Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 24:6 - ಕನ್ನಡ ಸತ್ಯವೇದವು J.V. (BSI)

6 ಅವನು ತನ್ನ ಜನರಿಗೆ - ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ಒಡೆಯನೂ ಆಗಿದ್ದಾನೆ; ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿಮಾಡಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವನು ತನ್ನ ಜನರಿಗೆ, “ಆತ ಸರ್ವೇಶ್ವರನಿಂದ ಅಭಿಷಿಕ್ತನು ಹಾಗು ಆತನು ನನ್ನ ಒಡೆಯನು ಆಗಿದ್ದಾರೆ; ನಾನು ನಿಮ್ಮ ಮಾತು ಕೇಳಿ ಸರ್ವೇಶ್ವರನ ಅಭಿಷಿಕ್ತನ ವಿರೋಧವಾಗಿ ಕೈಯೆತ್ತದಂತೆ ಆ ಸರ್ವೇಶ್ವರನೇ ನನಗೆ ಅಡ್ಡಿಮಾಡಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದಾವೀದನು ತನ್ನ ಜನರಿಗೆ, “ಸೌಲನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ ನನ್ನ ರಾಜನೂ ಆಗಿರುವುದರಿಂದ ನಾನು ಅವನ ವಿರುದ್ಧವಾಗಿ ಏನೂ ಮಾಡಬಾರದು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 24:6
11 ತಿಳಿವುಗಳ ಹೋಲಿಕೆ  

ನಿಮ್ಮನ್ನು ಹಿಂಸಿಸುವವರಿಗೆ ಆಶೀರ್ವಾದಮಾಡಿರಿ; ಶಪಿಸದೆ ಆಶೀರ್ವದಿಸಿರಿ.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ಆದರೆ ನಾನು ನಿಮಗೆ ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಿಂಸೆ ಪಡಿಸುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ.


ಅದಕ್ಕೆ ನಾಬೋತನು - ನಾನು ಪಿತ್ರಾರ್ಜಿತ ಸ್ವಾಸ್ತ್ಯವನ್ನು ನಿನಗೆ ಮಾರದಂತೆ ಯೆಹೋವನು ನನ್ನನ್ನು ತಡೆಯಲಿ ಎಂದು ಉತ್ತರಕೊಟ್ಟನು.


ದಾವೀದನು ಅವನಿಗೆ - ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವದಕ್ಕೆ ಏಕೆ ಭಯಪಡಲಿಲ್ಲ ಎಂದು ಹೇಳಿ


ಇಲ್ಲಿ ನಿಂತುಕೊಂಡಿರುವ ನಾನು ಯಾರ ಎತ್ತನ್ನಾಗಲಿ ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರೂ ವಂಚಿಸಿ ಪೀಡಿಸಿದ್ದೂ ಲಂಚತೆಗೆದುಕೊಂಡು ಕುರುಡನಂತೆ ತೀರ್ಪುಮಾಡಿದ್ದೂ ಉಂಟೋ? ಇದ್ದರೆ ಯೆಹೋವನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ ಅನ್ನಲು ಅವರು -


ಈ ಮಾತುಗಳಿಂದ ಸೌಲನಿಗೆ ವಿರೋಧವಾಗಿ ಏಳದಂತೆ ತನ್ನ ಜನರನ್ನು ತಡೆದನು. ಸೌಲನು ಗವಿಯಿಂದ ಹೊರಗೆ ಬಂದು ಸ್ವಲ್ಪ ಮುಂದೆ ಹೋದ ಮೇಲೆ


ಖಾನೇಷುಮಾರಿ ಮಾಡಿಸಿದನಂತರ ದಾವೀದನನ್ನು ಮನಸ್ಸಾಕ್ಷಿಯು ಹಂಗಿಸತೊಡಗಿತು. ಆದದರಿಂದ ಅವನು ಯೆಹೋವನನ್ನು - ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು; ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷವಿುಸು ಎಂದು ಪ್ರಾರ್ಥಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು