Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:17 - ಕನ್ನಡ ಸತ್ಯವೇದವು J.V. (BSI)

17 ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮೂರ್ಖನಾದ ಅವನೊಡನೆ ಮಾತಾಡುವದಸಾಧ್ಯ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈಗ ಮಾಡಬೇಕಾದುದ್ದನ್ನು ನೀವೇ ಆಲೋಚಿಸಿ ತೀರ್ಮಾನಿಸಿ. ನಮ್ಮ ಯಜಮಾನರಿಗೂ ಅವರ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮಂದಮತಿಯಾದ ಅವರೊಡನೆ ಮಾತಾಡುವುದು ಅಸಾಧ್ಯ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಈಗ ಅದರ ಬಗ್ಗೆ ಯೋಚಿಸಿ ನೀನು ಮಾಡಬೇಕಾದದ್ದನ್ನು ತೀರ್ಮಾನಿಸು. ಮೂರ್ಖನಾದ ನಾಬಾಲನೊಂದಿಗೆ ಮಾತಾಡಿ ಅವನ ಮನಸ್ಸನ್ನು ಬದಲಾಯಿಸುವುದು ಅಸಾಧ್ಯ. ನಮ್ಮ ಒಡೆಯನಿಗೂ ಅವನ ಕುಟುಂಬಕ್ಕೂ ಭೀಕರವಾದ ಕೇಡು ಬರಲಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:17
19 ತಿಳಿವುಗಳ ಹೋಲಿಕೆ  

ಅವನು ಆಗಲಿ ಎಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು; ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆಂದು ತಿಳಿದುಕೋ.


ಅಲ್ಲಿ ವಾಸವಾಗಿರುವ ಇಸ್ರಾಯೇಲ್ಯರಲ್ಲಿ ಕೆಲವು ಮಂದಿ ದುಷ್ಟರು ನಿಮಗೆ ಗೊತ್ತಿಲ್ಲದ ಇತರ ದೇವರುಗಳನ್ನು ತಮ್ಮ ಊರಿನವರಿಗೆ ಸೂಚಿಸಿ - ಆ ದೇವರುಗಳನ್ನು ಸೇವಿಸೋಣ ಬನ್ನಿ ಎಂದು ಹೇಳಿ ಅವರನ್ನು ಸನ್ಮಾರ್ಗದಿಂದ ತಪ್ಪಿಸಿದ್ದಾರೆಂಬ ಸುದ್ದಿಯನ್ನು ನೀವು ಕೇಳಿದರೆ


ಅರಸನು ರೌದ್ರಾವೇಶನಾಗಿ ದ್ರಾಕ್ಷಾರಸಪಾನಮಾಡುವದನ್ನು ಬಿಟ್ಟೆದ್ದು ಅರಮನೆಯ ತೋಟಕ್ಕೆ ಹೋದನು. ಹಾಮಾನನಾದರೋ ಅರಸನಿಂದ ತನಗೆ ಕೇಡು ಸಿದ್ಧವಾಯಿತೆಂದು ತಿಳಿದು ಎಸ್ತೇರಳ ಹತ್ತಿರ ತನ್ನ ಪ್ರಾಣ ರಕ್ಷಣೆಯ ನಿವಿುತ್ತವಾಗಿ ಬಿನ್ನಹಮಾಡಲು ನಿಂತುಕೊಂಡನು.


ಈ ಮಾತನ್ನು ಹೇಳಿದ ಪ್ರವಾದಿಗೆ ಅರಸನು - ನಿನ್ನನ್ನು ರಾಜಮಂತ್ರಿಯನ್ನಾಗಿ ನೇವಿುಸಿದ್ದೇವೋ? ಸುಮ್ಮನಿರು, ನಿನಗೆ ಪೆಟ್ಟು ಬೇಕೋ ಅನ್ನಲು ಅವನು - ನೀನು ನನ್ನ ಬುದ್ಧಿವಾದವನ್ನು ಲಾಲಿಸದೆ ಹೀಗೆ ಮಾಡುವದರಿಂದ ದೇವರು ನಿನ್ನನ್ನು ನಾಶಮಾಡಬೇಕೆಂದು ನಿಶ್ಚಯಿಸಿಕೊಂಡಿದ್ದಾನೆಂಬದಾಗಿ ನನಗೆ ತಿಳಿಯಬಂತು ಎಂದು ಹೇಳಿ ಸುಮ್ಮನಾದನು.


