Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 25:36 - ಕನ್ನಡ ಸತ್ಯವೇದವು J.V. (BSI)

36 ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದಿದ್ದ ಕಾರಣ ಈಕೆಯು ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅಬೀಗೈಲಳು ನಾಬಾಲನ ಬಳಿಗೆ ಹಿಂದಿರುಗಿ ಹೋದಳು. ನಾಬಾಲನು ಮನೆಯಲ್ಲಿಯೇ ಇದ್ದನು. ನಾಬಾಲನು ರಾಜನಂತೆ ತಿನ್ನುತ್ತಾ ಕುಡಿದು ಮತ್ತನಾಗಿದ್ದನು. ಆದ್ದರಿಂದ ಅಬೀಗೈಲಳು ಮಾರನೆಯ ದಿನದ ಹೊತ್ತಾರೆಯವರೆಗೆ ನಾಬಾಲನಿಗೆ ಏನನ್ನೂ ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 25:36
27 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ; ಇವುಗಳಿಂದ ಓಲಾಡುವವನು ಜ್ಞಾನಿಯಲ್ಲ.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ - ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ; ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೋ? ಧೈರ್ಯದಿಂದಿರಿ, ಶೂರರಾಗಿರಿ ಎಂದು ಹೇಳಿದ್ದನು.


ಎರಡು ವರುಷಗಳಾದನಂತರ ಅಬ್ಷಾಲೋಮನು ಒಂದು ದಿನ ಎಫ್ರಾಯೀವಿುನ ಬಳಿಯಲ್ಲಿರುವ ಬಾಳ್ ಹಾಚೋರಿನಲ್ಲಿ ಕುರಿಗಳ ಉಣ್ಣೆಯನ್ನು ಕತ್ತರಿಸುವಾಗ ಎಲ್ಲಾ ರಾಜಪುತ್ರರನ್ನು ಔತಣಕ್ಕೆ ಕರೆದನು.


ನೀವು ಮುಂದೆ ನಡೆಯಿರಿ, ನಾನು ಹಿಂದೆ ಬರುತ್ತೇನೆ ಎಂದು ಹೇಳಿ ಅವರನ್ನು ಕಳುಹಿಸಿದಳು; ಗಂಡನಾದ ನಾಬಾಲನಿಗೆ ಏನೂ ತಿಳಿಸಲಿಲ್ಲ.


ದುಂದೌತಣ ಕುಡಿಕತನಗಳಲ್ಲಿಯಾಗಲಿ ಕಾಮ ವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚುಗಳಲ್ಲಿಯಾಗಲಿ ಕಾಲಕಳೆಯದೆ ಹಗಲು ಹೊತ್ತಿಗೆ ತಕ್ಕಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.


ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಹೊಗಿಸಿದಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತೇನೆ. ಆದದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರ್ರಿ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ನಿಮ್ಮ ವಿಷಯದಲ್ಲಿ ಜಾಗರೂಕರಾಗಿರ್ರಿ. ಅತಿಭೋಜನದ ಮದಡಿನಿಂದಲೂ ಅಮಲಿನಿಂದಲೂ ಪ್ರಪಂಚದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿವಸವು ನಿಮ್ಮ ಮೇಲೆ ಉರ್ಲಿನಂತೆ ಫಕ್ಕನೆ ಬಂದೀತು.


ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನಂದರೆ - ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ ನಿನ್ನ ಅಣ್ಣತಮ್ಮಂದಿರನ್ನಾಗಲಿ ನಿನ್ನ ಬಂಧುಬಾಂಧವರನ್ನಾಗಲಿ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವದು.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ವ್ಯಭಿಚಾರದ್ರಾಕ್ಷಾರಸಮದ್ಯಗಳು ಬುದ್ಧಿಯನ್ನು ಕೆಡಿಸುತ್ತವೆ.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ಕುಡುಕರಾದ ಎಫ್ರಾಯೀಮ್ಯರ ಮಹಿಮೆಯ ಕಿರೀಟವು ಕಾಲಿನಿಂದ ತುಳಿಯಲ್ಪಡುವದು.


ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು ಸಂಜೆಯಾದ ಮೇಲೆಯೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಪಾಡು ಏನು ಹೇಳಲಿ!


ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು; ಧನವು ಎಲ್ಲವನ್ನೂ ಒದಗಿಸಿಕೊಡುವದು.


ದಯಾಳುವಾಗಿ ಧನಸಹಾಯಮಾಡುವವನೂ ತನ್ನ ಕಾರ್ಯಗಳನ್ನು ನೀತಿಯಿಂದ ನಡಿಸುವವನೂ ಭಾಗ್ಯವಂತನು.


ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಮಂದಿ ಅರಸರ ಸಂಗಡ ಮದ್ಯಪಾನಮಾಡಿ ಮತ್ತನಾಗಿ ಡೇರೆಯಲ್ಲಿ ಕೂತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.


ಮರುದಿನ ಅಮಲಿಳಿದನಂತರ ಈಕೆಯು ಈ ವರ್ತಮಾನವನ್ನು ಅವನಿಗೆ ತಿಳಿಸಲಾಗಿ ಅವನ ಹೃದಯವು ನಿಂತುಹೋಯಿತು, ಅವನು ಸ್ತಬ್ಧನಾದನು.


ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು