Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:4 - ಕನ್ನಡ ಸತ್ಯವೇದವು J.V. (BSI)

4 ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಅವನು ಪುನಃ ಯೆಹೋವನನ್ನು ಕೇಳಿದನು. ಆತನು, “ನೀನೆದ್ದು ಕೆಯೀಲಕ್ಕೆ ಹೋಗು. ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದುದರಿಂದ ಮತ್ತೆ ಸರ್ವೇಶ್ವರನನ್ನು ಕೇಳಿದನು. ಅವರು, “ನೀನೆದ್ದು ಕೆಯೀಲಾಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದಾವೀದನು ಮತ್ತೆ ಯೆಹೋವನನ್ನು ಕೇಳಿದನು. ಯೆಹೋವನು ದಾವೀದನಿಗೆ, “ಕೆಯೀಲಾಕ್ಕೆ ಹೋಗು. ಫಿಲಿಷ್ಟಿಯರನ್ನು ಸೋಲಿಸಲು ನಾನು ನಿನಗೆ ಸಹಾಯ ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದಾವೀದನು ತಿರುಗಿ ಯೆಹೋವ ದೇವರನ್ನು ಕೇಳಿದನು. ಅದಕ್ಕೆ ಯೆಹೋವ ದೇವರು ಉತ್ತರವಾಗಿ, “ನೀನೆದ್ದು ಕೆಯೀಲಾ ನಗರಕ್ಕೆ ಹೋಗು; ಏಕೆಂದರೆ ನಾನು ಫಿಲಿಷ್ಟಿಯರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:4
14 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಗಿದ್ಯೋನನಿಗೆ - ನೀರನ್ನು ನೆಕ್ಕಿದ ಆ ಮುನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ವಿುದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಎಂದು ಆಜ್ಞಾಪಿಸಿದನು.


ನಾವೂ ಅವರೂ ಪಟ್ಟಣಕ್ಕೆ ದೂರವಾದ ಮೇಲೆ ನೀವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಪಟ್ಟಣದೊಳಗೆ ನುಗ್ಗಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮ ಕೈಗೆ ಒಪ್ಪಿಸುವನು.


ಆತನು ತನ್ನ ದೃಷ್ಟಿಯಲ್ಲಿ ಅಲ್ಪವಾಗಿರುವ ಈ ಕಾರ್ಯದ ಹೊರತಾಗಿ ಮೋವಾಬ್ಯರನ್ನೂ ನಿಮ್ಮ ಕೈಗೆ ಒಪ್ಪಿಸುವನು.


ದಾವೀದನು ಯೆಹೋವನನ್ನು - ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿ ಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟದರಿಂದ


ಅವನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದರೂ ಆತನು ಅವನಿಗೆ ಕನಸುಗಳಿಂದಾಗಲಿ ಊರೀವಿುನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲೇ ಇಲ್ಲ.


ಅವನು ತಿರಿಗಿ ದೇವರಿಗೆ - ಸ್ವಾಮೀ, ಸಿಟ್ಟಾಗಬಾರದು; ಇನ್ನೊಂದು ಸಾರಿ ಮಾತಾಡುತ್ತೇನೆ. ಇನ್ನು ಒಂದೇ ಸಾರಿ ಈ ತುಪ್ಪಟದಿಂದ ನಿನ್ನನ್ನು ಪರೀಕ್ಷಿಸುವದಕ್ಕೆ ಅಪ್ಪಣೆಯಾಗಲಿ; ಈ ತುಪ್ಪಟವು ಮಾತ್ರವೇ ಒಣಗಿದ್ದು ನೆಲದ ಮೇಲೆಲ್ಲಾ ಹನಿಬಿದ್ದಿರಲಿ ಅಂದನು.


ಅವರು - ಆ ಮನುಷ್ಯನು ಇಲ್ಲಿಗೆ ಬರುವನೋ ಎಂದು ಯೆಹೋವನನ್ನು ವಿಚಾರಿಸಿದಾಗ ಆತನು - ಬಂದಿದ್ದಾನೆ; ಇಗೋ, ಸಾಮಾನುಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಉತ್ತರಕೊಟ್ಟನು.


ನಾನು ಹೋಗಿ ಆ ಫಿಲಿಷ್ಟಿಯರನ್ನು ಹೊಡಿಯಬಹುದೋ ಎಂದು ಯೆಹೋವನನ್ನು ಕೇಳಿದನು. ಆತನು ಅವನಿಗೆ - ಹೋಗಿ ಫಿಲಿಷ್ಟಿಯರನ್ನು ಹೊಡೆದು ಕೆಯೀಲಾ ಊರನ್ನು ರಕ್ಷಿಸು ಎಂದು ಉತ್ತರಕೊಟ್ಟನು.


ಆದರೆ ದಾವೀದನ ಸೈನಿಕರು ಅವನಿಗೆ - ನಮಗೆ ಯೆಹೂದ ಸೀಮೆಯಲ್ಲಿಯೇ ಇಷ್ಟು ಭಯವಿರುವಲ್ಲಿ ಫಿಲಿಷ್ಟಿಯ ಸೈನ್ಯದೊಡನೆ ಯುದ್ಧಮಾಡುವದಕ್ಕಾಗಿ ಕೆಯೀಲಕ್ಕೆ ಹೋದರೆ ಅಲ್ಲಿ ಎಷ್ಟೋ ಅಧಿಕವಾದ ಭಯವುಂಟಾಗುವದಲ್ಲವೇ ಅಂದರು.


ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.


ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು.


ಅನಂತರ ದಾವೀದನು ಯೆಹೋವನನ್ನು - ನಾನು ಯೆಹೂದದೇಶದ ಯಾವದಾದರೊಂದು ಪಟ್ಟಣಕ್ಕೆ ಹೋಗಬಹುದೋ ಎಂದು ಕೇಳಲು ಆತನು - ಹೋಗಬಹುದು ಅಂದನು. ಅವನು ತಿರಿಗಿ - ಯಾವ ಊರಿಗೆ ಹೋಗಲಿ ಎಂದು ಕೇಳಿದ್ದಕ್ಕೆ - ಹೆಬ್ರೋನಿಗೆ ಹೋಗು ಎಂಬ ಉತ್ತರ ಸಿಕ್ಕಿತು.


ಅದೇ ದಿವಸ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ಎದ್ದು ಹೋಗಿ ಶತ್ರುಗಳ ಪಾಳೆಯದ ಮೇಲೆ ಬೀಳು; ಅದನ್ನು ನಿನಗೆ ಒಪ್ಪಿಸಿಕೊಟ್ಟಿದ್ದೇನೆ.


ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ ಎಂದು ಕೇಳಲು ಆತನು - ಹೋಗು, ನಾನು ಅವರನ್ನು ನಿನ್ನ ಕೈಗೆ ಒಪ್ಪಿಸುವೆನು ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು