Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:14 - ಕನ್ನಡ ಸತ್ಯವೇದವು J.V. (BSI)

14 ಇಸ್ರಾಯೇಲ್ಯರ ಅರಸೇ, ಯಾರನ್ನು ಹಿಂದಟ್ಟ ಹೊರಟಿದ್ದೀ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೇ, ಒಂದು ಬಡ ಸೊಳ್ಳೆಯನ್ನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇಸ್ರಾಯೇಲರ ಅರಸನೇ ಯಾರನ್ನು ಹಿಂಬಾಲಿಸಿ ಹೊರಟಿರುವೇ? ಯಾರನ್ನು ಹಿಡಿಯಬೇಕೆಂದಿರುತ್ತೀ? ಸತ್ತ ನಾಯಿಯನ್ನೋ? ಒಂದು ಬಡ ನೊಣವನ್ನೋ?.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನೀನು ಯಾರನ್ನು ಅಟ್ಟಿಸಿಕೊಂಡು ಹೋಗುತ್ತಿರುವೆ? ಇಸ್ರೇಲರ ರಾಜನಾದ ನೀನು ಯಾರೊಂದಿಗೆ ಹೋರಾಡಬೇಕೆಂದಿರುವೆ? ನಿನಗೆ ಕೇಡು ಮಾಡಬಹುದಾದವನನ್ನು ನೀನು ಅಟ್ಟಿಸಿಕೊಂಡು ಹೋಗುತ್ತಿಲ್ಲ! ನೀನು ಸತ್ತ ನಾಯಿಯನ್ನೋ ಇಲ್ಲವೆ ಚಿಟ್ಟೆಯನ್ನೋ ಅಟ್ಟಿಸಿಕೊಂಡು ಹೋಗುತ್ತಿರುವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ಇಸ್ರಾಯೇಲಿನ ಅರಸನು ಯಾರನ್ನು ಹಿಂದಟ್ಟಿ ಹೊರಟನು? ಯಾರನ್ನು ಹಿಂದಟ್ಟುತ್ತೀ? ಸತ್ತ ನಾಯಿಯನ್ನೇ? ಒಂದು ನೊಣವನ್ನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:14
9 ತಿಳಿವುಗಳ ಹೋಲಿಕೆ  

ಯೆಹೋವನ ಸಾನ್ನಿಧ್ಯವಿಲ್ಲದಿರುವ ದೇಶದಲ್ಲಿ ನನ್ನ ರಕ್ತವು ಸುರಿಸಲ್ಪಡದಿರಲಿ. ಅಯ್ಯೋ, ಗುಡ್ಡಗಳಲ್ಲಿ ಕೌಜುಗವನ್ನು ಹಿಡಿಯ ಹೊರಟ ಬೇಟೆಗಾರನೋ ಎಂಬಂತೆ ಇಸ್ರಾಯೇಲ್ಯರ ಅರಸನು ಹೊರಟುಬಂದು ನನ್ನ ಪ್ರಾಣವನ್ನು ತೆಗೆಯಬೇಕೆಂದಿರುತ್ತಾನಲ್ಲಾ ಅಂದನು.


ಮೆಫೀಬೋಶೆತನು ಇದನ್ನು ಕೇಳಿ ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ - ನೀನು ಸತ್ತ ನಾಯಿಯಂತಿರುವ ನನ್ನನ್ನು ಲಕ್ಷಿಸುವ ಹಾಗೆ ನಿನ್ನ ದಾಸನಾದ ನಾನು ಎಷ್ಟರವನು ಅಂದನು.


ನೀನು ಕೋಲುಹಿಡಿದು ನನ್ನ ಬಳಿಗೆ ಬರುವದೇನು? ನಾನು ನಾಯಿಯೋ ಎಂದು ಹೇಳಿ ಅವನನ್ನು ತನ್ನ ದೇವರ ಹೆಸರಿನಲ್ಲಿ ಶಪಿಸಿ -


ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ - ನೀನು ಇಸ್ರಾಯೇಲ್ಯರ ಅರಸನೋ; ಎದ್ದು ಊಟಮಾಡಿ ಸಂತೋಷದಿಂದಿರು; ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷೇತೋಟವನ್ನು ಕೊಡುತ್ತೇನೆ ಎಂದು ನುಡಿದು


ಆಗ ಚೆರೂಯಳ ಮಗನಾದ ಅಬೀಷೈಯು ಅರಸನಿಗೆ - ಈ ಸತ್ತ ನಾಯಿ ಅರಸನಾದ ನನ್ನ ಒಡೆಯನನ್ನು ಶಪಿಸುವದೇನು? ಅಪ್ಪಣೆಯಾಗಲಿ, ನಾನು ಅವನಿರುವಲ್ಲಿಗೆ ಹೋಗಿ ಅವನ ತಲೆ ಹಾರಿಸಿಕೊಂಡು ಬರುವೆನು ಅಂದನು.


ಅಬ್ನೇರನು ಈ ಮಾತನ್ನು ಕೇಳಿ ಉರಿಗೊಂಡು ಈಷ್ಬೋಶೆತನಿಗೆ - ಈವರೆಗೆ ನಾನು ನಿನ್ನ ತಂದೆಯಾದ ಸೌಲನ ಕುಟುಂಬಕ್ಕೂ ಅವನ ಬಂಧು ವಿುತ್ರರಿಗೂ ದಯೆತೋರಿಸುತ್ತಿದ್ದೆನಲ್ಲಾ; ನಿನ್ನನ್ನು ದಾವೀದನ ಕೈಗೆ ಒಪ್ಪಿಸಿಕೊಡಲಿಲ್ಲವಷ್ಟೆ. ಈಗ ಈ ಹೆಂಗಸಿನ ದೆಸೆಯಿಂದ ನನ್ನಲ್ಲಿ ತಪ್ಪುಹಿಡಿಯುವದಕ್ಕೆ ನಾನೇನು ಯೆಹೂದನಾಯಿಯ ತಲೆಯೋ?


ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು - ಈ ಹೊತ್ತು ಇಸ್ರಾಯೇಲ್ಯರ ಅರಸನು ಎಂಥ ಗೌರವದಿಂದ ನಡೆದುಕೊಂಡನು! ನೀಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ ಅಂದಳು. ಆಗ ದಾವೀದನು ಆಕೆಗೆ -


ನೀವು ಮಾಡಿದ ವ್ಯವಸಾಯವು ದುಷ್ಟತನ, ನಿಮಗಾದ ಬೆಳೆಯು ಅನ್ಯಾಯ; ನೀವು ನಿಮ್ಮ ಕಟ್ಟುಪಾಡಿನಲ್ಲಿಯೂ ನಿಮ್ಮ ಶೂರರ ಬಾಹುಳ್ಯದಲ್ಲಿಯೂ ಭರವಸವಿಟ್ಟದರಿಂದ ಮೋಸದ ಫಲವನ್ನು ಅನುಭವಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು