Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:5 - ಕನ್ನಡ ಸತ್ಯವೇದವು J.V. (BSI)

5 ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ದಾವೀದನು ತನ್ನ ಜನರೊಡನೆ ಕೆಯೀಲಾಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿದನು. ಅವರನ್ನು ಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲಾದವರನ್ನು ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಹೀಗೆ ದಾವೀದನು ಮತ್ತು ಅವನ ಜನರು ಕೆಯೀಲಾಕ್ಕೆ ಹೋದರು. ದಾವೀದನ ಜನರು ಫಿಲಿಷ್ಟಿಯರೊಡನೆ ಹೋರಾಡಿ ಅವರನ್ನು ಸೋಲಿಸಿ ಅವರ ಹಸುಗಳನ್ನು ವಶಪಡಿಸಿಕೊಂಡರು. ದಾವೀದನು ಈ ರೀತಿಯಲ್ಲಿ ಕೆಯೀಲಾದ ಜನರನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಹಾಗೆಯೇ ದಾವೀದನೂ, ಅವನ ಜನರೂ ಎದ್ದು ಕೆಯೀಲಾ ನಗರಕ್ಕೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ, ಅವರ ಪಶುಗಳನ್ನು ಹಿಡಿದುಕೊಂಡು ಬಂದು, ಅವರನ್ನು ಪೂರ್ಣವಾಗಿ ಸೋಲಿಸಿದರು. ಈ ಪ್ರಕಾರ ದಾವೀದನು ಕೆಯೀಲಾ ನಗರದ ನಿವಾಸಿಗಳನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:5
6 ತಿಳಿವುಗಳ ಹೋಲಿಕೆ  

ಆದದರಿಂದ ಅವನು ತಿರಿಗಿ ಯೆಹೋವನನ್ನು ಕೇಳಿದನು. ಆತನು - ನೀನೆದ್ದು ಕೆಯೀಲಕ್ಕೆ ಹೋಗು; ನಾನು ಫಿಲಿಷ್ಟಿಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು ಎಂದು ಉತ್ತರಕೊಟ್ಟನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು. ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿದಾಗ ಅವನು -


ಫಿಲಿಷ್ಟಿಯರು ತಿರಿಗಿ ಯುದ್ಧಕ್ಕೆ ಬರುವಲ್ಲಿ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಓಡಿಸಿಬಿಟ್ಟನು.


ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದೀ; ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನ ಮಾಡಿದ್ದೀ.


ಅವರನ್ನು ಹೊಡೆದು ಏಳಲಾರದಂತೆ ಮಾಡುವೆನು; ನನ್ನ ಪಾದದ ಕೆಳಗೆ ಬೀಳುವರು.


ಉಪಕಾರಕ್ಕೆ ಪ್ರತಿಯಾಗಿ ಅಪಕಾರ ಸಲ್ಲಿಸುವವರು ಒಳ್ಳೆಯದನ್ನು ಅನುಸರಿಸುವ ನನ್ನನ್ನು ಎದುರಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು