1 ಸಮುಯೇಲ 24:21 - ಕನ್ನಡ ಸತ್ಯವೇದವು J.V. (BSI)21 ಹೀಗಿರುವದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲ ಮಾಡುವದಿಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡು ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದು ಇಲ್ಲವೆಂದೂ ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದು ಹಾಕುವುದಿಲ್ಲವೆಂದೂ ಸರ್ವೇಶ್ವರನ ಹೆಸರಿನಲ್ಲಿ ಪ್ರಮಾಣ ಮಾಡು,” ಎಂದು ಬೇಡಿಕೊಂಡನು. ಹಾಗೆಯೇ ದಾವೀದನು ಪ್ರಮಾಣ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈಗ ನೀನು ನನಗೆ ಒಂದು ಪ್ರಮಾಣವನ್ನು ಮಾಡು. ನನ್ನ ಸಂತಾನದವರನ್ನು ನೀನು ಕೊಲ್ಲುವುದಿಲ್ಲವೆಂದು ಯೆಹೋವನ ಹೆಸರಿನಲ್ಲಿ ನನಗೆ ಪ್ರಮಾಣಮಾಡು. ನನ್ನ ತಂದೆಯ ಕುಲದಲ್ಲಿ ನನ್ನ ಹೆಸರನ್ನು ನಾಶಮಾಡುವುದಿಲ್ಲವೆಂದು ಪ್ರಮಾಣ ಮಾಡು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದ್ದರಿಂದ ನೀನು ನನ್ನ ತರುವಾಯ ನನ್ನ ಸಂತಾನವನ್ನು ಕಡಿದುಬಿಡುವುದಿಲ್ಲವೆಂದೂ, ನನ್ನ ಗೋತ್ರದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ನನಗೆ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣಮಾಡು,” ಎಂದನು. ಅಧ್ಯಾಯವನ್ನು ನೋಡಿ |