ಕಾಕಪೋಕರೂ ದುಷ್ಟರೂ ಆಗಿರುವ ಜನರು ಅವನನ್ನು ಕೂಡಿಕೊಂಡು ಆ ಸಮಯದಲ್ಲಿ ಎಳೇ ಪ್ರಾಯದವನೂ ಮೃದುಸ್ವಭಾವವುಳ್ಳವನೂ ತಮ್ಮೆದುರಿನಲ್ಲಿ ನಿಲ್ಲಲಾರದವನೂ ಆದ ಸೊಲೊಮೋನನ ಮಗ ರೆಹಬ್ಬಾಮನಿಗೆ ಮಾರ್ಮಲೆತು ಬಲಗೊಂಡರು.


ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕೂತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆಂಬದಾಗಿ ಜನರ ಎದುರಿನಲ್ಲಿ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.


ಅವನು ದೇವರನ್ನೂ ಅರಸನನ್ನೂ ಶಪಿಸಿದವನು ಎಂಬದಾಗಿ ಇಬ್ಬರು ದುಷ್ಟ ಮನುಷ್ಯರಿಂದ ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಿಸಿ ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ ಎಂದು ಬರೆದಿದ್ದಳು.


ಸ್ವಾವಿುಯು ಮೂರ್ಖನಾದ ಆ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಅವನು ಮೂರ್ಖನೇ ಆಗಿರುತ್ತಾನೆ. ನಿನ್ನ ದಾಸಿಯಾದ ನಾನು ಸ್ವಾವಿುಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ಯೋನಾತಾನನು ಅವನಿಗೆ - ಇದು ಆಗಲೇಬಾರದು; ನಿನಗೆ ನನ್ನ ತಂದೆಯಿಂದ ಕೇಡು ಸಿದ್ಧವಾಗಿದ್ದರೆ ಅದನ್ನು ನಿನಗೆ ತಿಳಿಸದಿರುವೆನೋ ಅಂದನು.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು.


ಕೆಲವು ಮಂದಿ ಕಾಕಪೋಕರು - ಇವನೋ ನಮ್ಮನ್ನು ರಕ್ಷಿಸುವವನು ಎಂದು ತಿರಸ್ಕರಿಸಿ ಕಾಣಿಕೆಗಳನ್ನು ತರಲಿಲ್ಲ. ಆದರೂ ಸೌಲನು ಸುಮ್ಮನಿದ್ದನು.


ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲುಗೋಡೆಯಂತಿದ್ದರು.


ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೇಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ ತನ್ನ ಸೇವಕರಿಗೆ -


ಆಗ ಗಾದನು ದಾವೀದನ ಬಳಿಗೆ ಹೋಗಿ - ನಿನ್ನ ದೇಶದಲ್ಲಿ ಏಳು ವರುಷಗಳ ಬರವು ಉಂಟಾಗಬೇಕೋ, ಇಲ್ಲವೆ ನಿನ್ನ ಶತ್ರುಗಳು ನಿನ್ನನ್ನು ಸೋಲಿಸಿ ಮೂರು ತಿಂಗಳುಗಳವರೆಗೆ ಓಡಿಸಿ ಬಿಡಬೇಕೋ, ಇಲ್ಲವೆ ನಿನ್ನ ದೇಶದಲ್ಲಿ ಮೂರು ದಿನಗಳವರೆಗೂ ಘೋರವ್ಯಾಧಿ ಬರಬೇಕೋ? ನನ್ನನ್ನು ಕಳುಹಿಸಿದವನಿಗೆ ಯಾವ ಉತ್ತರವನ್ನು ತೆಗೆದುಕೊಂಡು ಹೋಗಬೇಕು, ಆಲೋಚಿಸಿ ಹೇಳು ಅಂದನು.


ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು; ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು