Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:21 - ಕನ್ನಡ ಸತ್ಯವೇದವು J.V. (BSI)

21 ಅಷ್ಟರಲ್ಲಿ ದಾವೀದನು - ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅಷ್ಟರಲ್ಲಿ ದಾವೀದನು, “ನಾನು ಅಡವಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥ ಆಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅಬೀಗೈಲಳನ್ನು ಸಂಧಿಸುವುದಕ್ಕೆ ಮುಂಚೆ ದಾವೀದನು, “ನಾಬಾಲನ ಆಸ್ತಿಯನ್ನು ನಾನು ಅರಣ್ಯದಲ್ಲಿ ಕಾಪಾಡಿದೆನು. ಅವನ ಕುರಿಗಳಲ್ಲಿ ಒಂದೂ ತಪ್ಪಿಸಿಕೊಳ್ಳದಂತೆ ನಾನು ನೋಡಿಕೊಂಡೆನು. ನಾನು ಅವನಿಂದ ಏನನ್ನೂ ಅಪೇಕ್ಷಿಸದೆ ಇದನ್ನೆಲ್ಲ ಮಾಡಿದೆ! ನಾನು ಅವನಿಗೆ ಒಳ್ಳೆಯದನ್ನು ಮಾಡಿದೆ; ಆದರೆ ಅವನು ನನಗೆ ಕೆಟ್ಟವನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:21
19 ತಿಳಿವುಗಳ ಹೋಲಿಕೆ  

ಉಪಕಾರಕ್ಕೆ ಅಪಕಾರಮಾಡುವವನ ಮನೆಗೆ ಕೇಡುತಪ್ಪದು.


ಎಲ್ಲಾ ದ್ವೇಷ ಕೋಪ ಕ್ರೋಧ ಕಲಹ ದೂಷಣೆ ಇವುಗಳನ್ನೂ ಸಕಲವಿಧವಾದ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ.


ಕೋಪಮಾಡಬೇಕಾದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವದಕ್ಕಿಂತ ಮುಂಚೆ ನಿಮ್ಮ ಸಿಟ್ಟು ತೀರಲಿ;


ಕೆಟ್ಟತನಕ್ಕೆ ಸೋತು ಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.


ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವದಕ್ಕಿಂತ ಒಳ್ಳೇ ನಡತೆಯುಳ್ಳವರಾಗಿಯೇ ದೇವರ ಚಿತ್ತವಿದ್ದರೆ ಬಾಧೆಪಡುವದು ಲೇಸು.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ; ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವದಲ್ಲದೆ ಎಲ್ಲರಿಗೂ ಹಿತವನ್ನು ಮಾಡುವವರಾಗಿರಿ.


ಅಪಕಾರಕ್ಕೆ ಅಪಕಾರವನ್ನು ನಿಂದೆಗೆ ನಿಂದೆಯನ್ನು ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದನಲ್ಲಾ; ಹೀಗೆ ಮಾಡುವದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಮೇಲಿಗೆ ಮುಯ್ಯಾಗಿ ಕೇಡು ಆಗ ತಕ್ಕದ್ದೋ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ. ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ಚಿತ್ತವಿಸು.


ಉಪಕಾರಕ್ಕೆ ಪ್ರತಿಯಾಗಿ ಅಪಕಾರ ಸಲ್ಲಿಸುವವರು ಒಳ್ಳೆಯದನ್ನು ಅನುಸರಿಸುವ ನನ್ನನ್ನು ಎದುರಿಸುತ್ತಾರೆ.


ಕೋಪವನ್ನು ಅಣಗಿಸಿಕೋ; ರೋಷವನ್ನು ಬಿಡು. ಉರಿಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.


ಅವರು ಉಪಕಾರಕ್ಕೆ ಅಪಕಾರವನ್ನೇ ಮಾಡುತ್ತಾರೆ; ನಾನು ದಿಕ್ಕಿಲ್ಲದವನಾದೆನು.


ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರೇ ಸರಿ.


ಅವನು ತನ್ನ ಜನರಿಗೆ - ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ ಎಂದು ಆಜ್ಞಾಪಿಸಿದನು; ಅವರೆಲ್ಲರೂ ಕಟ್ಟಿಕೊಂಡರು. ದಾವೀದನೂ ಕಟ್ಟಿಕೊಂಡನು. ಹೆಚ್ಚುಕಡಿಮೆ ನಾನೂರು ಮಂದಿ ದಾವೀದನ ಜೊತೆಯಲ್ಲಿ ಹೋದರು; ಇನ್ನೂರು ಮಂದಿ ಸಾಮಾನುಗಳ ಬಳಿಯಲ್ಲಿ ಇದ್ದರು.


ಅವರು ಪಟ್ಟಣವನ್ನು ಬಿಟ್ಟು ಸ್ವಲ್ಪದೂರ ಹೋಗುವಷ್ಟರಲ್ಲಿ ಯೋಸೇಫನು ತನ್ನ ಮನೆವಾರ್ತೆಯವನಿಗೆ - ನೀನೆದ್ದು ಆ ಮನುಷ್ಯರನ್ನು ಹಿಂದಟ್ಟಿ ಸಂಧಿಸಿ - ನೀವು ಉಪಕಾರಕ್ಕೆ ಪ್ರತಿಯಾಗಿ ಯಾಕೆ ಅಪಕಾರ ಮಾಡಿದ್ದೀರಿ?


ನಿನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವ ಕೆಲಸವು ನಡೆಯುತ್ತದೆಂಬ ವರ್ತಮಾನವನ್ನು ಕೇಳಿದ್ದೇನೆ. ನಿನ್ನ ಕುರುಬರು ನಮ್ಮೊಡನೆ ಕರ್ಮೆಲಿನಲ್ಲಿದ್ದ ಕಾಲವೆಲ್ಲಾ ನಾವು ಅವರನ್ನು ತೊಂದರೆಪಡಿಸಲಿಲ್ಲ; ಅವರಿಗೇನೂ ನಷ್ಟವಾಗಲಿಲ್ಲ.


ಆ ಜನರು ನಮಗೆ ಬಹಳ ಉಪಕಾರಮಾಡಿದವರು; ನಾವು ಅವರೊಡನೆ ಅಡವಿಯಲ್ಲಿದ್ದ ಕಾಲವೆಲ್ಲಾ ಏನೂ ತೊಂದರೆಪಡಲಿಲ್ಲ. ನಷ್ಟಹೊಂದಲಿಲ್ಲ.


ಆಕೆ ಕತ್ತೆಯ ಮೇಲೆ ಕೂತು ಗುಡ್ಡದ ಮರೆಯಲ್ಲಿ ಹೋಗುತ್ತಿರುವಾಗ ದಾವೀದನೂ ಅವನ ಜನರೂ ಆ ಕಡೆಯಿಂದ ಗಟ್ಟಾ ಇಳಿದುಬರಲು ಆಕೆಯು ಅವರನ್ನು ಎದುರುಗೊಂಡಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು