Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:31 - ಕನ್ನಡ ಸತ್ಯವೇದವು J.V. (BSI)

31 ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿತೀರಿಸಿದ್ದರಿಂದುಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆತನು ನಿನ್ನನ್ನು ಮಹಾಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿ ತೀರಿಸಿದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವುದಿಲ್ಲ. ಆತನೇ ನಿನ್ನನ್ನು ಮಹಾ ಪದವಿಗೆ ತರುವಾಗ ನಿನ್ನ ದಾಸಿಯಾದ ನನ್ನನ್ನು ಮರೆತುಬಿಡಬೇಡ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆಗ ನಿರಪರಾಧಿಯ ರಕ್ತವನ್ನು ಸುರಿಸಿ ಸೇಡುತೀರಿಸಿಕೊಂಡದ್ದಕ್ಕಾಗಿ ವಿಷಾದ, ಪಶ್ಚಾತ್ತಾಪಗಳಿಗೆ ಕಾರಣವಿರುವುದಿಲ್ಲ. ಸರ್ವೇಶ್ವರ ನಿಮ್ಮನ್ನು ಮಹಾಪದವಿಗೆ ಏರಿಸುವಾಗ ನಿಮ್ಮ ದಾಸಿಯಾದ ನನ್ನನ್ನು ಮರೆತುಬಿಡಬೇಡಿ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ನಿರಪರಾಧಿಗಳ ರಕ್ತವನ್ನು ಸುರಿಸಿದ ಅಪರಾಧಕ್ಕೆ ನೀನು ಗುರಿಯಾಗುವುದಿಲ್ಲ; ನೀನು ಆ ಬಲೆಗೂ ಬೀಳುವುದಿಲ್ಲ. ನೀನು ಆ ಮಹಾಪದವಿಗೆ ಬಂದಾಗ ನನ್ನನ್ನು ಮರೆತುಬಿಡಬೇಡ” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:31
13 ತಿಳಿವುಗಳ ಹೋಲಿಕೆ  

ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ಉಪಕಾರ ಮಾಡಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ಮಾಂಸ ತಿನ್ನುವದನ್ನಾಗಲಿ ದ್ರಾಕ್ಷಾರಸ ಕುಡಿಯುವದನ್ನಾಗಲಿ ನಿನ್ನ ಸಹೋದರನಿಗೆ ಅಡ್ಡಿಯನ್ನುಂಟುಮಾಡುವ ಬೇರೆ ಯಾವದನ್ನಾಗಲಿ ಬಿಟ್ಟುಬಿಡುವದೇ ಒಳ್ಳೇದು.


ಯೇಸುವೇ, ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಸಿಕೋ ಅಂದನು.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಪ್ರಕಾಶಿಸು.


ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆ ಮಾಡುವ ದೇವರು; ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.


ಯೆಹೋವನು ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗನುಸಾರವಾದ ಫಲವನ್ನು ಕೊಡುವನು. ಆತನು ಈಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿ ಕೊಟ್ಟಿದ್ದರೂ ನೀನು ಯೆಹೋವನ ಅಭಿಷಿಕ್ತನೆಂದು ನಾನು ನಿನ್ನ ಮೇಲೆ ಕೈಹಾಕಲಿಲ್ಲ.


ಅವರು ಕರ್ಮೆಲಿನಲ್ಲಿದ್ದ ಅಬೀಗೈಲಳ ಬಳಿಗೆ ಹೋಗಿ ಆಕೆಗೆ - ದಾವೀದನು ನಿನ್ನನ್ನು ತನಗೆ ಹೆಂಡತಿಯಾಗುವದಕ್ಕೆ ಕರಕೊಂಡು ಬರಬೇಕೆಂದು ನಮ್ಮನ್ನು ಕಳುಹಿಸಿದ್ದಾನೆ ಅಂದಾಗ


ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ನನ್ನನ್ನು ತಡೆದ ನೀನೂ ನಿನ್ನ ಬುದ್ಧಿಯೂ ಸ್ತೋತ್ರಾರ್ಹವೇ ಸರಿ.


ಯೆಹೋವನು ನ್ಯಾಯಾಧಿಪತಿಯಾಗಿ ನವ್ಮಿುಬ್ಬರ ವ್ಯಾಜ್ಯವನ್ನು ತೀರಿಸಲಿ; ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಗೆ ತಪ್ಪಿಸಲಿ ಎಂದು ಹೇಳಿದನು.


ಯೆಹೋವನು ನನ್ನ ಸ್ವಾವಿುಯಾದ ನಿನಗೆ ವಾಗ್ದಾನ ಮಾಡಿದ ಎಲ್ಲಾ ಸೌಭಾಗ್ಯವನ್ನು ದಯಪಾಲಿಸಿ ನಿನ್ನನ್ನು ಇಸ್ರಾಯೇಲ್ ಪ್ರಭುವನ್ನಾಗಿ ಮಾಡಿದ ಮೇಲೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು