Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:27 - ಕನ್ನಡ ಸತ್ಯವೇದವು J.V. (BSI)

27 ನಿನ್ನ ದಾಸಿಯು ತಂದ ಈ ಕಾಣಿಕೆಯು ಸ್ವಾವಿುಯ ಸೇವಕರಿಗೆ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಿನ್ನ ದಾಸಿಯು ತಂದ ಈ ಕಾಣಿಕೆಯನ್ನು ಸ್ವಾಮಿಯು ತಮ್ಮ ಸೇವಕರಿಗೆ ಸಲ್ಲಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಿಮ್ಮ ದಾಸಿ ತಂದ ಈ ಕಾಣಿಕೆಯನ್ನು ಅಂಗೀಕರಿಸಿರಿ. ಅದು ತಮ್ಮ ಸೇವಕರಿಗೆ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಈಗ ನಾನು ನಿನಗಾಗಿ ಈ ಕೊಡುಗೆಗಳನ್ನು ತಂದಿದ್ದೇನೆ. ನಿನ್ನನ್ನು ಹಿಂಬಾಲಿಸುತ್ತಿರುವ ನಿನ್ನ ಸೇವಕರಿಗೆ ದಯವಿಟ್ಟು ಇವುಗಳನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:27
8 ತಿಳಿವುಗಳ ಹೋಲಿಕೆ  

ದಾವೀದನು ಚಿಕ್ಲಗಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ - ಇಗೋ, ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ ಎಂದು ಹೇಳಿಸಿದನು.


ದೇವರು ನನಗೆ ಕೃಪೆಯನ್ನು ಮಾಡಿದ್ದರಿಂದ ನನಗೆ ಸಮೃದ್ಧಿಯುಂಟು; ಆದಕಾರಣ ನಾನು ಸಮರ್ಪಿಸುವ ಕಾಣಿಕೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು ಎಂದು ಹೇಳಿ ಏಸಾವನನ್ನು ಬಲವಂತಮಾಡಿದ್ದರಿಂದ ಅವನು ಆ ಕಾಣಿಕೆಯನ್ನು ತೆಗೆದುಕೊಂಡನು.


ಅನಂತರ ಅವನು ತನ್ನ ಪರಿವಾರದವರೊಡನೆ ಹಿಂದಿರುಗಿ ದೇವರ ಮನುಷ್ಯನ ಹತ್ತಿರ ಹೋಗಿ ಅವನ ಮುಂದೆ ನಿಂತು - ಇಸ್ರಾಯೇಲ್ ದೇಶದಲ್ಲಿರುವ ದೇವರ ಹೊರತಾಗಿ ಲೋಕದಲ್ಲಿ ಬೇರೆ ದೇವರು ಇರುವದೇ ಇಲ್ಲವೆಂಬದು ಈಗ ನನಗೆ ಗೊತ್ತಾಯಿತು; ನೀನು ದಯವಿಟ್ಟು ಕಾಣಿಕೆಯನ್ನು ಅಂಗೀಕರಿಸಬೇಕು ಎಂದು ಹೇಳಿದನು.


ಹೀಗಿರಲಾಗಿ ಈ ಸಹೋದರರು ಮುಂದಾಗಿ ನಿಮ್ಮ ಬಳಿಗೆ ಬಂದು ಕೊಡುತ್ತೇವೆಂದು ನೀವು ಮೊದಲು ಹೇಳಿದ ಧರ್ಮದ್ರವ್ಯವನ್ನು ಸಿದ್ಧಪಡಿಸಬೇಕೆಂಬದಾಗಿ ಇವರನ್ನು ಬೇಡಿಕೊಳ್ಳುವದು ಅವಶ್ಯವೆಂದು ನನಗೆ ತೋಚಿತು. ಹೀಗೆ ಆ ಹಣವು ಸುಲಿಗೆಯಂತೆ ಬಾರದೆ ಧರ್ಮಾರ್ಥವಾಗಿಯೇ ಸಿದ್ಧವಾಗುವದು.


ಅರಸನು ಚೀಬನನ್ನು - ಇವುಗಳನ್ನು ಯಾಕೆ ತಂದಿ ಎಂದು ಕೇಳಲು ಅವನು - ಕತ್ತೆಗಳನ್ನು ಅರಸನ ಮನೆಯವರು ಸವಾರಿಮಾಡುವದಕ್ಕಾಗಿಯೂ ಹಣ್ಣು ರೊಟ್ಟಿಗಳನ್ನು ಆಳುಗಳು ತಿನ್ನುವದಕ್ಕಾಗಿಯೂ ದ್ರಾಕ್ಷಾರಸವನ್ನು ಅರಣ್ಯದಲ್ಲಿ ದಣಿದವರು ಕುಡಿಯುವದಕ್ಕಾಗಿಯೂ ತಂದಿದ್ದೇನೆ ಎಂದು ಉತ್ತರಕೊಟ್ಟನು.


ಬೇಗನೆ ಒಂದು ಕತ್ತೆಯನ್ನು ಹತ್ತಿ ತನ್ನ ಐದು ಮಂದಿ ದಾಸಿಯರ ಸಹಿತವಾಗಿ ದಾವೀದನ ಸೇವಕರ ಜೊತೆಯಲ್ಲಿ ಹೊರಟುಹೋಗಿ ಅವನ ಹೆಂಡತಿಯಾದಳು.


ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.


ಕಾಣಿಕೆಯು ಅನುಕೂಲತೆಗೂ ಶ್ರೀಮಂತರ ಸಾನ್ನಿಧ್ಯಪ್ರವೇಶಕ್ಕೂ ಸಾಧನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು