Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:19 - ಕನ್ನಡ ಸತ್ಯವೇದವು J.V. (BSI)

19 ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ ಎಂದು ಹೇಳಿ ಅವರನ್ನು ಕಳುಹಿಸಿದಳು; ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅನಂತರ ತನ್ನ ಸೇವಕರಿಗೆ, “ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ,” ಎಂದು ಹೇಳಿ ಅವರನ್ನು ಕಳುಹಿಸಿದಳು. ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಂತರ ಅಬೀಗೈಲಳು ತನ್ನ ಸೇವಕರಿಗೆ, “ಮುಂದೆ ನಡೆಯಿರಿ, ನಾನು ನಿಮ್ಮ ಹಿಂದೆ ಬರುತ್ತೇನೆ” ಎಂದಳು. ಆದರೆ ಅವಳು ತನ್ನ ಗಂಡನಿಗೆ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ತನ್ನ ಸೇವಕರಿಗೆ, “ನನಗೆ ಮುಂದಾಗಿ ಹೋಗಿರಿ. ನಾನು ನಿಮ್ಮ ಹಿಂದೆ ಬರುವೆನು,” ಎಂದು ಹೇಳಿದಳು. ಆದರೆ ತನ್ನ ಗಂಡನಾದ ನಾಬಾಲನಿಗೆ ಇದನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:19
9 ತಿಳಿವುಗಳ ಹೋಲಿಕೆ  

ಇದೇ ರೀತಿಯಾಗಿ ಮಾತಾಡಿ - ನಿಮ್ಮ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಾನೆ ಅನ್ನಿರಿ ಎಂದು ಅಪ್ಪಣೆಕೊಟ್ಟನು. ಯಾಕೋಬನು ತನ್ನೊಳಗೆ - ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸಿದ ಮೇಲೆ ಅವನ ಸನ್ನಿಧಿಗೆ ಸೇರುವೆನು; ಒಂದು ವೇಳೆ ನನ್ನನ್ನು ಪ್ರೀತಿಯಿಂದ ಅಂಗೀಕರಿಸುವನು ಅಂದುಕೊಂಡನು.


ಇವುಗಳ ಪ್ರತಿಯೊಂದು ಹಿಂಡನ್ನು ತನ್ನ ಸೇವಕರ ವಶಕ್ಕೆ ಒಪ್ಪಿಸಿ - ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿಹೋಗಿರಿ, ಮತ್ತು ಹಿಂಡು ಹಿಂಡಿಗೆ ಬಿಡುವು ಇರಲಿ ಅಂದನು.


ಸೋಮಾರಿತನದ ಅನ್ನವನ್ನು ತಿನ್ನದೆ ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.


ಆಕೆ ಕತ್ತೆಯ ಮೇಲೆ ಕೂತು ಗುಡ್ಡದ ಮರೆಯಲ್ಲಿ ಹೋಗುತ್ತಿರುವಾಗ ದಾವೀದನೂ ಅವನ ಜನರೂ ಆ ಕಡೆಯಿಂದ ಗಟ್ಟಾ ಇಳಿದುಬರಲು ಆಕೆಯು ಅವರನ್ನು ಎದುರುಗೊಂಡಳು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ - ನೀವು ಏಸಾವನನ್ನು ಕಾಣುವಾಗ


ಆದಕಾರಣ ಅವನು ಆ ಕಾಣಿಕೆಯನ್ನು ತನಗೆ ಮುಂಚಿತವಾಗಿ ಹೊಳೆಯಿಂದಾಚೆಗೆ ದಾಟಿಸಿ ತಾನು ಆ ರಾತ್ರಿ ತನ್ನ ಪಾಳೆಯದೊಳಗೆ ಇದ್ದನು.


ಒಂದು ದಿವಸ ಸೌಲನ ಮಗನಾದ ಯೋನಾತಾನನು ತನ್ನ ಆಯುಧಗಳನ್ನು ಹೊರುವ ಸೇವಕನಿಗೆ - ಆಚೆ ಇರುವ ಫಿಲಿಷ್ಟಿಯರ ಕಾವಲುದಂಡಿಗೆ ವಿರೋಧವಾಗಿ ಹೋಗೋಣ ಬಾ ಎಂದು ಹೇಳಿದನು. ಆದರೆ ಈ ಸಂಗತಿಯನ್ನು ತನ್ನ ತಂದೆಗೆ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು