿ ಹೋದನು. ದಾವೀದನೂ, ಅವನ ಜನರೂ ಬೆಟ್ಟದ ಆ ಕಡೆಯಲ್ಲಿ ಹೋದರು. ಸೌಲನಿಗೆ ಭಯಪಟ್ಟು ತಪ್ಪಿಸಿಕೊಂಡು ಹೋಗಲು ದಾವೀದನು ತ್ವರೆಪಡುತ್ತಿದ್ದರು. ಆಗ ಸೌಲನೂ, ಅವನ ಜನರೂ ಅವರನ್ನು ಹಿಡಿಯುವಂತೆ ಸುತ್ತಿಕೊಂಡರು. ಅಧ್ಯಾಯವನ್ನು ನೋಡಿ |