Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:34 - ಕನ್ನಡ ಸತ್ಯವೇದವು J.V. (BSI)

34 ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಾಯೇಲ್‍ದೇವರಾದ ಯೆಹೋವನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿದ್ದಿಲ್ಲ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಿನಗೆ ಕೇಡು ಮಾಡದಂತೆ ನನ್ನನ್ನು ತಡೆದ ಇಸ್ರಾಯೇಲರ ದೇವರಾದ ಯೆಹೋವನ ಆಣೆ, ನೀನು ಬೇಗನೇ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ನಿಜವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ನಿನಗೆ ಕೇಡುಮಾಡದಂತೆ ನನ್ನನ್ನು ತಡೆದ ಇಸ್ರಯೇಲ್ ದೇವರಾದ ಸರ್ವೇಶ್ವರನ ಆಣೆ, ನೀನು ಬೇಗನೆ ಬಂದು ನನ್ನನ್ನು ಎದುರುಗೊಳ್ಳದಿದ್ದರೆ ಖಂಡಿತವಾಗಿ ನಾಳೆ ಬೆಳಗಾಗುವಷ್ಟರಲ್ಲಿ ನಾಬಾಲನವರಲ್ಲಿ ಒಬ್ಬ ಗಂಡಸಾದರೂ ಖಂಡಿತವಾಗಿ ಉಳಿಯುತ್ತಿರಲಿಲ್ಲ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಇಸ್ರೇಲರ ದೇವರಾದ ಯೆಹೋವನಾಣೆ, ನೀನು ನನ್ನನ್ನು ಸಂಧಿಸಲು ಬೇಗನೆ ಬರದಿದ್ದರೆ ನಾಳೆ ಹೊತ್ತಾರೆಯ ವೇಳೆಗೆ ನಾಬಾಲನ ಕುಟುಂಬದಲ್ಲಿ ಒಬ್ಬನೂ ಜೀವಸಹಿತ ಉಳಿಯುತ್ತಿರಲಿಲ್ಲ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:34
8 ತಿಳಿವುಗಳ ಹೋಲಿಕೆ  

ಸ್ವಾಮೀ, ನೀನು ಸ್ವಹಸ್ತದಿಂದ ಮುಯ್ಯಿತೀರಿಸಿ ರಕ್ತಾಪರಾಧಕ್ಕೆ ಗುರಿಯಾಗದಂತೆ ಯೆಹೋವನು ನಿನ್ನನ್ನು ಕಾಪಾಡಿದ್ದಾನೆ. ಯೆಹೋವನ ಆಣೆ, ನಿನ್ನ ಜೀವದಾಣೆ, ನಿನ್ನ ವಿರೋಧಿಗಳೂ ನಿನಗೆ ಕೇಡು ಬಗೆಯುವವರೂ ನಾಬಾಲನ ಗತಿಯನ್ನು ಹೊಂದಲಿ.


ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೇಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ ತನ್ನ ಸೇವಕರಿಗೆ -


ಸೌಲನು ಬೆಳಗಿನ ಜಾವದಲ್ಲಿ ತನ್ನ ಜನರನ್ನು ಮೂರು ಪಾಲು ಮಾಡಿ ಅಮ್ಮೋನಿಯರ ಪಾಳೆಯದೊಳಕ್ಕೆ ನುಗ್ಗಿ ಅವರನ್ನು ಮಧ್ಯಾಹ್ನದವರೆಗೆ ಹತಮಾಡಿದನು; ಉಳಿದವರನ್ನು ಒಬ್ಬರನ್ನೊಬ್ಬರು ಕೂಡದ ಹಾಗೆ ಚದರಿಸಿಬಿಟ್ಟನು.


ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.


ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿ - ನಿನ್ನ ಸೇವಕರನ್ನು ಕೈಬಿಡಬೇಡ; ಬೇಗ ಬಂದು ಸಹಾಯಮಾಡು; ನಮಗೆ ವಿರೋಧವಾಗಿ ಕೂಡಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸು ಎಂದು ಬೇಡಿಕೊಂಡರು.


ಅದಕ್ಕೆ ದೇವರು - ನೀನು ಇದನ್ನು ಯರ್ಥಾರ್ಥಮನಸ್ಸಿನಿಂದ ಮಾಡಿದೆ ಎಂಬುದನ್ನು ನಾನು ಬಲ್ಲೆ; ಆದಕಾರಣ ನಾನಂತೂ ನೀನು ನನಗೆ ವಿರುದ್ಧವಾಗಿ ಪಾಪಮಾಡದಂತೆ ನಿನ್ನನ್ನು ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿ - ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿತೀರಿಸಿದಂಥ ಯೆಹೋವನಿಗೆ ಸ್ತೋತ್ರವಾಗಲಿ. ಆತನು ನನ್ನನ್ನು ಕೆಟ್ಟತನಕ್ಕೆ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದನಲ್ಲಾ ಅಂದನು. ಅನಂತರ ಅವನು ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು