Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:18 - ಕನ್ನಡ ಸತ್ಯವೇದವು J.V. (BSI)

18 ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೇಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ ತನ್ನ ಸೇವಕರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೀ ಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು, ಇವುಗಳನ್ನೆಲ್ಲ ಕತ್ತೆಗಳ ಮೇಲೆ ಹೇರಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋಗ್ರಾಂ ಬೇಯಿಸಿದ ಕಾಳನ್ನೂ ನೂರುಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ ತೆಗೆದುಕೊಂಡಳು. ಅವಳು ಅವುಗಳನ್ನು ಕತ್ತೆಗಳ ಮೇಲೆ ಹೇರಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಅಬೀಗೈಲಳು ತೀವ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸವನ್ನೂ ಬೇಯಿಸಿದ ಐದು ಕುರಿಗಳ ಮಾಂಸವನ್ನೂ ಐವತ್ತು ಸೇರು ಹುರಿದ ಧಾನ್ಯವನ್ನೂ ಒಣಗಿದ ನೂರು ದ್ರಾಕ್ಷಿ ಗೊನೆಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ಕತ್ತೆಗಳ ಮೇಲೆ ಹೇರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:18
14 ತಿಳಿವುಗಳ ಹೋಲಿಕೆ  

ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿ ಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ ನೂರು ಒಣಗಿದ ದ್ರಾಕ್ಷೇ ಗೊಂಚಲುಗಳನ್ನೂ ನೂರು ಹಣ್ಣುಗಳನ್ನೂ ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.


ನಿನ್ನ ವಾದಿಯ ಸಂಗಡ ಇನ್ನೂ ದಾರಿಯಲ್ಲಿರುವಾಗಲೇ ಅವನ ಕೂಡ ಬೇಗ ಸಮಾಧಾನ ಮಾಡಿಕೋ; ಇಲ್ಲದಿದ್ದರೆ ಆ ವಾದಿಯು ನಿನ್ನನ್ನು ನ್ಯಾಯಾಧಿಪತಿಗೆ ಒಪ್ಪಿಸಾನು; ನ್ಯಾಯಾಧಿಪತಿಯು ನಿನ್ನನ್ನು ಓಲೇಕಾರನ ಕೈಗೆ ಒಪ್ಪಿಸಿಕೊಟ್ಟಾನು; ಆಗ ನೀನು ಸೆರೆಯಲ್ಲಿ ಬಿದ್ದೀಯೆ.


ಕಾಣಿಕೆಯು ಅನುಕೂಲತೆಗೂ ಶ್ರೀಮಂತರ ಸಾನ್ನಿಧ್ಯಪ್ರವೇಶಕ್ಕೂ ಸಾಧನ.


ಗುಪ್ತ ಬಹುಮಾನವು ಕೋಪವನ್ನಾರಿಸುವದು; ಮಡಲಲ್ಲಿಟ್ಟ ಲಂಚವು ಬಲು ಸಿಟ್ಟನ್ನಣಗಿಸುವದು.


ಇದಲ್ಲದೆ ಇಸ್ಸಾಕಾರ್ ಜೆಬುಲೂನ್ ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತಗಳವರು ಎತ್ತು, ಕತ್ತೆ, ಹೇಸರಕತ್ತೆ, ಒಂಟೆ ಇವುಗಳ ಮೇಲೆ ಆಹಾರಪದಾರ್ಥಗಳನ್ನು ಹೇರಿಕೊಂಡು ಬಂದರು. ಅವರು ತಂದವುಗಳಾವವಂದರೆ - ತರತರದ ರೊಟ್ಟಿ, ಅಂಜೂರ ಹಣ್ಣಿನ ಉಂಡೆ, ಒಣಗಿದ ದ್ರಾಕ್ಷೇಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವೇ. ಇಸ್ರಾಯೇಲ್ಯರೊಳಗೆ ಮಹಾ ಸಂತೋಷವಿತ್ತಷ್ಟೆ.


ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಾಯೇಲ್‍ದೇವರಾದ ಯೆಹೋವನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿದ್ದಿಲ್ಲ ಎಂದು ಹೇಳಿ


ಒಂದು ದಿವಸ ಇಷಯನು ತನ್ನ ಮಗನಾದ ದಾವೀದನಿಗೆ - ಇಗೋ, ಇಲ್ಲಿ ಮೂವತ್ತು ಸೇರು ಹುರಿಗಾಳೂ ಹತ್ತು ರೊಟ್ಟಿಗಳೂ ಇರುತ್ತವೆ. ಇವುಗಳನ್ನು ತೆಗೆದುಕೊಂಡು ಶೀಘ್ರವಾಗಿ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಡು.


ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ; ಮೂರ್ಖನಾದ ಅವನೊಡನೆ ಮಾತಾಡುವದಸಾಧ್ಯ ಎಂದು ಹೇಳಿದನು.


ಆಕೆಯು ಜೀವಮಾನದಲ್ಲೆಲ್ಲಾ ಅವನಿಗೆ ಅಹಿತವನ್ನು ಮಾಡದೆ ಹಿತವನ್ನೇ ಮಾಡುತ್ತಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು