1 ಸಮುಯೇಲ 24:11 - ಕನ್ನಡ ಸತ್ಯವೇದವು J.V. (BSI)11 ನನ್ನ ತಂದೆಯೇ, ಇಗೋ ನೋಡು; ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ; ನಾನು ನಿನ್ನನ್ನು ಕೊಲ್ಲದೆ ನಿನ್ನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವಿಯಲ್ಲಾ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವು ನನ್ನ ತಂದೆ; ಇಗೋ ನೋಡಿ! ನನ್ನ ಕೈಯಲ್ಲಿ ನಿಮ್ಮ ನಿಲುವಂಗಿಯ ತುಂಡು ಇದೆ; ನಾನು ನಿಮ್ಮನ್ನು ಕೊಲ್ಲದೆ ನಿಮ್ಮ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡೆನಷ್ಟೆ. ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ; ನಾನು ನಿಮಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೊಳ್ಳಿ; ಆದರೂ ನೀವು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿರಲ್ಲವೆ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ತಂದೆಯೇ, ನನ್ನ ಕೈಯಲ್ಲಿರುವ ಚೂರು ಬಟ್ಟೆಯನ್ನು ನೋಡು. ನಾನು ನಿನ್ನ ಅಂಗಿಯ ಮೂಲೆಯನ್ನು ಕತ್ತರಿಸಿಹಾಕಿದೆ. ನಾನು ನಿನ್ನನ್ನು ಕೊಲ್ಲಬಹುದಿತ್ತು, ಆದರೆ ಕೊಲ್ಲಲಿಲ್ಲ! ನೀನು ಇದನ್ನು ಅರ್ಥಮಾಡಿಕೊಳ್ಳಬೇಕೆಂದು ನಾನು ಬಯಸಿದ್ದೇನೆ. ನಾನು ನಿನ್ನ ವಿರುದ್ಧವಾಗಿ ಯಾವ ಸಂಚನ್ನೂ ಮಾಡುತ್ತಿಲ್ಲವೆಂದು ನೀನು ತಿಳಿದುಕೊಳ್ಳಬೇಕಾಗಿದೆ! ನಾನು ನಿನಗೆ ಯಾವ ತಪ್ಪನ್ನೂ ಮಾಡಿಲ್ಲ! ಆದರೆ ನೀನು ನನ್ನನ್ನು ಹುಡುಕುತ್ತಿರುವೆ; ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ. ಅಧ್ಯಾಯವನ್ನು ನೋಡಿ |