Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 23:9 - ಕನ್ನಡ ಸತ್ಯವೇದವು J.V. (BSI)

9 ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ - ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಿ ತರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆ ಎಂಬುದನ್ನು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಸೌಲನು ತನಗೆ ಕೇಡುಮಾಡಬೇಕೆಂದಿದ್ದಾನೆಂದು ದಾವೀದನು ತಿಳಿದು ಯಾಜಕನಾದ ಎಬ್ಯಾತಾರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದು ಹೇಳಿ ತರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸೌಲನು ತನ್ನ ವಿರುದ್ಧವಾಗಿ ಉಪಾಯಗಳನ್ನು ಮಾಡುತ್ತಿದ್ದಾನೆಂಬುದು ದಾವೀದನಿಗೆ ತಿಳಿಯಿತು. ಆಗ ದಾವೀದನು ಯಾಜಕನಾದ ಎಬ್ಯಾತಾರನಿಗೆ, “ಎಫೋದನ್ನು ತೆಗೆದುಕೊಂಡು ಬಾ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸೌಲನು ತನಗೆ ಕೇಡನ್ನು ಮಾಡಲು ಗುಟ್ಟಾಗಿ ಯೋಚಿಸುತ್ತಿದ್ದಾನೆಂದು ದಾವೀದನು ತಿಳಿದಿದ್ದರಿಂದ ಯಾಜಕನಾದ ಅಬಿಯಾತರನಿಗೆ, “ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 23:9
15 ತಿಳಿವುಗಳ ಹೋಲಿಕೆ  

ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ - ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಲು ಅವನು ತಂದನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು. ದಾವೀದನು ಕೆಯೀಲದಲ್ಲಿದ್ದಾನೆಂಬ ವರ್ತಮಾನವು ಸೌಲನಿಗೆ ಮುಟ್ಟಿದಾಗ ಅವನು -


[ಯೆಹೋವನ ಚಿತ್ತವನ್ನು ತಿಳುಕೊಳ್ಳುವದಕ್ಕೆ] ಅವನು ಮಹಾಯಾಜಕನಾದ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಯೆಹೋವನ ಸನ್ನಿಧಿಯಲ್ಲಿ ಊರೀಮ್ ಎಂಬ ವಸ್ತುವಿನ ಮೂಲಕ ಅವನಿಗೋಸ್ಕರ ವಿಚಾರಣೆಮಾಡುವನು. ಯೆಹೋಶುವನೂ ಇಸ್ರಾಯೇಲ್ಯರ ಸರ್ವಸಮೂಹದವರೂ ಅವನ ಮಾತಿನಂತೆ ಹೊರಡಲೂಬೇಕು ಬರಲೂಬೇಕು ಎಂದು ಆಜ್ಞಾಪಿಸಿದನು.


ಅಪೊಸ್ತಲರು ಅದನ್ನು ತಿಳಿದು ಓಡಿಹೋಗಿ ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ


ಅವರ ಆಲೋಚನೆಯು ಸೌಲನಿಗೆ ತಿಳಿದುಬಂತು. ಅವನನ್ನು ಕೊಲ್ಲುವದಕ್ಕಾಗಿ ಅವರು ಹಗಲಿರುಳೂ ಪಟ್ಟಣದ ಬಾಗಿಲುಗಳನ್ನು ಕಾಯುತ್ತಿದ್ದರು.


ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ಅಹೀಟೂಬನ ಮಗನಾದ ಅಹೀಮೆಲೆಕನ ಮಕ್ಕಳಲ್ಲೊಬ್ಬನಾದ ಎಬ್ಯಾತಾರನೆಂಬವನು ತಪ್ಪಿಸಿಕೊಂಡು ದಾವೀದನ ಬಳಿಗೆ ಓಡಿಬಂದು


ಅನಂತರ ಸೌಲನು ಅಹೀಯನಿಗೆ - ಏಫೋದನ್ನು ತೆಗೆದುಕೊಂಡು ಬಾ ಎಂದು ಆಜ್ಞಾಪಿಸಿದನು. ಆ ಕಾಲದಲ್ಲಿ ಇವನು ಇಸ್ರಾಯೇಲ್ಯರೊಳಗೆ ಏಫೋದನ್ನು ಧರಿಸುತ್ತಿದ್ದನಷ್ಟೆ.


ಕೆಯೀಲದಲ್ಲಿದ್ದ ದಾವೀದನನ್ನೂ ಅವನ ಜನರನ್ನೂ ಹಿಡಿಯ ಹೋಗುವದಕ್ಕೋಸ್ಕರ ಸೈನ್ಯವನ್ನು ಕೂಡಿಸಿದನು.


ಇಸ್ರಾಯೇಲ್‍ದೇವರಾದ ಯೆಹೋವನೇ, ಸೌಲನು ಕೆಯೀಲಕ್ಕೆ ಬಂದು ನನ್ನ ನಿವಿುತ್ತವಾಗಿ ಪಟ್ಟಣವನ್ನು ಹಾಳುಮಾಡಬೇಕೆಂದಿದ್ದಾನೆಂದು ನಿನ್ನ ಸೇವಕನಾದ ನನಗೆ ಸುದ್ದಿ ಬಂದಿತು.


ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ - ನೀನು ಅಣತೋತಿನಲ್ಲಿರುವ ನಿನ್ನ ಸ್ವಾಸ್ತ್ಯಕ್ಕೆ ಹೋಗು; ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದದರಿಂದ


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹ, ಇವುಗಳಿಲ್ಲದೆ ಇಸ್ರಾಯೇಲ್ಯರು ಬಹು ದಿವಸ ತಾಳಿಕೊಂಡಿರುವರು;


ಅವರು - ಆ ಮನುಷ್ಯನು ಇಲ್ಲಿಗೆ ಬರುವನೋ ಎಂದು ಯೆಹೋವನನ್ನು ವಿಚಾರಿಸಿದಾಗ ಆತನು - ಬಂದಿದ್ದಾನೆ; ಇಗೋ, ಸಾಮಾನುಗಳಲ್ಲಿ ಅಡಗಿಕೊಂಡಿದ್ದಾನೆ ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು