Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:24 - ಕನ್ನಡ ಸತ್ಯವೇದವು J.V. (BSI)

24 ಆಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ - ಸ್ವಾಮೀ, ಅಪರಾಧವು ನನ್ನ ಮೇಲಿರಲಿ; ನಿನ್ನ ದಾಸಿಯು ಮಾತಾಡುವದಕ್ಕೆ ಅಪ್ಪಣೆಯಾಗಲಿ; ಅವಳ ಮಾತನ್ನು ಲಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಮೇಲೆ ಅವನ ಪಾದಗಳ ಮೇಲೆ ಬಿದ್ದು ಅವನಿಗೆ, “ಸ್ವಾಮೀ ಅಪರಾಧವು ನನ್ನ ಮೇಲೆ ಇರಲಿ. ನಿನ್ನ ದಾಸಿಯು ಮಾತನಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಲಾಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ಒಡೆಯಾ, ಅಪರಾಧವು ನನ್ನ ಮೇಲಿರಲಿ; ನಿಮ್ಮ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನನ್ನ ಮಾತನ್ನು ಆಲಿಸಬೇಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಅಬೀಗೈಲಳು ದಾವೀದನ ಪಾದಗಳಿಗೆ ಬಿದ್ದು, “ಒಡೆಯನೇ, ನಿನ್ನೊಂದಿಗೆ ಮಾತನಾಡಲು ದಯವಿಟ್ಟು ನನಗೆ ಅವಕಾಶ ಕೊಡು. ನಾನು ಹೇಳುವುದನ್ನು ಆಲಿಸು. ನಡೆದುಹೋದ ಸಂಗತಿಗೆ ನನ್ನನ್ನೇ ನಿಂದಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:24
15 ತಿಳಿವುಗಳ ಹೋಲಿಕೆ  

ಎಸ್ತೇರಳು ತಿರಿಗಿ ಅರಸನನ್ನು ಮಾತಾಡಿಸುವದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು ಅತ್ತು - ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ಅಪಾಯಗಳನ್ನು ನಿವಾರಿಸಬೇಕೆಂದು ವಿಜ್ಞಾಪಿಸಲು


ಆ ತೆಕೋವದ ಸ್ತ್ರೀಯು - ಅರಸನೇ, ಒಡೆಯನೇ, ಅಪರಾಧವು ನನ್ನ ಮೇಲೆಯೂ ನನ್ನ ಕುಟುಂಬದ ಮೇಲೆಯೂ ಇರಲಿ; ಅರಸನಿಗೂ ಅವನ ಸಿಂಹಾಸನಕ್ಕೂ ದೋಷಹತ್ತದಿರಲಿ ಅಂದಳು.


ನಿನ್ನ ದಾಸಿಯ ಅಪರಾಧಕ್ಕೆ ಕ್ಷಮಾಪಣೆಯಾಗಲಿ; ಸ್ವಾವಿುಯೇ, ನೀನು ಯೆಹೋವನ ಶತ್ರುಗಳೊಡನೆ ಯುದ್ಧಮಾಡುವದರಿಂದ ಆತನು ನಿನ್ನ ಮನೆಯನ್ನು ಶಾಶ್ವತವಾಗಿ ಸ್ಥಿರಪಡಿಸುವನು. ಆದದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನವು ಕಾಣದಿರಲಿ;


ಆಕೆಯು ಹತ್ತಿರ ಬಂದು ಅವನ ಪಾದಗಳಿಗೆ ಬಿದ್ದು ಸಾಷ್ಟಾಂಗನಮಸ್ಕಾರಮಾಡಿ ಮಗನನ್ನು ತೆಗೆದುಕೊಂಡು ಹೋದಳು.


ಆಗ ಅವನ ಜೊತೇಸೇವಕನು ಅವನ ಕಾಲಿಗೆ ಬಿದ್ದು - ಸ್ವಲ್ಪ ತಾಳಿಕೋ, ತೀರಿಸುತ್ತೇನೆ ಎಂದು ಬೇಡಿಕೊಂಡನು.


ಆಗ ಸ್ತ್ರೀಯು - ನನ್ನ ಒಡೆಯನಿಗೆ ಇನ್ನೊಂದು ಮಾತನ್ನು ಹೇಳಿಕೊಳ್ಳುವದಕ್ಕೆ ಅಪ್ಪಣೆಯಾಗಲಿ ಅನ್ನಲು ಅರಸನು - ಹೇಳು ಅಂದನು.


ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.


ದಾವೀದನೂ ಹೊರಗೆ ಬಂದು - ಅರಸನೇ, ನನ್ನ ಒಡೆಯನೇ ಎಂದು ಅವನನ್ನು ಕೂಗಿದನು. ಸೌಲನು ಹಿಂದಿರುಗಿ ನೋಡಲು ಅವನಿಗೆ ಸಾಷ್ಟಾಂಗ ನಮಸ್ಕಾರಮಾಡಿ -


ಅಬೀಗೈಲಳು ದಾವೀದನನ್ನು ಕಂಡ ಕೂಡಲೆ ಕತ್ತೆಯಿಂದಿಳಿದು ಅವನಿಗೆ ಸಾಷ್ಟಾಂಗವಾಗಿ ನಮಸ್ಕರಿಸಿದಳು.


ಸ್ವಾವಿುಯು ಮೂರ್ಖನಾದ ಆ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ್; ಅದಕ್ಕೆ ತಕ್ಕಂತೆ ಅವನು ಮೂರ್ಖನೇ ಆಗಿರುತ್ತಾನೆ. ನಿನ್ನ ದಾಸಿಯಾದ ನಾನು ಸ್ವಾವಿುಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.


ದೀರ್ಘಶಾಂತಿಯಿಂದ ಪ್ರಭುವನ್ನೂ ಸಮ್ಮತಿಪಡಿಸಬಹುದು; ಮೃದುವಚನವು ಎಲುಬನ್ನು ಮುರಿಯುವದು.


ದೊರೆಯು ನಿನ್ನ ಮೇಲೆ ಸಿಟ್ಟುಗೊಂಡರೆ ಉದ್ಯೋಗವನ್ನು ಬಿಡಬೇಡ; ತಾಳ್ಮೆಯು ದೊಡ್ಡ ದೋಷಗಳನ್ನು ಅಡಗಿಸುತ್ತದಲ್ಲವೆ.


ಯೋವಾಬನು ಬರಲು ಆ ಸ್ತ್ರೀಯು - ನೀನು ಯೋವಾಬನೋ ಎಂದು ಅವನನ್ನು ಕೇಳಿದಳು. ಅವನು - ಹೌದು, ನಾನೇ ಎಂದು ಉತ್ತರಕೊಟ್ಟನು. ಆಕೆಯು - ನಿನ್ನ ದಾಸಿಯ ಮಾತನ್ನು ಕೇಳು ಅನ್ನಲು ಅವನು - ಕೇಳುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು