Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:4 - ಕನ್ನಡ ಸತ್ಯವೇದವು J.V. (BSI)

4 ಜನರು ದಾವೀದನಿಗೆ - ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡಿಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿವಸ ಇದೇ ಅಂದಾಗ ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜನರು ದಾವೀದನಿಗೆ, “’ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಆಗ ನೀನು ಅವನನ್ನು ನಿನ್ನ ಇಷ್ಟಾನುಸಾರ ನಡೆಸಬಹುದು,’ ಎಂದು ಸರ್ವೇಶ್ವರ ನಿನಗೆ ಹೇಳಿದ ಮಾತು ನೆರವೇರುವ ಸುದಿನವಿದು,” ಎಂದರು. ಅವನೆದ್ದು ಮೆಲ್ಲಗೆ ಹೋಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಜನರು ದಾವೀದನಿಗೆ, “ಯೆಹೋವನು ಈ ದಿನವನ್ನೇ ಕುರಿತು ನಿನ್ನೊಂದಿಗೆ ಮಾತನಾಡಿದನು. ಯೆಹೋವನು ನಿನಗೆ, ‘ನಾನು ನಿನ್ನ ಶತ್ರುವನ್ನು ನಿನಗೆ ಒಪ್ಪಿಸುತ್ತೇನೆ. ನಿನ್ನ ಇಷ್ಟದಂತೆ ಶತ್ರುವಿಗೆ ಏನು ಬೇಕಾದರೂ ಮಾಡು’ ಎಂದು ಹೇಳಿದನು” ಎಂದರು. ನಂತರ ದಾವೀದನು ಸೌಲನ ಹತ್ತಿರಕ್ಕೆ ತೆವಳುತ್ತಾ ಹೋಗಿ ಸೌಲನ ಅಂಗಿಯ ಒಂದು ಮೂಲೆಯನ್ನು ಕತ್ತರಿಸಿದನು. ದಾವೀದನನ್ನು ಸೌಲನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ದಾವೀದನ ಜನರು ಅವನಿಗೆ, “ ‘ನಾನು ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು. ಆಗ ನೀನು ನಿನ್ನ ಇಷ್ಟಾನುಸಾರ ಅವನಿಗೆ ಮಾಡಬಹುದು,’ ಎಂದು ಯೆಹೋವ ದೇವರು ನಿನಗೆ ಹೇಳಿದ ದಿನವು ಇದೇ,” ಎಂದರು. ಆಗ ದಾವೀದನು ಎದ್ದು ಹೋಗಿ ರಹಸ್ಯವಾಗಿ ಸೌಲನ ನಿಲುವಂಗಿಯ ಮೂಲೆಯನ್ನು ಕತ್ತರಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:4
13 ತಿಳಿವುಗಳ ಹೋಲಿಕೆ  

ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗನುಸಾರವಾದ ಫಲವನ್ನು ಕೊಡುವನು. ಆತನು ಈಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟಿದ್ದರೂ ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ಈಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದನೆಂಬದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು; ಆದರೆ ನಾನು ಅವರಿಗೆ - ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವದಿಲ್ಲ ಎಂದು ಹೇಳಿ ನಿನ್ನನ್ನು ಉಳಿಸಿದೆನು.


ಯೆಹೋವನು ನನ್ನನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟರೂ ನೀನು ನನ್ನನ್ನು ಕೊಲ್ಲಲಿಲ್ಲ; ಇದರಿಂದ ನೀನು ನನಗೆ ಹಿತವನ್ನೇ ಮಾಡುವಂಥವನೆಂಬದು ಈ ಹೊತ್ತು ಪ್ರಕಟವಾಯಿತು.


ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವದಿಲ್ಲ; ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ ಎಂದು ಹೇಳಿ ದೇವರಲ್ಲಿ ಅವನನ್ನು ಬಲಪಡಿಸಿದನು.


ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು


ನನ್ನ ಗುಡಾರದ ಆಳುಗಳು - ನಮ್ಮ ಯಜಮಾನನಿಕ್ಕಿದ ಮಾಂಸದಿಂದ ತೃಪ್ತರಾಗದವರು ಎಲ್ಲಿಯೂ ಸಿಕ್ಕಲಾರರು ಎಂದು ಹೇಳಿಕೊಳ್ಳುತ್ತಿರಲಿಲ್ಲವೋ?


ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನ ಬಳಿಗೆ ಬಂದು ಆ ತಲೆಯನ್ನು ಅವನಿಗೆ ತೋರಿಸಿ - ಇಗೋ, ನಿನ್ನ ಜೀವತೆಗೆಯಬೇಕೆಂದಿದ್ದ ನಿನ್ನ ಶತ್ರುವಾದ ಸೌಲನ ಮಗ ಈಷ್ಬೋಶೆತನ ತಲೆ! ಅರಸನಾದ ನಮ್ಮ ಒಡೆಯನಿಗಾಗಿ ಸೌಲನಿಗೂ ಅವನ ಸಂತಾನಕ್ಕೂ ಯೆಹೋವನು ಈ ಹೊತ್ತು ಮುಯ್ಯಿತೀರಿಸಿದ್ದಾನೆ ಅಂದರು.


ಆದರೆ ಕೊಲ್ಲಬೇಕೆಂಬ ಅಭಿಪ್ರಾಯವಿಲ್ಲದೆ ದೇವರ ಸಂಕಲ್ಪದಿಂದ ಹತ್ಯ ನಡೆದರೆ ಆ ಹತ್ಯ ಮಾಡಿದವನು ನಾನು ನೇವಿುಸುವ ಆಶ್ರಯಸ್ಥಳಕ್ಕೆ ಓಡಿಹೋಗಿ ಬದುಕಬಹುದು.


ದಾವೀದನು ಅಲ್ಲಿಂದ ತಪ್ಪಿಸಿಕೊಂಡು ಅದುಲ್ಲಾಮೆಂಬ ಗವಿಗೆ ಹೋದನು. ಈ ವರ್ತಮಾನವು ಅವನ ಅಣ್ಣಂದಿರಿಗೂ ಬೇರೆ ಎಲ್ಲಾ ಸಂಬಂಧಿಕರಿಗೂ ಮುಟ್ಟಲಾಗಿ ಅವರೂ ಬಂದು ಅವನನ್ನು ಸೇರಿಕೊಂಡರು.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ನಾನು ಯೆಹೋವನಿಗೆ ಮೊರೆಯಿಡುವೆನು; ಯೆಹೋವನಿಗೆ ಕೂಗಿ ಬಿನ್ನೈಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು