Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:1 - ಕನ್ನಡ ಸತ್ಯವೇದವು J.V. (BSI)

1 ಸಮುವೇಲನು ಮೃತಿಹೊಂದಿದನು. ಇಸ್ರಾಯೇಲ್ಯರೆಲ್ಲರೂ ಕೂಡಿ ಬಂದು ಅವನಿಗೋಸ್ಕರ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಅರಣ್ಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಮುವೇಲನು ಮರಣಹೊಂದಿದನು. ಇಸ್ರಾಯೇಲ್ಯರೆಲ್ಲರೂ ಒಟ್ಟಾಗಿ ಬಂದು ಅವನಿಗಾಗಿ ಗೋಳಾಡುತ್ತಾ ಅವನ ಶವವನ್ನು ರಾಮದಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಮುವೇಲನು ಮರಣಹೊಂದಿದನು. ಇಸ್ರೇಲರೆಲ್ಲರೂ ಒಟ್ಟಾಗಿ ಸೇರಿ ಸಮುವೇಲನ ಮರಣಕ್ಕಾಗಿ ಗೋಳಾಡಿದರು. ಅವರು ಸಮುವೇಲನನ್ನು ಅವನ ನಿವಾಸವಿದ್ದ ರಾಮದಲ್ಲಿ ಸಮಾಧಿಮಾಡಿದರು. ನಂತರ ದಾವೀದನು ಪಾರಾನ್ ಮರಳುಗಾಡಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:1
20 ತಿಳಿವುಗಳ ಹೋಲಿಕೆ  

ಸಮುವೇಲನು ಮೃತಿಹೊಂದಿದ್ದನು. ಇಸ್ರಾಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟಿದ್ದನು.


ಮೋವಾಬ್ಯರ ಮೈದಾನದಲ್ಲಿ ಇಸ್ರಾಯೇಲ್ಯರು ಮೋಶೆಗೋಸ್ಕರ ಮೂವತ್ತು ದಿನ ದುಃಖಿಸಿದರು. ಅಲ್ಲಿಗೆ ಮೋಶೆಯ ಪ್ರಲಾಪದ ದಿನಗಳು ಮುಗಿದವು.


ಆರೋನನು ಸತ್ತುಹೋದದ್ದನ್ನು ಇಸ್ರಾಯೇಲ್ ಜನಾಂಗದವರೆಲ್ಲರೂ ತಿಳಿದು ಮೂವತ್ತು ದಿನಗಳು ಅವನಿಗಾಗಿ ಶೋಕಿಸಿದರು.


ಮನಸ್ಸೆಯು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅರಮನೆಯ ನಿವೇಶನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ಭಕ್ತರಾದ ಜನರು ಸ್ತೆಫನನನ್ನು ಹೂಣಿಟ್ಟು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು.


ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.


ಅವನು ಪಾರಾನಿನ ಅರಣ್ಯದಲ್ಲಿ ವಾಸಮಾಡಿದನು. ಅವನ ತಾಯಿ ಐಗುಪ್ತದೇಶದಿಂದ ಕನ್ನಿಕೆಯನ್ನು ತರಿಸಿ ಮದುವೆಮಾಡಿಸಿದಳು.


ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವಕ್ಕೆ ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲ್ಯರ ಮುಖ್ಯಸ್ಥರನ್ನು ಕಳುಹಿಸಿದನು.


ಜನಾಂಗಗಳ ಎಲ್ಲಾ ಅರಸರೂ, ಹೌದು, ಸಕಲ ರಾಜರೂ ತಮ್ಮ ತಮ್ಮ ಮನೆಗಳಲ್ಲಿ ವೈಭವದೊಡನೆ ದೀರ್ಘನಿದ್ರೆಮಾಡುತ್ತಾರೆ.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಅಲ್ಲಿ ಅವನ ಸ್ವಂತ ಮನೆಯಿದ್ದದರಿಂದ ಅಲ್ಲಿಯೇ ಯೆಹೋವನಿಗೆ ಒಂದು ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರನ್ನು ಪಾಲಿಸುತ್ತಿದ್ದನು.


ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.


ಆ ದೇಶದ ಜನರಾಗಿದ್ದ ಕಾನಾನ್ಯರು ಆಟಾದ್ ಎಂಬ ಕಣದಲ್ಲಿ ನಡೆದ ಗೋಳಾಟವನ್ನು ನೋಡಿ - ಐಗುಪ್ತ್ಯರಿಗೆ ಬಂದಿರುವ ಈ ಶೋಕವು ಬಹುವಿಶೇಷವಾಗಿದೆ ಎಂದು ಹೇಳಿದ್ದರಿಂದ ಆ ಸ್ಥಳಕ್ಕೆ ಆಬೇಲ್‍ಮಿಚ್ರಯೀಮ್ ಎಂದು ಹೆಸರಾಯಿತು. ಇದು ಯೊರ್ದನ್ ಹೊಳೆಯಿಂದ ಆಚೆಯಿದೆ.


ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು ಅಲ್ಲೇ ಸೋಲಿಸಿ ಮರಳುಕಾಡಿನ ಹತ್ತಿರವಿರುವ ಏಲ್ಪಾರಾನಿನವರೆಗೂ ಹಿಂದಟ್ಟಿದರು.


ಅವನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ಅವನ ಅರಮನೆಯಿರುವ ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಮೋನನು ಅರಸನಾದನು.


ಇಷ್ಟು ವರುಷ ಬದುಕಿದ ಮೇಲೆ ಆಕೆ ಕಾನಾನ್ ದೇಶದಲ್ಲಿರುವ ಹೆಬ್ರೋನೆಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಬಂದು ಆಕೆಯ ನಿವಿುತ್ತ ಗೋಳಾಡಿ ಕಣ್ಣೀರು ಸುರಿಸಿದನು.


ಅವರು ಮರುದಿನ ಬೆಳಿಗ್ಗೆ ಎದ್ದು ಯೆಹೋವನನ್ನು ಆರಾಧಿಸಿ ರಾಮದಲ್ಲಿದ್ದ ತಮ್ಮ ಮನೆಗೆ ಬಂದರು. ಎಲ್ಕಾನನು ತನ್ನ ಹೆಂಡತಿಯಾದ ಹನ್ನಳನ್ನು ಕೂಡಲು ಆಕೆಯು ಯೆಹೋವನ ಅನುಗ್ರಹದಿಂದ ಗರ್ಭಿಣಿಯಾಗಿ


ನಿಮ್ಮ ಪಿತೃಗಳು ಎಲ್ಲಿ? ಪ್ರವಾದಿಗಳು ನಿತ್ಯಜೀವಿಗಳೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು