Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:28 - ಕನ್ನಡ ಸತ್ಯವೇದವು J.V. (BSI)

28 ಅವನು ದಾವೀದನನ್ನು ಹಿಡಿಯುವ ಕೆಲಸದಿಂದ ಹಿಂದಿರುಗಿ ಫಿಲಿಷ್ಟಿಯರಿಗೆ ವಿರೋಧವಾಗಿ ಹೊರಟನು. ಆದದರಿಂದ ಆ ಬೆಟ್ಟಕ್ಕೆ ತಡೆಬೆಟ್ಟ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರ ವಿರುದ್ಧ ಯುದ್ಧಮಾಡಲು ಹೊರಟನು. ಆದುದರಿಂದ ಆ ಬೆಟ್ಟಕ್ಕೆ “ಮಕ್ಹೆಲೋಕೆತ್” ಎಂದರೆ “ಪಾರಾದ ಬಂಡೆ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆದ್ದರಿಂದ ಅವನು ದಾವೀದನನ್ನು ಹಿಡಿಯುವ ಕೆಲಸವನ್ನು ಬಿಟ್ಟು ಫಿಲಿಷ್ಟಿಯರಿಗೆ ವಿರುದ್ಧ ಯುದ್ಧಕ್ಕೆ ಹೊರಟನು. ಈ ಕಾರಣ ಆ ಬೆಟ್ಟಕ್ಕೆ’ಅಡ್ಡಬೆಟ್ಟ’ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆದ್ದರಿಂದ ದಾವೀದನನ್ನು ಅಟ್ಟಿಸಿಕೊಂಡು ಹೋಗುವುದನ್ನು ಸೌಲನು ನಿಲ್ಲಿಸಿ ಫಿಲಿಷ್ಟಿಯರೊಡನೆ ಹೋರಾಡಲು ಹೋದನು. ಆದ್ದರಿಂದಲೇ ಜನರು ಆ ಜಾಗವನ್ನು “ಜಾರುಬಂಡೆ” ಎಂದು ಕರೆಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಆದ್ದರಿಂದ ಸೌಲನು ದಾವೀದನನ್ನು ಹಿಂದಟ್ಟುವುದನ್ನು ಬಿಟ್ಟು, ಫಿಲಿಷ್ಟಿಯರಿಗೆ ಎದುರಾಗಿ ಹೋದನು. ಆದಕಾರಣ ಆ ಸ್ಥಳಕ್ಕೆ ಸೇಲಾ ಅಮ್ಮಾಲೆಕೋತ್ ಎಂದರೆ, ಅಡ್ಡ ಬೆಟ್ಟ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:28
6 ತಿಳಿವುಗಳ ಹೋಲಿಕೆ  

ಆಗಲೇ ಒಬ್ಬ ದೂತನು ಸೌಲನ ಬಳಿಗೆ ಬಂದು ಅವನಿಗೆ - ಬೇಗ ಬಾ; ಫಿಲಿಷ್ಟಿಯರು ದೇಶದೊಳಕ್ಕೆ ನುಗ್ಗಿದ್ದಾರೆ ಎಂದು ತಿಳಿಸಿದ್ದರಿಂದ


ದಾವೀದನು ಅಲ್ಲಿಂದ ಗಟ್ಟಾಹತ್ತಿ ಹೋಗಿ ಏಂಗೆದಿಯ ಗಿರಿಗಳಲ್ಲಿ ವಾಸಿಸಿದನು.


ಸೌಲನು ಫಿಲಿಷ್ಟಿಯರನ್ನು ಓಡಿಸಿ ಹಿಂದಿರುಗಿದಾಗ ದಾವೀದನು ಏಂಗೆದಿಯ ಅರಣ್ಯದಲ್ಲಿದ್ದಾನೆಂದು ಅವನಿಗೆ ತಿಳಿದುಬಂದಿತು.


ಸೌಲನು ತನ್ನ ಜನರೊಡನೆ ದಾವೀದನನ್ನು ಹಿಡಿಯುವದಕ್ಕೆ ಬಂದನು. ಈ ವರ್ತಮಾನವು ದಾವೀದನಿಗೆ ಮುಟ್ಟಲು ಅವನು ಮಾವೋನಿನಲ್ಲಿರುವ ಒಂದು ಕಡಿದಾದ ಬೆಟ್ಟಕ್ಕೆ ಹೋಗಿ ಅಡಗಿಕೊಂಡನು.


ಆಗ ಅವನು ಎಲ್ಲಾ ಇಸ್ರಾಯೇಲ್ಯರಲ್ಲಿ ಶ್ರೇಷ್ಠರಾದ ಮೂರು ಸಾವಿರ ಮಂದಿ ಸೈನಿಕರನ್ನು ಆರಿಸಿಕೊಂಡು ಕಾಡು ಗುರಿಬಂಡೆಗಳಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹುಡುಕುವದಕ್ಕೋಸ್ಕರ ಹೊರಟನು.


ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು